ಉತ್ತರ ಕನ್ನಡ:ಲಾರಿ ಹಾಗೂ ಕಾರುಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಉತ್ತರಕನ್ನಡ ಜಿಲ್ಲೆಯ ಅಂಕೋಲಾದ ಹೆಬ್ಬುಳ ಬಳಿ ರಾಷ್ಟ್ರೀಯ ಹೆದ್ದಾರಿ 63ರಲ್ಲಿ ಈ ಭೀಕರ ಅಪಘಾತ ಸಂಭವಿಸಿದೆ.
ಲಾರಿ ಮತ್ತು ವ್ಯಾಗನ್ ಆರ್ ಕಾರ್ ನಡುವೆ ಈ ಭೀಕರ ಅಪಘಾತ ಸಂಭವಿಸಿದ್ದು, ಸಂಜನಾ ಸುರೇಶ ರಾಯ್ಕರ್ (7) ಹಾಗೂ ಗುರುಪ್ರಸಾದ ಅಣ್ವೇಕರ (25) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾರಿನಲ್ಲಿದ್ದ ನಾಲ್ವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಅಂಕೋಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಕಾರು ಮಹಾರಾಷ್ಟ್ರದಿಂದ ಅಂಕೋಲಾದ ಅವರ್ಸಾ ಕಡೆ ಬರುತ್ತಿದ್ದು, ಲಾರಿ ಅಂಕೋಲಾದಿಂದ ಹುಬ್ಬಳ್ಳಿಗೆ ಕಡೆಗೆ ತೆರಳುತ್ತಿತ್ತು. ಲಾರಿ ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎನ್ನಲಾಗುತ್ತಿದೆ. ಅಂಕೋಲಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕೈಗೆತ್ತಿಕೊಂಡಿದ್ದಾರೆ.
ಅಮ್ಮಾ ತಾಯಿ.. ಭಿಕ್ಷೆ ನೀಡಿ.. ಸಂಬಳ ಕೊಟ್ಟಿಲ್ಲ, ದಯವಿಟ್ಟು ಭಿಕ್ಷೆ ಹಾಕಿ: ಹಬ್ಬದ ದಿನವೇ ಸಾರಿಗೆ ಸಂಸ್ಥೆ ನೌಕರರಿಂದ ಭಿಕ್ಷಾಟನೆ

ತಾನೇ ಸಾಕಿದ್ದ ಹಸುವಿಗೆ ಬಲಿಯಾದ ರೈತ, ಹೊಟ್ಟೆಯ ಭಾಗಕ್ಕೆ ಬಲವಾದ ತಿವಿತ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × five =
Remember me
