ಉಡುಪಿ:ಇದು ಜೀವ ಉಳಿಸಲು ಹೋಗಿ ಪ್ರಾಣ ಕಳೆದುಕೊಂಡ ದುರಂತ. ದೂರದಿಂದ ಆ್ಯಂಬುಲೆನ್ಸ್ ಬರುತ್ತಿದ್ದ ಸದ್ದು ಕೇಳಿ ಟೋಲ್​ ಗೇಟ್​ನಲ್ಲಿದ್ದ ಮೂವರು ಆ್ಯಂಬುಲೆನ್ಸ್ ಸರಾಗವಾಗಿ ಹೋಗಲೆಂದು ಮಳೆಯಲ್ಲೇ ಹೊರಗೆ ಓಡಿ ಬಂದು ಬ್ಯಾರಿಕೇಡ್​​ಗಳನ್ನು ತೆಗೆದುಬಿಡುತ್ತಾರೆ.
ಅಷ್ಟರಲ್ಲೇ ವೇಗವಾಗಿ ಬಂದ ಆ್ಯಂಬುಲೆನ್ಸ್ ಚಾಲಕನ ನಿಯಂತ್ರಣ ತಪ್ಪಿ ಟೋಲ್​ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾಗುತ್ತದೆ. ಈ ಸಂದರ್ಭದಲ್ಲಿ ಮೂವರು ಟೋಲ್​ ಸಿಬ್ಬಂದಿಯ ಪೈಕಿ ಒಬ್ಬ ಆ್ಯಂಬುಲೆನ್ಸ್​ ಹೊಡೆತ ಹಾಗೂ ಗೋಡೆಯ ಮಧ್ಯೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದಾನೆ.
ಹೀಗೆ ಸಂಭವಿಸಿದ ಭೀಕರ ಅಪಘಾತಕ್ಕೆ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತಪಟ್ಟವರಲ್ಲಿ ಒಬ್ಬರು ಮಹಿಳೆ, ಇಬ್ಬರು ಪುರುಷರು. ಆ್ಯಂಬುಲೆನ್ಸ್​​ನಲ್ಲಿದ್ದ ರೋಗಿ ಸಾವಿಗೀಡಾಗಿದ್ದಾರೆ. ರೋಗಿ ಪತ್ನಿ, ಆ್ಯಂಬುಲೆನ್ಸ್​​ನಲ್ಲಿದ್ದ ಸಂಬಂಧಿ ಕೂಡ ಸಾವಿಗೀಡಾಗಿದ್ದಾರೆ. ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಟೋಲ್ ಗೇಟ್ ಬಳಿ ಈ ಭಯಂಕರ ಅಪಘಾತ ಸಂಭವಿಸಿದೆ.
ಆ್ಯಂಬುಲೆನ್ಸ್ ತೀವ್ರ ಅಸ್ವಸ್ಥರನ್ನು ಕರೆದುಕೊಂಡು ಹೊನ್ನಾವರದಿಂದ ಕುಂದಾಪುರಕ್ಕೆ ಹೊರಟಿತ್ತು. ಈ ಅಪಘಾತದ ದೃಶ್ಯ ಟೋಲ್​ಗೇಟ್​ನ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಘಟನಾ ಸ್ಥಳಕ್ಕೆ ಬೈಂದೂರು ಪೋಲಿಸರು ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಜೀವ ಉಳಿಸಲು ಹೋಗಿ ಪ್ರಾಣ ಕಳ್ಕೊಂಡ್ರು!: ಟೋಲ್​ ಗೇಟ್​ನಲ್ಲಿ ಆ್ಯಂಬುಲೆನ್ಸ್ ಪಲ್ಟಿ, ಮೂವರು ಸ್ಥಳದಲ್ಲೇ ಸಾವು..ವಿವರಗಳಿಗೆhttps://t.co/YaFZZchf1Jನೋಡಿpic.twitter.com/BSfvSzHsKp— Vijayavani (@VVani4U)July 20, 2022
ಜೀವ ಉಳಿಸಲು ಹೋಗಿ ಪ್ರಾಣ ಕಳ್ಕೊಂಡ್ರು!: ಟೋಲ್​ ಗೇಟ್​ನಲ್ಲಿ ಆ್ಯಂಬುಲೆನ್ಸ್ ಪಲ್ಟಿ, ಮೂವರು ಸ್ಥಳದಲ್ಲೇ ಸಾವು..ವಿವರಗಳಿಗೆhttps://t.co/YaFZZchf1Jನೋಡಿpic.twitter.com/BSfvSzHsKp
ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 + 5 =
Remember me
