ಬೆಂಗಳೂರು:ರಾಜ್ಯದ ವಸತಿರಹಿತರಿಗೆ ಸರ್ಕಾರ ಬಂಪರ್ ಕೊಡುಗೆ ಪ್ರಕಟಿಸಿದೆ. ಸೂರಿಲ್ಲದವರಿಗೆ 5 ಲಕ್ಷ ಮನೆ ನಿರ್ವಿುಸುವ ಮಹತ್ವದ ತೀರ್ಮಾನವನ್ನು ಗುರುವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ. ಗ್ರಾಮೀಣ ವಸತಿರಹಿತರಿಗೆ 4 ಲಕ್ಷ ಹಾಗೂ ನಗರ ಪ್ರದೇಶದ ವಸತಿರಹಿತರಿಗೆ 1 ಲಕ್ಷ ಮನೆಗಳು ನಿರ್ವಣಗೊಳ್ಳಲಿವೆ. ಯೋಜನೆಗೆ 8 ಸಾವಿರ ಕೋಟಿ ರೂ. ವೆಚ್ಚ ಮಾಡಲು ಉದ್ದೇಶಿಸಲಾಗಿದ್ದು, 2 ವರ್ಷದಲ್ಲಿ ಎಲ್ಲ ಮನೆಗಳನ್ನು ಪೂರ್ಣಗೊಳಿಸಲು ನಿರ್ಧರಿಸಲಾಗಿದೆ. ಈ ಯೋಜನೆ ಸಂಬಂಧ ಹಣಕಾಸು ಇಲಾಖೆ ಜತೆ ರ್ಚಚಿಸಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು. ಗ್ರಾಮೀಣ ಪ್ರದೇಶದಲ್ಲಿ ಬಸವ ವಸತಿ ಯೋಜನೆ, ಬಿ.ಆರ್. ಅಂಬೇಡ್ಕರ್ ವಸತಿ ಯೋಜನೆ, ದೇವರಾಜ ಅರಸು ವಸತಿ ಯೋಜನೆಯಡಿ ನಾಲ್ಕು ಲಕ್ಷ ಮನೆಗಳನ್ನು ನಿರ್ವಿುಸಲು ಮಂಜೂರಾತಿ ನೀಡಲಾಗಿದೆ. ನಗರ ಪ್ರದೇಶದಲ್ಲಿ ವಾಜಪೇಯಿ ನಗರ ವಸತಿ ಯೋಜನೆ ಮತ್ತು ಬಿ.ಆರ್.ಅಂಬೇಡ್ಕರ್ ವಸತಿಯೋಜನೆಯಡಿ 1 ಲಕ್ಷ ಮನೆ ನಿರ್ವಿುಸಲು ಅನುಮೋದನೆ ನೀಡಲಾಗಿದೆ ಎಂದರು.
ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ಪಂಚಾಯಿತಿ ಮೂಲಕ ಮತ್ತು ನಗರ ಪ್ರದೇಶಗಳಲ್ಲಿ ಆಶ್ರಯ ಸಮಿತಿಗಳ ಮೂಲಕ ಯೋಜನೆ ಜಾರಿಗೊಳಿಸಲು ತೀರ್ವನಿಸಲಾಗಿದೆ ಎಂದು ಹೇಳಿದರು. ಬೆಂಗಳೂರಿನಲ್ಲಿ 1 ಲಕ್ಷ ಬಹುಮಹಡಿ ಕಟ್ಟಡ ಯೋಜನೆ ಈಗಾಗಲೇ ಚಾಲ್ತಿಯಲ್ಲಿದ್ದು, ಅದಕ್ಕೆ ಪೂರಕ ವಾಗಿ ಬೇಕಾದ ಕುಡಿಯುವ ನೀರು, ವಿದ್ಯುತ್ ಸಂಪರ್ಕ ಮತ್ತಿತರ ಮೂಲಸೌಕರ್ಯ ಕಲ್ಪಿಸಲು 500 ಕೋಟಿ ರೂಪಾಯಿಗಳಿಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿಸಿದರು.
ತಹಸೀಲ್ದಾರ್ ಹುದ್ದೆಗೆ ನಿಯೋಜನೆ ಇಲ್ಲ:ಕಂದಾಯ ಇಲಾಖೆಯಲ್ಲಿ ತಹಸೀಲ್ದಾರ್ ಹುದ್ದೆಗೆ ನಿಯೋಜನೆ ಮಾಡದಿರಲು ಮತ್ತು ಈಗಾಗಲೇ ನಿಯೋಜನೆಗೊಂಡಿರುವ 43 ತಹಸೀಲ್ದಾರರನ್ನು ಮಾತೃ ಇಲಾಖೆಗೆ ಕಳುಹಿಸಲು ನಿರ್ಧಾರ ಮಾಡಲಾಗಿದೆ. ತಹಸೀಲ್ದಾರರು ಮ್ಯಾಜಿಸ್ಟ್ರೇಟ್ ಕೆಲಸ ಮಾಡಬೇಕಾಗುತ್ತದೆ. ಅದಕ್ಕೆ ತಕ್ಕ ಅರ್ಹತೆ ಹಾಗೂ ತರಬೇತಿ ಅವಶ್ಯಕತೆ ಇದೆ. ಈ ಹಿನ್ನೆಲೆಯಲ್ಲಿ ತಹಸೀಲ್ದಾರ್ ಹುದ್ದೆಗೆ ಬೇರೆ ಇಲಾಖೆಯಿಂದ ನಿಯೋಜನೆ ಮಾಡದಂತೆ ಸಚಿವ ಸಂಪುಟ ಸಭೆ ತೀರ್ವನಿಸಿದೆ.
ನೀರಾವರಿ ಯೋಜನೆಗೆ 10 ಸಾವಿರ ಕೋಟಿ ರೂ.:ಬೆಂಗಳೂರು: ಸಿಎಂ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ನಡೆದ ನೀರಾವರಿ ನಿಗಮಗಳ ಸಭೆಯಲ್ಲಿ 10 ಸಾವಿರ ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮತಿ ನೀಡಲಾಗಿದೆ. ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ಪೂರ್ಣಗೊಳಿಸಲು 51 ಸಾವಿರ ಕೋಟಿ ರೂ. ಅಗತ್ಯವಿದೆ. ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಳಿಸಲು ಹೆಚ್ಚಿನ ಅನುದಾನ ಬೇಕಾಗಿದೆ ಎನ್ನುವ ಪ್ರಸ್ತಾವನೆ ಕೃಷ್ಣಾ ಭಾಗ್ಯ ಜಲ ನಿಗಮದ ಸಭೆಯಲ್ಲಿ ಚರ್ಚೆಯಾಗಿ ಹೆಚ್ಚುವರಿ ಅನುದಾನಕ್ಕೆ ಸಮ್ಮತಿ ದೊರೆಯಿತು. ಕೃಷ್ಣಾ ಭಾಗ್ಯ ಜಲ ನಿಗಮ, ವಿಶ್ವೇಶ್ವರಯ್ಯ ಜಲ ನಿಗಮ, ಕಾವೇರಿ ಜಲ ನಿಗಮಗಳ ಅನೇಕ ಪ್ರಸ್ತಾವನೆಗಳಿಗೂ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ. ಎತ್ತಿನಹೊಳೆ ಯೋಜನೆಗೆ ಸಾವಿರ ಕೋಟಿ ರೂ.ಗಳ ಕಾಮಗಾರಿಗಳಿಗೆ ಅನುಮೋದನೆ ನೀಡಲು ಸಭೆ ಒಪ್ಪಿಗೆ ನೀಡಿರುವುದಾಗಿ ತಿಳಿದುಬಂದಿದೆ. ಕೋವಿಡ್ ಕಾರಣದಿಂದ ಬಾಕಿ ಉಳಿದಿದ್ದ ಟೆಂಡರ್ ಪ್ರಕ್ರಿಯೆಗಳನ್ನು ಪೂರ್ಣಗೊಳಿಸಲು ಒಪ್ಪಲಾಗಿದೆ ಎಂದು ಮೂಲಗಳು ಖಚಿತಪಡಿಸಿವೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 14 =
Remember me
