ಹೊಸಪೇಟೆ:ಇಲ್ಲಿನ ನಗರಸಭೆ ಮಹಾನಗರಪಾಲಿಕೆ ಆಗಲು ಎಲ್ಲ ಅರ್ಹತೆ ಹೊಂದಿದೆ. ಕೆಲ ಸಣ್ಣ ಸಮಸ್ಯೆಗಳಿಗೆ ಪರಿಹಾರ ಕಂಡುಕೊಂಡು ನಗರಸಭೆ ಮೇಲ್ದರ್ಜೆಗೇರಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು ಎಂದು ಸಚಿವ ಆನಂದಸಿಂಗ್ ಹೇಳಿದರು.
ನಗರಸಭೆ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಅಭಿವೃದ್ಧಿ ಕಾಮಗಾರಿಗಳ ಕುರಿತು ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದರು. ಜನಸಂಖ್ಯೆ ಸೇರಿ ಮಹಾನಗರ ಪಾಲಿಕೆಗೆ ಬೇಕಿರುವ ಮಾನದಂಡಗಳ ಕುರಿತು ಪರಿಶೀಲಿಸಲಾಗುತ್ತಿದೆ. ನಗರಕ್ಕೆ ಹೊಂದಿಕೊಂಡಿರುವ ಕೆಲ ಗ್ರಾಮಗಳ ಸೇರಿಸಲು ಚರ್ಚಿಸಿ ಅಭಿಪ್ರಾಯ ಪಡೆಯಲಾಗುತ್ತಿದೆ. ಪಾಲಿಕೆ ಕಟ್ಡ ನಿರ್ಮಾಣಕ್ಕೂ ಸ್ಥಳ ಗುರುತಿಸಲಾಗಿದೆ. ವಿಜಯನಗರ ಜಿಲ್ಲೆ ರಚನೆಗೆ ಹೋರಾಡಿದಂತೆ ಮಹಾನಗರ ಪಾಲಿಕೆಯನ್ನಾಗಿಸಲು ಪ್ರಯತ್ನಿಸುವೆ ಎಂದರು.
ನಗರದ ರೈಲ್ವೆ ನಿಲ್ದಾಣಕ್ಕೆ ತೆರಳುವ ಕನಕದಾಸ ವೃತ್ತದಲ್ಲಿ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೀಯ ಚಿತ್ರಗಳನ್ನು ಸ್ಥಾಪಿಸಲಾಗುವುದು. ತಿಂಗಳೊಳಗೆ ಜಿಲ್ಲೆಗೆ ವಿಶೇಷಾಧಿಕಾರಿ ಆಗಮಿಸಲಿದ್ದಾರೆ. ಜಿಲ್ಲಾಡಳಿತ ಭವನಕ್ಕೆ 50 ಕೋಟಿ ರೂ. ನೀಡಲು ಸಿಎಂಗೆ ಮನವಿ ಮಾಡಿದ್ದು, ಸಕಾರಾತ್ಮಕ ಸ್ಪಂದನೆ ಸಿಕ್ಕಿದೆ. ಅಗತ್ಯಬಿದ್ದರೆ ಕಂದಾಯ ಇಲಾಖೆ ಅನುದಾನ ಬಳಸಲಾಗುವುದು. ನಗರದಲ್ಲಿ ಅನಕ್ಷರಸ್ಥರಿಗೂ ಕೌಶಲ ತರಬೇತಿ ಕೇಂದ್ರ ತೆರೆದು ಉದ್ಯೋಗ ಕಲ್ಪಿಸಲು ಯೋಜನೆ ರೂಪಿಸಲಾಗುತ್ತಿದೆ ಎಂದು ತಿಳಿಸಿದರು.
ಬೆಳಗ್ಗೆಯೇ ಎದ್ದು ನಗರ ಸುತ್ತಿ:ಹೊಸಪೇಟೆಯ ಪ್ರಮುಖ ರಸ್ತೆಗಳಲ್ಲಿ ವಾಹನಗಳ ದಟ್ಟನೆಯಿಂದ ಪೊಲೀಸರು ಹೈರಾಣಾಗುತ್ತಿದ್ದಾರೆ. ನಗರಸಭೆ ಅಧಿಕಾರಿಗಳ ಸಹಕಾರ ದೊರೆಯುತ್ತಿಲ್ಲವೆಂದು ಪೊಲೀಸರು ಆರೋಪಿಸುತ್ತಿದ್ದಾರೆ. ನಿವೇನು ಮಾಡುತ್ತಿದ್ದೀರಿ ಎಂದು ಪೌರಾಯುಕ್ತ ಮನ್ಸೂರ್ ಅಲಿರನ್ನು ಸಚಿವರು ಪ್ರಶ್ನಿಸಿದರು. ಅಂಗಡಿ ಮಳಿಗೆಗಳ ಮಾಲೀಕರು ವಾಹನ ನಿಲುಗಡೆ ಸೇರಿದಂತೆ ಕಟ್ಟಡ ನಿರ್ಮಾಣಕ್ಕೆ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ನಿರ್ಲಕ್ಷಿಸಿದರೆ ಕ್ರಮಕೈಗೊಳ್ಳಬೇಕು ಸೂಚಿಸಿದರು. ಬೆಳಗ್ಗೆಯೇ ಎದ್ದು ನಗರ ಸುತ್ತುವ ಹವ್ಯಾಸ ಬೆಳೆಸಿಕೊಳ್ಳಿ, ನಗರದಲ್ಲಿ ಅಶುಚಿತ್ವ ಕಂಡುಬಂದರೆ ಸಂಬಂಧಿಸಿದ ಅಧಿಕಾರಿಗಳನ್ನು ಎತ್ತಂಗಡಿ ಮಾಡಲಾಗುವುದು ಎಂದು ಪರಿಸರ ಇಂಜಿನಿಯರ್ ಅಶೋಕಗೆ ಸಚಿವರು ತರಾಟೆ ತೆಗೆದುಕೊಂಡರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:4 × 4 =
Remember me
