ಹಾವೇರಿ:ಸವಣೂರ ತಾಲೂಕಿನಲ್ಲಿ ನಿರಂತರ ಸುರಿಯುತ್ತಿರುವ ಮಳೆಗೆ ತಾಲೂಕಿನ ಮಾದಾಪುರ ಗ್ರಾಮದಲ್ಲಿ ಮನೆ ಮೆಲ್ಛಾವಣಿ ಕುಸಿದು ಸ್ಥಳದಲ್ಲಿಯೇ ಅವಳಿ ಮಕ್ಕಳು ಹಾಗೂ ಮಹಿಳೆ ಮೃತಪಟ್ಟಿದ್ದು, ಮೂವರ ಸ್ಥಿತಿ ಚಿಂತಾಜನಕವಾಗಿದೆ.
ನಸುಕಿನ ಜಾವ 4 ಗಂಟೆಯ ಸುಮಾರು ಗ್ರಾಮದ ಹರಕುಣಿ ಕುಟುಂಬಸ್ಥರ ಮನೆ ಮೇಲ್ಛಾವಣಿ ಕುಸಿದಿದೆ. ನಿದ್ರಿಸುತ್ತಿದ್ದ 18 ತಿಂಗಳ ಅವಳಿ ಮಕ್ಕಳಾದ ಅಮೂಲ್ಯ ಹಾಗೂ ಅನುಶ್ರೀ ಮತ್ತು ಮಕ್ಕಳ ಅತ್ತೆ ಚನ್ನಮ್ಮ (10) ಸ್ಥಳದಲ್ಲಿಯೇ ಅಸುನೀಗಿದ್ದಾರೆ.
ಮನೆ ಮಾಲೀಕ ಮುತ್ತು ದೊಡ್ಡಬಸಪ್ಪ ಹರಕುಣಿ (35), ಪತ್ನಿ ಸುನೀತಾ ಮುತ್ತು ಹರಕುಣಿ (25) ತಾಯಿ ಯಲ್ಲಮ್ಮ ದೊಡ್ಡಬಸಪ್ಪ ಹರಕುಣಿ (30) ತೀವ್ರ ಗಾಯಗೊಂಡಿದ್ದಾರೆ. ಗಾಯಗೊಂಡವರನ್ನು ಹಾವೇರಿ ಜಿಲ್ಲಾ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕಳುಹಿಸಲಾಗಿದೆ.
ಘಟನಾ ಸ್ಥಳಕ್ಕೆ ಉಪ ವಿಭಾಗಾಧಿಕಾರಿ ಮಹಮ್ಮದ ಖಿಜರ್, ತಹಸೀಲ್ದಾರ್ ಭರತರಾಜ್ ಕೆ.ಎನ್. ಹಾಗೂ ಅಧಿಕಾರಿಗಳ ತಂಡ ಭೇಟಿ ನೀಡಿ, ಪರಿಶೀಲಿಸುತ್ತಿದೆ.
ಬಾತ್​ರೂಮ್​​ ವಿಡಿಯೋ ಲೀಕ್​: ನಟಿ ಊರ್ವಶಿ-ಮ್ಯಾನೇಜರ್​ ನಡುವಿನ ಸ್ಫೋಟಕ ಆಡಿಯೋ ವೈರಲ್​!

ಐಶ್ವರ್ಯಾ ರೈ ಜತೆ ಬ್ರೇಕಪ್​! ಇನ್​ಸ್ಟಾ ಪೋಸ್ಟ್​ ಲೈಕ್​ ಮಾಡೋ ಮೂಲಕ ಸುಳಿವು ಕೊಟ್ಟ ಅಭಿಷೇಕ್ ಬಚ್ಚನ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × three =
Remember me
