ಕೊಪ್ಪಳ:ನಟ್ಟಿರುಳಲ್ಲಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ 5 ಜನರು ಸಾವಿಗೀಡಾಗಿದ್ದು, ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕೊಪ್ಪಳ ಜಿಲ್ಲೆಯಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಕೊಪ್ಪಳ ಜಿಲ್ಲೆ ಯಲಬುರ್ಗಾ ತಾಲೂಕು ಭಾನಾಪುರ ಗ್ರಾಮದ ಬಳಿ ಅಪಘಾತವಾಗಿದ್ದು, ಯಲಬುರ್ಗಾದ ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ ಎಂಬವರು ಸೇರಿ ಅವರ ಕುಟುಂಬದ 5 ಜನರು ಸಾವಿಗೀಡಾಗಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮೂವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಬಿನ್ನಾಳ ಗ್ರಾಮದ ದೇವಪ್ಪ ಕೊಪ್ಪದ(62), ಮೃತರ ಸೊಸೆ ಗಿರಿಜಮ್ಮ(45), ಅಣ್ಣನ ಮಕ್ಕಳಾದ ಶಾಂತಮ್ಮ(35), ಪಾರ್ವತಮ್ಮ(32), ಸಂಬಂಧಿ ಕಸ್ತೂರಮ್ಮ(20) ಮೃತಪಟ್ಟವರು. ಚಾಲಕ ಹರ್ಷವರ್ಧನ, ಮಕ್ಕಳಾದ ಬಸವರಾಜ, ಪುಟ್ಟರಾಜ, ಭೂಮಿಕಾ ಗಾಯಗೊಂಡವರು.
ಇವರು ಸ್ಕಾರ್ಪಿಯೊ ವಾಹನದಲ್ಲಿ ಪ್ರಯಾಣಿಸುತ್ತಿದ್ದರು. ವಾಹನದಲ್ಲಿ ಇಬ್ಬರು ಮಕ್ಕಳು ಸೇರಿ ಒಟ್ಟು 9 ಜನ ಪ್ರಯಾಣಿಸುತ್ತಿದ್ದರು. ಇವರ ವಾಹನಕ್ಕೆ ಇನ್ನೊಂದು ವಾಹನ ಡಿಕ್ಕಿ ಹೊಡೆದು, ಚಾಲಕ ವಾಹನ ಸಹಿತ ಪರಾರಿಯಾಗಿದ್ದಾನೆ. ಇವರು ಕೊಪ್ಪಳದಲ್ಲಿ ಬರ್ತಡೇ ಪಾರ್ಟಿ ಮುಗಿಸಿಕೊಂಡು ಹೊರಟಿದ್ದರು. ಸಂಭ್ರಮದಲ್ಲಿದ್ದವರು ಸಾಮೂಹಿಕವಾಗಿ ಸಾವಿಗೀಡಾದಂತಾಗಿದೆ.
ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!

ಆ್ಯಂಬುಲೆನ್ಸ್ ಅಪಘಾತ ಪ್ರಕರಣ; ಗ್ರಾಮಸ್ಥರಿಂದ ಸಾಮೂಹಿಕವಾಗಿ ನಾಲ್ವರ ಅಂತಿಮಸಂಸ್ಕಾರ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − three =
Remember me
