ಹೊಸನಗರ:ಶ್ರೀ ರಾಮಚಂದ್ರಾಪುರ ಮಠದಲ್ಲಿ ಬುಧವಾರ ನಡೆದ ಕೃಷ್ಣಾರ್ಪಣಂ ಕಾರ್ಯಕ್ರಮದಲ್ಲಿ ಜಶೋದಾ ಬೆನ್ ಮೋದಿ ಪಾಲ್ಗೊಂಡಿದ್ದಾರೆ. ಗೋವರ್ಧನ ಗಿರಿಧಾರಿ ಗೋಪಾಲಕೃಷ್ಣ ದೇವಸ್ಥಾನಕ್ಕೆ ತೆರಳಿ ದರ್ಶನ ಪಡೆದರು. ನಂತರ ರಾಘವೇಶ್ವರ ಶ್ರೀಗಳ ಸಾನ್ನಿಧ್ಯದಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿದರು.
ಈ ಸಂದರ್ಭದಲ್ಲಿ ರಾಘವೇಶ್ವರ ಶ್ರೀಗಳಿಂದ ಆಶೀರ್ವಾದ ಪಡೆದು ಮಾತನಾಡಿದ ಅವರು, ನಾನು ಈ ಹಿಂದೆಯೇ ಸಂಕಲ್ಪ ಮಾಡಿದಂತೆ ದೇಶದ ವಿವಿಧೆಡೆಗೆ ತೆರಳಿ ಸಾಧು ಸಂತರ ದರ್ಶನ ಮಾಡಿ ಅವರಿಂದ ಆಶೀರ್ವಾದ ಪಡೆಯುತ್ತಿದ್ದೇನೆ. ಈ ಕಾರ್ಯದ ಮುಂದುವರಿದ ಭಾಗವಾಗಿ ಇಂದು ರಾಮಚಂದ್ರಾಪುರ ಮಠಕ್ಕೆ ಆಗಮಿಸಿದ್ದೇನೆ ಎಂದರು.
ರಾಮಚಂದ್ರಾಪುರ ಮಠ ಹಾಗೂ ರಾಘವೇಶ್ವರ ಶ್ರೀಗಳು ಗೋ ಸಂರಕ್ಷಣೆಯಲ್ಲಿ ತೊಡಗಿಕೊಂಡಿರುವ ರೀತಿ ಎಲ್ಲರಿಗೂ ಅನುಕರಣೀಯ. ಗೋ ಸೇವೆಗೆ ಸಂಕಲ್ಪ ತೊಟ್ಟು ಅದನ್ನು ಕಾರ್ಯರೂಪಕ್ಕೆ ತರುತ್ತಿರುವ ರಾಘವೇಶ್ವರ ಶ್ರೀಗಳಲ್ಲಿ ನಾನು ಆದಿಶಂಕರಾಚಾರ್ಯರನ್ನು ಕಾಣುತ್ತಿದ್ದೇನೆ. ಅವರ ಉದ್ಧೇಶದಂತೆ ಗೋ ರಕ್ಷಣೆಗೆ ಇನ್ನಷ್ಟು ಮಹತ್ವ ಸಿಗುವಂತಾಗಲಿ ಎಂದು ಹೇಳಿದರು.
ಇದೇ ವೇಳೆ ಪ್ರಧಾನಿ ನರೇಂದ್ರ ಮೋದಿ ಅವರ ಬೇಟಿ ಬಚಾವೊ, ಬೇಟಿ ಪಡಾವೊ ಯೋಜನೆಯನ್ನು ಪ್ರಸ್ತಾಪಿಸಿದ ಅವರು, ಪ್ರತಿಯೊಬ್ಬರೂ ಹೆಣ್ಣು ಮಕ್ಕಳಿಗೆ ಹೆಚ್ಚಿನ ಪ್ರಾಶಸ್ತ್ಯ ಹಾಗೂ ಶಿಕ್ಷಣ ನೀಡಲು ಮುಂದಾಗಬೇಕೆಂದರು.
ಮಠದ ಗೋಶಾಲೆಗೆ ತೆರಳಿ ಅಲ್ಲಿನ ಅಪರೂಪದ ಗೋ ತಳಿ ಬಗ್ಗೆ ಜಶೋದ ಬೆನ್ ಮೆಚ್ಚುಗೆ ವ್ಯಕ್ತಪಡಿಸಿದರು. ಅಲ್ಲಿ ಕಾರ್ಯ ಶೈಲಿ ಬಗ್ಗೆ ಕೇಳಿ ತಿಳಿದುಕೊಂಡರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 4 =
Remember me
