
ಬೆಂಗಳೂರು:ಕೃಷಿ, ರೇಷ್ಮೆ ಮತ್ತು ತೋಟಗಾರಿಕಾ ಬೆಳೆ ಸೇರಿದಂತೆ ಬೆಳೆ ನಷ್ಟವಾಗಿರುವ 30,24,795 ರೈತರಿಗೆ ತಲಾ 2 ಸಾವಿರ ರೂಗಳಂತೆ 573.28 ಕೋಟಿ ರೂ ಪರಿಹಾರ ಪಾವತಿ ಮಾಡಲಾಗಿದೆ ಎಂದು ಮೇಲ್ಮನೆಯಲ್ಲಿ ಕೃಷಿ ಸಚಿವ ಚಲುವರಾಯ ಸ್ವಾಮಿ ತಿಳಿಸಿದ್ದಾರೆ.ಜೆಡಿಎಸ್‌ನ ಟಿ.ಎ.ಶರವಣ ಕೇಳಿದ ಪ್ರಶ್ನೆಗೆ ಉತ್ತರಿಸಿ, 511208 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕೆ ಬೆಳೆ ಹಾನಿಯಾಗಿದ್ದು, ಬರಪರಿಹಾರಕ್ಕೆ ಕೇಂದ್ರಕ್ಕೆ ಸಿಎಂ ಮನವಿ ಸಲ್ಲಿಸಿದ್ದಾರೆ. ನಾನು ದೆಹಲಿಗೆ ನಾಲ್ಕೈದು ಬಾರಿ ಹೋಗಿ ಮನವಿ ಸಲ್ಲಿಸಿದ್ದೇವೆ. ಆದರೆ ಕೇಂದ್ರದಿಂದ ನಮಗೆ ಯಾವುದೇ ಪರಿಹಾರ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.ಎನ್‌ಡಿಆರ್‌ಎ್ ಮಾರ್ಗಸೂಚಿಯಡಿ ಪರಿಹಾರ ನಿಗದಿ ಮಾಡಲಾಗುವುದು. ಮಾರ್ಗಸೂಚಿ ಪರಿಷ್ಕರಿಸುವಂತೆ ನಾವು ಮನವಿ ಮಾಡಿದ್ದೇವೆ. ಕೇಂದ್ರ ಸರ್ಕಾರದಿಂದ ಹಣ ಬಂದ ಕೂಡಲೆ ಉಳಿದ ರೈತರಿಗೂ ಪರಿಹಾರ ನೀಡಲಾಗುವುದು ಎಂದರು.
ಕೇಂದ್ರದ ಕಡೆಗೆ ಬೆರಳು ತೋರಿಸಬೇಡಿಏನೇ ಕೇಳಿದರೂ ನೀವು ಕೇಂದ್ರದ ಕಡೆಗೆ ಬೆರಳು ತೋರಿಸುತ್ತಿದ್ದೀರಿ. ಹಾಗಾದರೆ ನಿಮ್ಮ ಜವಬ್ದಾರಿ ಏನು? ಬರದಿಂದಾಗಿ ರೈತರು ತೀವ್ರ ಕಷ್ಟದಲ್ಲಿದ್ದಾರೆ. ಆದ್ದರಿಂದ ರಾಜ್ಯ ಸರ್ಕಾರ ರೈತರಿಗೆ ಪರಿಹಾರ ನೀಡಬೇಕು ಎಂದು ಸದಸ್ಯ ಟಿ.ಎ.ಶರವಣ ಒತ್ತಾಯಿಸಿದರು.ತೋಟಗಾರಿಕಾ ಸಚಿವರಿಗೆ ನಾನು ಪ್ರಶ್ನೆ ಕೇಳಿದಾಗಲೆಲ್ಲ ಅವರು ಸರಿಯಾಗಿ ಉತ್ತರಿಸಿಲ್ಲ. ಸುಮ್ಮನೆ ಏನೋ ಒಂದು ಉತ್ತರ ಕೊಟ್ಟರೆ ಹೇಗೆ? ಎಂದು ಆಕ್ರೋಶ ವ್ಯಕ್ತಪಡಿಸಿದರು.
ಭೂ ಸಂತ್ರಸ್ತರಿಗೆ ಉದ್ಯೋಗಕೊಡಿಸಲು ಕ್ರಮ: ಎಂ.ಬಿ.ಪಾಟೀಲ್ಆರ್ ಆಂಡ್ ಆರ್ ನೀತಿಯ ಪ್ರಕಾರ ಭೂಮಿ ಕಳೆದುಕೊಂಡ ಭೂಮಿಗೆ ಉದ್ಯೋಗ ನೀಡಬೇಕೆಂಬ ನಿಯಮ ಇದೆ. ಈ ಬಗ್ಗೆ ಕ್ರಮ ಜರುಗಿಸಲಾಗುವುದು ಎಂದು ಕೈಗಾರಿಕೆ ಸಚಿವ ಎಂ ಬಿ ಪಾಟೀಲ್ ತಿಳಿಸಿದ್ದಾರೆ.ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿ ಜಿಲ್ಲೆಯ ಎಸ್‌ಇಜೆಡ್ ಅಡಿ ಭೂಮಿ ಕಳೆದುಕೊಂಡಿರುವವರಿಗೆ ಉದ್ಯೋಗ ನೀಡುವಲ್ಲಿ ವಿಫಲವಾಗಿದೆ. ಭೂಮಿ ಕಳೆದುಕೊಂಡಿರುವವರಿಗೆ ಉದ್ಯೋಗ ನೀಡಿಲ್ಲ ಎನ್ನುವ ಬಗ್ಗೆ ಕಾಂಗ್ರೆಸ್‌ನ ಮಂಜುನಾಥ ಭಂಡಾರಿ ಪ್ರಶ್ನೆಗೆ ಉತ್ತರಿಸಿದರು.ಆ ಭಾಗದಲ್ಲಿ ಕೇಂದ್ರ ಸರ್ಕಾರದ ವ್ಯಾಪ್ತಿಯ ಗೇಯ್ಲ್ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ. ನಮ್ಮ ರಾಜ್ಯದ ನಿಯಮ ಕೇಂದ್ರಕ್ಕೆ ಅನ್ವಯಿಸುವುದಿಲ್ಲ. ಆದರೂ ಈ ಬಗ್ಗೆ ಚರ್ಚೆ ನಡೆಸಿ ಉದ್ಯೋಗ ದೊರಕಿಸುವ ಬಗ್ಗೆ ಪ್ರಯತ್ನ ಮಾಡಲಾಗುವುದು ಎಂದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:one × two =
Remember me
