ಬೆಂಗಳೂರು:ಕೇಂದ್ರದ ಕೃಷಿ ಮಸೂದೆ, ಎಪಿಎಂಸಿ ಕಾಯ್ದೆ, ರಾಜ್ಯದ ಭೂಸುಧಾರಣಾ ಕಾಯ್ದೆ ವಿರೋಧಿಸಿ ರೈತರು ಇಂದು ಪ್ರತಿಭಟನೆ ನಡೆಸುತ್ತಿದ್ದಾರೆ. ರಾಜ್ಯದಲ್ಲೂ ಪ್ರತಿಭಟನೆಯ ಕಾವು ಹೆಚ್ಚಾಗುವ ನಿರೀಕ್ಷೆ ಇತ್ತಾದರೂ, ಆ ಮಟ್ಟದಲ್ಲಿ ಇನ್ನೂ ಕಂಡುಬಂದಿಲ್ಲ. ಆದಾಗ್ಯೂ, ರಾಜ್ಯ ರಾಜಧಾನಿಯಲ್ಲಿ ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಲಾಗಿದೆ.
ಬೆಂಗಳೂರಿನ ಗೊರಗುಂಟೆ ಪಾಳ್ಯದಲ್ಲಿ ರೈತರು ರಸ್ತೆ ತಡೆ ಪ್ರತಿಭಟನೆ ಆರಂಭಿಸಿದ್ದಾರೆ. ಈ ನಡುವೆ, ಕಳೆದ ನಾಲ್ಕೈದು ದಿನಗಳಿಂದ ಫ್ರೀಡಂ ಪಾರ್ಕ್​ನಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರೂ ಬೀದಿಗಿಳಿಯುವ ನಿರೀಕ್ಷೆ ಇದ್ದು, ಪೊಲೀಸರು ಹೆಚ್ಚಿನ ನಿಗಾವಹಿಸಿದ್ದಾರೆ. ನಾಯಂಡಹಳ್ಳಿ ಜಂಕ್ಷನ್​ ಮತ್ತು ಇತರೆ ಪ್ರಮುಖ ರಸ್ತೆಗಳಲ್ಲಿ ಪೊಲೀಸ್ ಬಿಗಿ ಬಂದೋಬಸ್ತ್ ಏರ್ಪಡಿಸಿದ್ದು, ರಸ್ತೆ ತಡೆ ನಡೆಸದಂತೆ ಮುಂಜಾಗ್ರತಾ ಕ್ರಮವನ್ನು ತೆಗೆದುಕೊಂಡಿದ್ದಾರೆ.
ಇದನ್ನೂ ಓದಿ:VIDEO| ಗೂಡ್ಸ್ ರೈಲಿನ ಅಡಿಗೆ ಬಿದ್ದ ಎರಡು ವರ್ಷದ ಬಾಲಕ ಬಚಾವ್​ ಆಗಿದ್ದು ಹೇಗೆ ನೋಡಿ..
ಜಿಲ್ಲಾವಾರು ವಿವರ ಗಮನಿಸಿ ಹೇಳುವುದಾದರೆ, ವಿಜಯಪುರದಲ್ಲಿ ಪೊಲೀಸರು ಶುಕ್ರವಾರದ ತರಕಾರಿ ಮಾರುಕಟ್ಟೆ ಬಂದ್ ಮಾಡಿಸಿದ್ದಾರೆ. ಹಳ್ಳಿಗಳಿಂದ ತರಕಾರಿ ಮಾರಾಟ ಮಾಡುವುದಕ್ಕೆ ಬಂದ ರೈತರನ್ನು ಮುಂಜಾಗ್ರತಾ ಕ್ರಮವಾಗಿ ವ್ಯಾಪಾರಕ್ಕೆ ಅವಕಾಶ ನೀಡದೇ ವಾಪಸ್ ಕಳುಹಿಸಿದ್ದಾರೆ. ಪೊಲೀಸರ ಈ ಕ್ರಮದ ಬಗ್ಗೆ ತರಕಾರಿ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಯಾದಗಿರಿ, ಹುಬ್ಬಳಿ ಜಿಲ್ಲೆಗಳಲ್ಲಿ ಪ್ರತಿಭಟನೆಯ ತೀವ್ರತೆ ಕಂಡುಬಂದಿಲ್ಲ. ಸಾಂಕೇತಿಕ ಪ್ರತಿಭಟನೆ ನಡೆಸುವ ಸಿದ್ಧತೆಯಲ್ಲಿದ್ದಾರೆ ಈ ಜಿಲ್ಲೆಗಳಿನ ರೈತರು. ಉಳಿದ ಜಿಲ್ಲೆಗಳಲ್ಲೂ ರೈತರ ಪ್ರತಿಭಟನೆಯ ಕಾವು ಇದುವರೆಗೆ ಕಂಡುಬಂದಿಲ್ಲ.
ಭಾರತ್ ಬಂದ್|ಇಂದು ಎಲ್ಲೆಲ್ಲಿ ಏನೇನು?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve − 7 =
Remember me
