ಚಿಕ್ಕಮಗಳೂರು:ವೇಗವಾಗಿ ಚಲಿಸುತ್ತಿದ್ದ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ನಿಂತಿದ್ದ ಎರಡು ಕಾರುಗಳ ಮಧ್ಯೆ ಧೂಳೆಬ್ಬಿಸಿಕೊಂಡು ಸಾಗಿ ಭಯಂಕರ ಅಪಘಾತವೊಂದು ಸಂಭವಿಸಿದೆ. ಕಾರು ನುಗ್ಗಿದ ರಭಸಕ್ಕೆ ಭಾರಿ ಧೂಳೆದಿದ್ದು, ಸುತ್ತಮುತ್ತಲಿದ್ದ ಜನರು ಬೆಚ್ಚಿ ಬಿದ್ದಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಕೃಷ್ಣಾಪುರ ಬಳಿ ಈ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಎರಡು ಕಾರುಗಳು ಬಹುತೇಕ ಜಖಂಗೊಂಡಿವೆ. ಕಾರು ನುಗ್ಗಿ ಸಂಭವಿಸಿದ ಅಪಘಾತದ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.
ಕಾರು ಸಾಗಿದ ದಾರಿಯಲ್ಲಿ ಆ ಸಮಯದಲ್ಲಿ ಯಾರೂ ಇಲ್ಲದ್ದರಿಂದ ಅದೃಷ್ಟವಶಾತ್ ಭಾರಿ ಸಾವು-ನೋವು ತಪ್ಪಿದೆ. ಆದರೆ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂಡಿಗೆರೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಭೀಕರ ಅಪಘಾತ: 2 ಕಾರುಗಳ ಮಧ್ಯೆ ಧೂಳೆಬ್ಬಿಸಿ ಸಾಗಿದ ಕಾರು; ಬೆಚ್ಚಿ ಬಿದ್ದ ಜನರು..ವಿವರಗಳಿಗೆhttps://t.co/YaFZZbZDD9ನೋಡಿpic.twitter.com/XtdC2dTpS0
— Vijayavani (@VVani4U)February 19, 2022

ಬರೀ ಚಿಲ್ಲರೆ ಹಣದಲ್ಲೇ ಸ್ಕೂಟರ್ ಖರೀದಿಸಿದ ಭೂಪ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × four =
Remember me
