ಹಾಸನ:ಕಾರುಗಳ ಮಧ್ಯೆ ಸಂಭವಿಸಿದ ಭೀಕರ ಅಪಘಾತದ ತೀವ್ರತೆಗೆ ಎರಡೂ ಕಾರುಗಳು ಭಾರಿ ಜಖಂಗೊಂಡಿದ್ದು, ರಾಜಕಾರಣಿಯ ಪುತ್ರ ಸೇರಿ ನಾಲ್ವರು ಗಾಯಗೊಂಡಿದ್ದಾರೆ. ಹಾಸನ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ.
ಹಾಸನದ ಬೇಲೂರು ತಾಲೂಕಿನ ಶಿವಯೋಗಿಪುರ ಗ್ರಾಮದ ಬಳಿ ಈ ಅಪಘಾತ ಸಂಭವಿಸಿದೆ. ಟೊಯೊಟೊ ಫಾರ್ಚೂನರ್ ಮತ್ತು ಟಾಟಾ ಇಂಡಿಕಾ ಕಾರುಗಳ ಮಧ್ಯೆ ಈ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ವಿಶಾಲ್‌ ಸುಜಯ್‌ ಕುಮಾರ್‌, ಮದನ್‌‌, ಮೋಹನ್, ಅನಿರುದ್ಧ ಎಂಬವರು ಗಾಯಗೊಂಡಿದ್ದಾರೆ. ಆ ಪೈಕಿ ಮೂವರ ಪರಿಸ್ಥಿತಿ ಗಂಭೀರವಾಗಿದೆ.
ಇದನ್ನೂ ಓದಿ:‘ಟಗರು ಪಲ್ಯ’ ಕ್ಯಾನ್ಸಲ್​; ಅಭಿಮಾನಿಗಳ ಒತ್ತಾಯದಿಂದ ಉಳಿಯಿತು ‘7 ಸ್ಟಾರ್ ಸುಲ್ತಾನ’ನ ಜೀವ!
ವಿಶಾಲ್‌ ಸುಜಯ್‌ ಕುಮಾರ್‌ ಚಿಕ್ಕಮಗಳೂರು ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅವರ ಪುತ್ರ. ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ತೀವ್ರತೆಗೆ ಎರಡೂ ಕಾರುಗಳು ಜಖಂಗೊಂಡಿವೆ. ಹಳೇಬೀಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಾತಿಗೆ ಬಲಿಯಾಯ್ತು ಎರಡು ಜೀವ!: ಮಗಳ ಕತ್ತು ಹಿಸುಕಿ ಕೊಂದ ತಂದೆ; ನೊಂದ ಪ್ರಿಯಕರ ಸಾವಿಗೆ ಶರಣು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 − 5 =
Remember me
