ಬೆಂಗಳೂರು:ಹಣ ಇಲ್ಲವೆಂದು ಹಾಸನ ವಿಮಾನ ನಿಲ್ದಾಣ ಕಾಮಗಾರಿಯನ್ನು ಸರ್ಕಾರ ನಿಲ್ಲಿಸಿದೆ. ಆದರೆ, ಶಿವಮೊಗ್ಗ ವಿಮಾನ ನಿಲ್ದಾಣ ಅಭಿವೃದ್ಧಿಗೆ 220 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಹಾಸನಕ್ಕೆ ಇಲ್ಲದ ಹಣ ಶಿವಮೊಗ್ಗಕ್ಕೆ ಹೇಗೆ ಬಂತು ಎಂದು ಮಾಜಿ ಸಚಿವ ಎಚ್.ಡಿ. ರೇವಣ್ಣ ಪ್ರಶ್ನಿಸಿದ್ಧಾರೆ.
ಅಧಿಕಾರಕ್ಕೆ ಬಂದಾಗ ತಾವು ದ್ವೇಷ ರಾಜಕಾರಣ ಮಾಡುವುದಿಲ್ಲ ಎಂದು ಯಡಿಯೂರಪ್ಪ ಹೇಳಿದ್ದರು. ಹಾಸನಕ್ಕೆ ಹಣ ಇಲ್ಲವೆಂದವರು ಶಿಕಾರಿಪುರ ಒಂದಕ್ಕೇ 3 ಸಾವಿರ ಕೋಟಿ ರೂ. ಅನುದಾನ ನೀಡಿದ್ದಾರೆ. ಇದು ದ್ವೇಷದ ರಾಜಕಾರಣ ಅಲ್ಲವೇ ಎಂದು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದರು.
ಜೆಡಿಎಸ್ ಶಾಸಕರ ಕ್ಷೇತ್ರದ ಕಾಮಗಾರಿಗಳಿಗೆ ಮಾತ್ರ ಇದುವರೆಗೆ ಅನುದಾನವನ್ನೇ ಬಿಡುಗಡೆ ಮಾಡಿಲ್ಲ. ಹಾಸನದ ಮೊಸಳೆಹೊಸಹಳ್ಳಿಯಲ್ಲಿ ಇಂಜಿನಿಯರಿಂಗ್ ಕಾಲೇಜಿದೆ. ಇಂಡಿಯನ್ ಟೆಕ್ನಿಕಲ್ ಕೌನ್ಸಿಲ್ ಅನುಮತಿ ನೀಡಿದ್ದರಿಂದ, 50 ಕೋಟಿ ರೂ. ವೆಚ್ಚದಲ್ಲಿ ಕಟ್ಟಡ ನಿರ್ವಿುಸಲಾಗಿದೆ. ಆದರೆ, ಈ ಕಾಲೇಜಿಗೆ ಸಂಯೋಜನೆ ನೀಡದೆ ಸರ್ಕಾರ ಸತಾಯಿಸುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
30 ಸರ್ಕಾರಿ ಪಾಲಿಟೆಕ್ನಿಕ್ ಮುಚ್ಚಲು ಸರ್ಕಾರ ಹೊರಟಿದೆ. ಈ ಎಲ್ಲ ಕಾಲೇಜುಗಳಲ್ಲಿ ಪ್ರವೇಶ ನಿಲ್ಲಿಸಿದ್ದಾರೆ. ಈ ಸರ್ಕಾರ ಶಿಕ್ಷಣದಲ್ಲೂ ರಾಜಕೀಯ ಮಾಡಲು ಹೊರಟಿದೆ ಎಂದು ರೇವಣ್ಣ ಆಕ್ರೋಶ ವ್ಯಕ್ತಪಡಿಸಿದರು.
ಲೋಕೋಪಯೋಗಿ ಇಲಾಖೆ ವತಿಯಿಂದ ಕಾಮಗಾರಿಗಳು ನಡೆಯುತ್ತಿಲ್ಲ. ಅಲ್ಲಿಯೂ ಅನುದಾನ ಕಡಿತಗೊಳಿಸಲಾಗಿದೆ. ಕಾರು ಚಾಲಕರು ಎನ್​ಒಸಿ ಮಾಡಿಸಿಕೊಡುತ್ತಿದ್ದಾರೆ. ಶೇ.5ಕ್ಕೆ ಕಾಮಗಾರಿ ಎನ್​ಒಸಿ ತರುತ್ತಾರೆ. ಈ ಬಗ್ಗೆ ಸದನದಲ್ಲಿ ಪ್ರಸ್ತಾಪಿಸುವೆ ಎಂದು ರೇವಣ್ಣ ಹೇಳಿದರು.
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:13 + four =
Remember me
