ಹಾವೇರಿ:ರಾಜ್ಯದಲ್ಲಿ ಇಂದು ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಹಾವೇರಿ ಜಿಲ್ಲೆ ರಾಣೆಬೆನ್ನೂರು ನಗರದ ಹೊರವಲಯದಲ್ಲಿನ ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ಈ ಅಪಘಾತ ಸಂಭವಿಸಿದೆ.
ಅಪಘಾತಕ್ಕೆ ಒಳಗಾದ ಕಾರುಗಳ ಪೈಕಿ ಒಂದು ಗುಜರಾತ್ ಮೂಲದ್ದಾಗಿದ್ದು, ಇನ್ನೊಂದು ಕೇರಳ ಮೂಲದ್ದಾಗಿದೆ. ಎರಡೂ ಕಾರುಗಳು ಮುಖಾಮುಖಿ ಡಿಕ್ಕಿಯಾಗಿದ್ದು ಗುಜರಾತ್​ನ ಕಾರಿನಲ್ಲಿದ್ದ ಮೂವರು ಹಾಗೂ ಕೇರಳದ ಕಾರಿನಲ್ಲಿದ್ದ ಒಬ್ಬರು ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಗುಜರಾತ್ ಮೂಲದ ದಿನೇಶ್ (38), ಲತೀಶ್​ (37), ಸುರೇಶ್ (39) ಮತ್ತು ಕೇರಳ ಮೂಲದ ಸಾಹಲ್ (37) ವರ್ಷ ಮೃತಪಟ್ಟವರು.
ಈ ಅಪಘಾತದಲ್ಲಿ ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಗಳುಗಳನ್ನು ರಾಣೆಬೆನ್ನೂರು ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹಾವೇರಿ ಪೋಲಿಸ್ ವರಿಷ್ಠಾಧಿಕಾರಿ ಹನುಮಂತರಾಯ್, ಎಎಸ್​​ಪಿ ವಿಜಯಕುಮಾರ್ ಮತ್ತು ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ರಾಣೆಬೆನ್ನೂರು ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.
ಬಾಲಿವುಡ್​ ಸ್ಟಾರ್​ಗಳಿಗೆ ಸವಾಲೆಸೆದ ರಾಮ್​ಗೋಪಾಲ್ ವರ್ಮಾ; ಭಾರತೀಯ ಚಿತ್ರರಂಗಕ್ಕೇ ಹೀಗೊಂದು ಪ್ರಪೋಸಲ್ ಇಟ್ರು!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four + one =
Remember me
