ದಕ್ಷಿಣ ಕನ್ನಡ:ಭಾರಿ ಮಳೆಗೆ ಮನೆಯ ಗೋಡೆ ಕುಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ದುರಂತ ಸಾವಿಗೀಡಾಗಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಕುತ್ತಾರು ಮದಿನಿಯಲ್ಲಿ ನಡೆದಿದೆ.
ಮೃತರನ್ನು ಯಾಸೀರ್​ (45), ಮರಿಯಮ್ಮ (40), ಮಕ್ಕಳಾದ ರಿಯಾನ್​ ಮತ್ತು ರಿಫಾನ್​ ಎಂದು ಗುರುತಿಸಲಾಗಿದೆ. ನಿನ್ನೆ (ಜೂನ್​ 25) ರಾತ್ರಿ ಸುರಿದ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಈ ದುರ್ಘಟನೆ ಸಂಭವಿಸಿದೆ.
ಪಕ್ಕದಲ್ಲಿ ವಾಸವಿದ್ದ ಅಬೂಬಕ್ಕರ್ ಎಂಬುವರಿಗೆ ಸೇರಿದ ಮನೆಯ ಗೋಡೆ ಕುಸಿದು ಯಾಸೀರ್​ ಅವರ ಮನೆಗೆ ಮೇಲೆ ಬಿದ್ದ ಪರಿಣಾಮ ಗೋಡೆ ಕುಸಿತವಾಗಿ ಇಡೀ ಕುಟುಂಬ ದುರಂತ ಅಂತ್ಯ ಕಂಡಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸಹಾಯದಿಂದ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಘಟನಾ ಸ್ಥಳಕ್ಕೆ ಉಳ್ಳಾಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣವನ್ನು ದಾಖಲಿಸಿಕೊಂಡಿದ್ದಾರೆ.
ಇನ್ನು ರಾಜ್ಯದ ಹಲವೆಡೆ ಮತ್ತೆ ಮುಂಗಾರು ಮಳೆ ಚುರುಕು ಪಡೆದಿದೆ. ಅದರಲ್ಲೂ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ರಾಜ್ಯದ ಏಳು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್​ ಘೋಷಣೆ ಮಾಡಲಾಗಿದೆ.
ಸೆಮಿಸ್​ ತಲುಪಿದ ಅಫ್ಘಾನಿಸ್ತಾನ… ರೋಹಿತ್​ ಬಗ್ಗೆ ಅಚ್ಚರಿಯ ಹೇಳಿಕೆ ನೀಡಿದ ರಶೀದ್​ ಖಾನ್​!

ಡಿವೋರ್ಸ್​ ಹಾದಿಯಲ್ಲಿ ಮತ್ತೊಂದು ಸ್ಟಾರ್​ ಜೋಡಿ: ನಟ ಜಯಂ ರವಿ ದಾಂಪತ್ಯ ಜೀವನದಲ್ಲಿ ಬಿರುಗಾಳಿ!?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × five =
Remember me
