ಗದಗ:ಭೀಕರ ಅಪಘಾತವೊಂದು ಸಂಭವಿಸಿದ್ದು, 30ಕ್ಕೂ ಅಧಿಕ ಪ್ರಯಾಣಿಕರಿದ್ದ ಬಸ್ಸೊಂದು ಪಲ್ಟಿಯಾಗಿದೆ. ಗದಗ ಜಿಲ್ಲೆಯಯಲ್ಲಿ ಅಪಘಾತ ಸಂಭವಿಸಿದೆ. ಈ ಅಪಘಾತದಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ಉಂಟಾಗಿತ್ತು.
ಗದಗ ತಾಲೂಕಿನ ಹಿರೇಕೊಪ್ಪ ಹಾಗೂ ಹುಯಿಲಗೋಳ ಗ್ರಾಮದ ನಡುವಿನ ರಸ್ತೆಯಲ್ಲಿ ಈ ಅಪಘಾತ ಸಂಭವಿಸಿದೆ. ಸಾರಿಗೆ ಸಂಸ್ಥೆಯೊಂದಕ್ಕೆ ಸೇರಿದ ಈ ಬಸ್, ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೆ ಈಡಾಗಿದೆ. ಗದಗ ನಗರದಿಂದ ಬಳಗಾನೂರ ಗ್ರಾಮದತ್ತ ತೆರಳುತ್ತಿದ್ದಾಗ ಈ ಅಪಘಾತ ಸಂಭವಿಸಿದೆ.
ಅಪಘಾತ ನಡೆದ ಸಂದರ್ಭದಲ್ಲಿ ಬಸ್​​ನಲ್ಲಿ 30ಕ್ಕೂ ಅಧಿಕ ಪ್ರಯಾಣಿಕರಿದ್ದರು. ಅದಾಗ್ಯೂ ಅದೃಷ್ಟವಶಾತ್ ಯಾವುದೇ ಜೀವಹಾನಿ ಸಂಭವಿಸಿಲ್ಲ. ಆದರೆ ಹಲವರಿಗೆ ಗಾಯಗಳಾಗಿದ್ದು, ಗಾಯಾಳುಗಳನ್ನು ಗದಗದ ಜಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಗದಗ ಗ್ರಾಮೀಣ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.


ಮೋದಿ-ಯೋಗಿ ಬಿಟ್ಟರೆ ಇನ್ಯಾರು?; 25 ವಿಧಾನಸಭಾ ಕ್ಷೇತ್ರಗಳಲ್ಲಿ ಪ್ರಖರ ಹಿಂದೂವಾದಿಗಳೇ ಅಭ್ಯರ್ಥಿಗಳು!

ಯಂತ್ರಕ್ಕೆ ಸೀರೆ ಸಿಲುಕಿ ಪ್ರಾಣ ಕಳ್ಕೊಂಡ ಮಹಿಳೆ; ಗೋವಿನಜೋಳ ರಾಶಿ ಮಷಿನ್​ಗೆ ಸಿಕ್ಕಿ ದೇಹ ಛಿದ್ರ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine − 4 =
Remember me
