ಬೆಳಗಾವಿ:ಭೀಕರ ಅಪಘಾತವೊಂದರಲ್ಲಿ ತಂದೆ-ಮಗಳು ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ತಾಯಿಯ ಪರಿಸ್ಥಿತಿ ಗಂಭೀರವಾಗಿದ್ದು, ಚಿಂತಾಜನಕವಾಗಿದೆ.
ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಇಟಗಿ ಕ್ರಾಸ್​ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ. ಖಾನಾಪೂರ ತಾಲೂಕಿನ ಪಾರಿಶ್ವಾಡ ಗ್ರಾಮದ ಮಡಿವಾಳಯ್ಯ ಮಲ್ಲಯ್ಯ ಕಲ್ಮಠ (33), ಪುತ್ರಿ ತನುಶ್ರೀ (3) ಸ್ಥಳದಲ್ಲೇ ಸಾವಿಗೀಡಾಗಿದರು. ಪತ್ನಿ ಭಾಗ್ಯಶ್ರೀ (28) ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಹತ್ತಿರದ ಆಸ್ಪತ್ರೆಗೆ ಸಾಗಿಸಲಾಗಿದೆ.
ಪುತ್ರಿ ಹಾಗೂ ಪತ್ನಿಯನ್ನು ಕರೆದುಕೊಂಡು ಬೈಕ್​ನಲ್ಲಿ ಹೋಗುತ್ತಿದ್ದ ಮಡಿವಾಳಯ್ಯ ಮಲ್ಲಯ್ಯ ಕಲ್ಮಠ ಅವರ ಬೈಕ್​, ಮಾರ್ಗದಲ್ಲಿ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ತಂದೆ-ಮಗಳು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಅಂಗಡಿಯಲ್ಲಿ ಗ್ಯಾಸ್​ ಸಿಲಿಂಡರ್​ ಸ್ಫೋಟ; ಬಾಲಕಿ ಸೇರಿ ಇಬ್ಬರು ಜೀವಂತ ದಹನಗೊಂಡು ಸ್ಥಳದಲ್ಲೇ ಸಾವು!

ಬಿದ್ದಿದ್ದು ಒಂದೇ ಒಂದು ಬೇವಿನ ಮರ, ಉರುಳಿದ್ದು 12 ವಿದ್ಯುತ್ ಕಂಬಗಳು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + two =
Remember me
