ಹಾವೇರಿ:ಸವಣೂರ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಸತತ ಮಳೆಗೆ ಮನೆ ಕುಸಿದು ಬಿದ್ದು ಮೂವರ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದ ಪ್ರಕರಣದಲ್ಲಿ ಮತ್ತೋರ್ವ ಮಹಿಳೆ ಮೃತಪಟ್ಟಿದ್ದಾರೆ.
ಯಲ್ಲಮ ಹರಕುಣಿ (68) ಮೃತಪಟ್ಟವರು. ಸತತ ಮಳೆಗೆ ಮನೆ ಕುಸಿದು ಬಿದ್ದು ಮೂವರ ಮೃತಪಟ್ಟು, ಇಬ್ಬರು ಗಾಯಗೊಂಡಿದ್ದ ಪ್ರಕರಣದಲ್ಲಿ ಮತ್ತೋರ್ವ ಮಹಿಳೆ ಮೃತಪಟ್ಟಿದ್ದಾರೆ.
ಜುಲೈ 19 ರಂದು ಮಾದಾಪುರ ಗ್ರಾಮದಲ್ಲಿ ಈ ದುರಂತ ನಡೆದಿದ್ದು, ಈ ಮೂಲಕ ಮೃತರ ಸಂಖ್ಯೆ ನಾಲ್ಕಕ್ಕೆ ಏರಿಕೆಯಾಗಿದೆ.ಕಳೆದ ಶುಕ್ರವಾರದಂದು ಮನೆ ಮೇಲ್ಚಾವಣಿ ಕುಸಿದು ಅವಳಿ ಮಕ್ಕಳು ಸೇರಿ ಮೂವರು ಸಾವನ್ನಪ್ಪಿದ್ದರು. ಈ ವೇಳೆ ಗಂಭೀರವಾಗಿ ಮೂವರು ಗಾಯಗೊಂಡಿದ್ದರು. ನಿದ್ರಿಸುತ್ತಿದ್ದ 18 ತಿಂಗಳ ಅವಳಿ ಮಕ್ಕಳಾದ ಅಮೂಲ್ಯ ಹಾಗೂ ಅನುಶ್ರೀ ಮತ್ತು ಮಕ್ಕಳ ಅತ್ತೆ ಚನ್ನಮ್ಮ (10) ಸ್ಥಳದಲ್ಲಿಯೇ ಅಸುನೀಗಿದ್ದರು.
ಮನೆ ಮಾಲೀಕ ಮುತ್ತು ದೊಡ್ಡಬಸಪ್ಪ ಹರಕುಣಿ (35), ಪತ್ನಿ ಸುನೀತಾ ಮುತ್ತು ಹರಕುಣಿ (25) ತಾಯಿ ಯಲ್ಲಮ್ಮ ದೊಡ್ಡಬಸಪ್ಪ ಹರಕುಣಿ (30) ತೀವ್ರ ಗಾಯಗೊಂಡಿದ್ದರು. ಗಾಯಗೊಂಡವರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿತ್ತು.
ಈ ಪೈಕಿ ತೀವ್ರ ಉಸಿರಾಟದ ಸಮಸ್ಯೆಯಿಂದ ನರಳುತ್ತಿದ್ದ ಯಲ್ಲವ್ವ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಗೆ ದಾಖಲು ಮಾಡಲಾಗಿತ್ತು. ಇಂದು ಬೆಳಿಗ್ಗೆ ಚಿಕಿತ್ಸೆಗೆ ಸ್ಪಂದಿಸದೆ ಯಲ್ಲವ್ವ ಸಾವನ್ನಪ್ಪಿದ್ದಾರೆ. ಸವಣೂರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.
ಹಾವೇರಿಯಲ್ಲಿ ಸತತ ಮಳೆಗೆ ಕುಸಿದ ಮನೆ: ಅವಳಿ ಮಕ್ಕಳು, ಮಹಿಳೆ ಸಾವು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:15 − 8 =
Remember me
