ಮಂಡ್ಯ:ಮೈಸೂರು-ಬೆಂಗಳೂರು ದಶಪಥದಲ್ಲಿ ಆಗಾಗ ಅಪಘಾತಗಳು ಸಂಭವಿಸುತ್ತಿದ್ದು, ಇಂದು ಮತ್ತೊಂದು ಭಾರಿ ಅಪಘಾತ ಉಂಟಾಗಿದೆ. ಅಪಘಾತದ ತೀವ್ರತೆಗೆ ಕಾರು ಎರಡು ಸಲ ಪಲ್ಟಿಯಾಗಿದೆ. ಮಾತ್ರವಲ್ಲ ಐವರಿಗೆ ಗಾಯಗಳಾಗಿದ್ದು, ಇಬ್ಬರ ಪರಿಸ್ಥಿತಿ ಗಂಭೀರವಾಗಿದೆ.
ಮಂಡ್ಯ ಬಳಿಯ ಚಿಕ್ಕಮಂಡ್ಯ ಸಮೀಪ ಈ ಅಪಘಾತ ಸಂಭವಿಸಿದೆ. ಟಯರ್​ ಬರ್ಸ್ಟ್​ ಆಗಿ ಕಾರು ಅಪಘಾತಕ್ಕೀಡಾಗಿದ್ದು, ಎರಡು ಸಲ ಪಲ್ಟಿಯಾಗಿದೆ. ಅಪಘಾತದಲ್ಲಿ ಗಾಯಗೊಂಡವರು ಬೆಂಗಳೂರು ಮೂಲದವರು ಎಂಬುದು ತಿಳಿದು ಬಂದಿದೆ.
ಕಾರಿನಲ್ಲಿದ್ದವರು ಬೆಂಗಳೂರು ಕಡೆಯಿಂದ ಮೈಸೂರಿನತ್ತ ತೆರಳುತ್ತಿದ್ದರು. ಅಪಘಾತದಲ್ಲಿ ಗಾಯಗೊಂಡವರಿಗೆ ಮಂಡ್ಯ ಮಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಮಂಡ್ಯ ಸೆಂಟ್ರಲ್ ಠಾಣಾ ಪೊಲೀಸರು ಭೇಟಿ ನೀಡಿದ್ದಾರೆ. ಅಪಘಾತಕ್ಕೀಡಾದ ಕಾರನ್ನು ದಶಪಥದಿಂದ ತೆರವುಗೊಳಿಸಲಾಗಿದೆ.

ಸಿದ್ದರಾಮಯ್ಯ ಕುರಿತು ಹನಿಗವಿಯ ವರ್ಷದ ಹಿಂದಿನ ತಮಾಷೆ ನಿಜವಾಯಿತು!

ಮುಂದಿನ ಒಂದು ವರ್ಷದಲ್ಲಿನ ಉಚಿತ ಚಿಕಿತ್ಸೆಗೆಂದೇ 65 ಕೋಟಿ ರೂ. ಮೀಸಲು: ಅಮೃತ ಆಸ್ಪತ್ರೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 − 1 =
Remember me
