ಬೆಂಗಳೂರು: ರಾಜ್ಯ ತೋಟಗಾರಿಕಾ ಇಲಾಖೆಯಲ್ಲಿ ಖಾಲಿ ಇರುವ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಹುದ್ದೆಗೆ ಪರೀಕ್ಷೆ ನಡೆದು 5 ತಿಂಗಳು ಕಳೆದರೂ ಅಂತಿಮ ಆಯ್ಕೆ ಪಟ್ಟಿ ಪ್ರಕಟಗೊಂಡಿಲ್ಲ. ಸರ್ಕಾರದ ಈ ವಿಳಂಬ ಧೋರಣೆಯಿಂದ ತೋಟಗಾರಿಕಾ ವಿಷಯದಲ್ಲಿ ಅಧ್ಯಯನ ನಡೆಸಿದ ನೂರಾರು ಅಭ್ಯರ್ಥಿಗಳಿಗೆ ನಿರುದ್ಯೋಗ ಸಮಸ್ಯೆ ಉಲ್ಬಣಿಸಿದೆ.
ಸರ್ಕಾರದಿಂದ ಆದೇಶ ಬಂದ ಬಳಿಕ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆಯಲಿದೆ. ಸರ್ಕಾರದ ಸೂಚನೆ ಮೇರೆಗೆ ಮುಂದಿನ ಕ್ರಮ ಕೈಗೊಳ್ಳಲಾಗುವುದು.| ಎಂ.ಆರ್. ಚಂದ್ರಶೇಖರ್ತೋಟಗಾರಿಕೆ ಇಲಾಖೆ ಉಪನಿರ್ದೇಶಕ
ಕರ್ನಾಟಕ ಲೋಕಸೇವಾ ಆಯೋಗವು ಅಧಿಸೂಚನೆ ಹೊರಡಿಸಿದ ಬಳಿಕ ತೋಟ ಗಾರಿಕಾ ಇಲಾಖೆಯಲ್ಲಿ ಖಾಲಿಯಿದ್ದ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಹುದ್ದೆಗೆ 2019 ಡಿಸೆಂಬರ್​ನಲ್ಲಿ ಪರೀಕ್ಷೆ ನಡೆಸಲಾಗಿತ್ತು. ಬಳಿಕ, ತಾತ್ಕಾಲಿಕ ನೇಮಕಾತಿ ಆಯ್ಕೆಪಟ್ಟಿ ಪ್ರಕಟಿಸಿ ಅಧಿಕಾರಿಗಳು ಸುಮ್ಮನಾಗಿದ್ದಾರೆ.
8 ಹುದ್ದೆಗೆ 400ಕ್ಕೂ ಅಧಿಕ ಅರ್ಜಿ ತೋಟ ಗಾರಿಕಾ ವಿಷಯದಲ್ಲಿ ಬಿಎಸ್​ಸಿ ಹಾಗೂ ಎಂಎಸ್​ಸಿಯಲ್ಲಿ ಪದವಿ ಪಡೆದವರು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಹುದ್ದೆ ನೇಮಕಾತಿ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹ ರಾಗಿರುತ್ತಾರೆ. ರಾಜ್ಯಾದ್ಯಂತ 8 ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಹುದ್ದೆ ಖಾಲಿಯಿದ್ದು, 400ಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದ್ದಾರೆ. ಇಷ್ಟೊಂದು ಅರ್ಜಿಗಳು ಬಂದಿ ದ್ದರೂ ಅಂತಿಮ ಆಯ್ಕೆ ಪಟ್ಟಿ ಪ್ರಕಟಿಸಲು ಮೀನ-ಮೇಷ ಎಣಿಸುತ್ತಿರುವ ಸರ್ಕಾರದ ನಡೆ ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಪ್ರಭಾವಿಗಳು ತಮಗೆ ಬೇಕಾದ ಅಭ್ಯರ್ಥಿಗಳನ್ನು ನೇಮಿಸಲು ಅಧಿಕಾರಿಗಳ ಮೇಲೆ ಒತ್ತಡ ಹಾಕುತ್ತಿ ದ್ದಾರೆ ಎಂಬ ಆರೋಪವೂ ಕೇಳಿಬಂದಿದೆ.
ಇದನ್ನೂ ಓದಿ:ಮೆಟ್ರೋ ಡಿಪೋಗಳ ನಿರ್ಮಾಣಕ್ಕೆ ಒತ್ತು
ತಾತ್ಕಾಲಿಕ ವೇಳಾಪಟ್ಟಿಯಲ್ಲಿ ಎಂಟು ಅಭ್ಯರ್ಥಿಗಳ ಹೆಸರನ್ನು ಉಲ್ಲೇಖಿಸಲಾಗಿತ್ತು. ಇದಕ್ಕೆ ಆಕ್ಷೇಪಣೆ ಸಲ್ಲಿಸಲು ಅಭ್ಯರ್ಥಿಗಳಿಗೆ 7 ದಿನ ಸಮಯಾವಕಾಶ ನೀಡಲಾಗಿತ್ತು. ಆಕ್ಷೇಪಣೆ ಸಲ್ಲಿಸಲು ನೀಡಿದ್ದ ಅವಧಿ ಮುಗಿದು 2 ತಿಂಗಳು ಕಳೆದಿದೆ. ಲಾಕ್​ಡೌನ್ ಸಡಿಲಿಕೆಯಾಗಿ ಬೇರೆ ಸರ್ಕಾರಿ ಹುದ್ದೆಗಳ ನೇಮಕಾತಿ ಪ್ರಕ್ರಿಯೆಗಳು ಪುನರಾರಂಭಗೊಂಡಿದ್ದರೂ, ಈ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ನೇಮಿಸಿಲ್ಲ.
ಒಂದೂವರೆ ವರ್ಷದಿಂದ ಖಾಲಿ:ನಿರುದ್ಯೋಗಿಗಳ ಭವಿಷ್ಯದಲ್ಲಿ ಸರ್ಕಾರ ಚೆಲ್ಲಾಟವಾಡುತ್ತಿದೆ. ಕಳೆದ ಒಂದೂವರೆ ವರ್ಷಗಳಿಂದ ಈ ಹುದ್ದೆಗಳು ಖಾಲಿಯಿವೆ. ತೋಟಗಾರಿಕಾ ಇಲಾಖೆಯ ವ್ಯಾಪ್ತಿಯಲ್ಲಿರುವ ಇನ್ನೂ ಹಲವು ಹುದ್ದೆಗಳು ಖಾಲಿಯಿದ್ದು, ಸಂಬಂಧಿಸಿದ ಅಧಿಕಾರಿಗಳನ್ನು ಭೇಟಿಯಾಗಿ ಈ ಬಗ್ಗೆ ವಿಚಾರಿಸಿದಾಗ ಸಬೂಬು ಹೇಳಿ ಕಳಿಸುತ್ತಿದ್ದಾರೆ ಎಂದು ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕ ಹುದ್ದೆಗೆ ಅರ್ಜಿ ಸಲ್ಲಿಸಿದ್ದ ಅಭ್ಯರ್ಥಿಯೊಬ್ಬರು ತಿಳಿಸಿದ್ದಾರೆ.
ಪರಿಹಾರ ಪಡೆದ ಜಮೀನಿನಲ್ಲೇ ಕಟ್ಟಡ: ಅಕ್ರಮ-ಸಕ್ರಮದ ಭೀತಿಯಲ್ಲಿದೆ ಬಿಡಿಎ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five × two =
Remember me
