ಗುಂಡ್ಲುಪೇಟೆ:ರಾಜ್ಯಾದ್ಯಂತ ಗುಡುಗು-ಸಿಡಿಲು ಸಹಿತ ಭಾರಿ ಮಳೆಯಾಗುತ್ತಿದ್ದು ಮನೆಯೊಂದಕ್ಕೆ ಸಿಡಿಲು ಬಡಿದಿದ್ದು, ಭಾಗಶಃ ಹಾನಿಗೀಡಾಗಿದೆ. ಮಾತ್ರವಲ್ಲ, ಮನೆಯಲ್ಲಿನ ನಾಲ್ವರು ಗಾಯಗೊಂಡಿದ್ದಾರೆ.
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ತಗ್ಗಲೂರು ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಗ್ರಾಮದ ಮಹದೇವಶೆಟ್ಟಿ ಎಂಬುವರ ಮನೆಗೆ ಭಾನುವಾರ ರಾತ್ರಿ ಸಿಡಿಲು ಬಡಿದ ಪರಿಣಾಮ ಮೊದಲ ಮಹಡಿಯ ಮಂಚದ ಮೇಲೆ ಮಲಗಿದ್ದ ಮಣಿಕಂಠ (25), ಕೌಶಿಕ್ (13), ಚೇತನ (19) ಹಾಗೂ ಮಹದೇವಮ್ಮ (45) ಎಂಬುವರು ಗಾಯಗೊಂಡಿದ್ದಾರೆ.
ಗಾಯಗೊಂಡವರನ್ನು ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಾಳುಗಳಿಗೆ ತಲಾ 4,300 ಹಾಗೂ ಮನೆಗೆ ಜಖಂ ಆಗಿದ್ದಕ್ಕೆ ಐವತ್ತು ಸಾವಿರ ಪರಿಹಾರ ನೀಡಲಾಗಿದೆ ಎಂದು ತಹಸೀಲ್ದಾರ್ ರವಿಶಂಕರ್ ತಿಳಿಸಿದ್ದಾರೆ.
ನಿದ್ರೆ ಬರುತ್ತಿಲ್ಲ ಎಂದು ಬೇಸತ್ತು ನರ್ಸಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + eleven =
Remember me
