
ಬೆಂಗಳೂರು:ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರ ಸ್ಥಾನಕ್ಕೆ ಸದ್ಯ ಯಾವುದೇ ಸಮಸ್ಯೆಗಳಿಲ್ಲ.ಉಪ ಚುನಾವಣೆ ಬಳಿಕ ಕಾಂಗ್ರೆಸ್ ಸದಸ್ಯತ್ವ ಸ್ಥಾನ 34ಕ್ಕೆ ಏರಿಕೆ ಆಗಿದೆ. ಆದರೆ ಸಭಾಪತಿ ಸ್ಥಾನವನ್ನು ಅಲಂಕರಿಸುವಷ್ಟು ಬಹುಮತ ಲಭ್ಯವಾಗಿಲ್ಲ.ಮೇಲ್ಮನೆಯಲ್ಲಿ ಎನ್‌ಡಿಎ ಕೂಟವಾಗಿರುವ ಜೆಡಿಎಸ್ ಸದ್ಯ 8 ಸ್ಥಾನಗಳನ್ನು ಹೊಂದಿದ್ದು, ಬಿಜೆಪಿ 30 ಸ್ಥಾನಗಳನ್ನು ಪಡೆದಿದೆ. ಇನ್ನು ಪಕ್ಷೇತರರೊಬ್ಬರು ಇದ್ದಾರೆ. ಮೈತ್ರಿ ಕೂಟ 38 ಸ್ಥಾನಗಳನ್ನು ಹೊಂದಿದ್ದರೆ, ಕಾಂಗ್ರೆಸ್ 34 ಸ್ಥಾನಗಳನ್ನು ಪಡೆದಿದೆ.ಕೋಟಾ ಶ್ರೀನಿವಾಸ ಪೂಜಾರಿ ಮತ್ತು ಜಗದೀಶ್ ಶೆಟ್ಟರ್ ಅವರು ರಾಜೀನಾಮೆ ನೀಡಿರುವುರಿಂದ 2 ಸ್ಥಾನಗಳು ಖಾಲಿ ಇವೆ.ಉಪ ಚುನಾವಣೆಯಲ್ಲಿ 2 ಸ್ಥಾನಗಳು ಕಾಂಗ್ರೆಸ್ ಪಾಲಾದರೂ ಆಗ ಸಂಖ್ಯಾ ಬಲ 36ಕ್ಕೆ ಜಿಗಿಯಲಿದೆ. ಆದರೂ, ಬಹುಮತ ಲಭ್ಯವಾಗುವುದಿಲ್ಲ. ಹಾಗಾಗಿ ಎನ್ಡಿಎ ಕೂಟದ ಬಲದಿಂದ ಸದ್ಯಕ್ಕೆ ಬಸವರಾಜ ಹೊರಟ್ಟಿ ಅವರು ಸಭಾಪತಿ ಸ್ಥಾನದಲ್ಲಿ ಮುಂದುವರಿಯಲು ಯಾವುದೇ ಸಮಸ್ಯೆ ಇಲ್ಲವಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 14 =
Remember me
