ಬೆಂಗಳೂರು:ರಾಜ್ಯ ಸರ್ಕಾರ ಘೋಷಿಸಿರುವ ಐದು ಯೋಜನೆಗಳ ಪೈಕಿ ಕಡೆಯ ಯೋಜನೆ ಯುವನಿಧಿಯಾಗಿದ್ದು, ಸದ್ಯ ಇದರ ಬಗ್ಗೆ ಹೆಚ್ಚಿನ ಮಾಹಿತಿ ಮತ್ತು ಅರ್ಜಿ ಸಲ್ಲಿಕೆ ಕುರಿತು ಸೂಕ್ತ ಮಾಹಿತಿ ನೀಡುವಂತೆ ಅನೇಕರು ಸಾಮಾಜಿಕ ಜಾಲತಾಣ ಸೇರಿದಂತೆ ಹಲವೆಡೆ ವ್ಯಕ್ತಪಡಿಸಿದ್ದರು. ಇದೀಗ ಈ ಎಲ್ಲಾ ಪ್ರಶ್ನೆಗಳಿಗೆ ವಿಜಯವಾಣಿ ವಿವರಿಸಿರುವ ಉಪಯುಕ್ತ ಮಾಹಿತಿಯ ವಿಡಿಯೋ ಬಹಳ ಸರಳ ಹಾಗೂ ಸುಲಭವಾಗಿದೆ ಅನುಸರಿಸಿ.
ಇದನ್ನೂ ಓದಿ:ಕೋಲಾರ ಗ್ರಾಮಾಂತರ ಪೋಲಿಸರಿಂದ ಭಾರಿ ವಾಹನ ಆರೋಪಿ ಬಂಧನ ವಾಹನಗಳ ವಶ
2022-23ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಪದವಿ ಪಡೆದು ಆರು ತಿಂಗಳು ಪೂರೈಸಿದವರು ಮತ್ತು ಉನ್ನತ ಶಿಕ್ಷಣ ಅಥವಾ ಯಾವುದೇ ಉದ್ಯೋಗಕ್ಕೆ ಸೇರದೇ ಇರುವವರು ಅರ್ಜಿ ಸಲ್ಲಿಸಲು ಅರ್ಹರು. ಪದವಿ ಹೊಂದಿರುವವರಿಗೆ ಮತ್ತು ಡಿಪ್ಲೊಮಾ ತೇರ್ಗಡೆ ಆದವರಿಗೆ ಈ ಯೋಜನೆ ಅನ್ವಯಿಸಲಿದೆ.
ಯೋಜನೆಯಡಿ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3 ಸಾವಿರ ರೂ., ಡಿಪ್ಲೊಮಾ ಹೊಂದಿರುವವರಿಗೆ 1,500 ರೂ. ಆರ್ಥಿಕ ನೆರವು ನೀಡಲಾಗುತ್ತದೆ. ಉದ್ಯೋಗ ಸಿಗುವವರೆಗೆ ಅಥವಾ ಎರಡು ವರ್ಷ ಅವಧಿಯಲ್ಲಿ ಯಾವುದು ಮೊದಲೋ ಅಲ್ಲಿಯವರೆಗೆ ಈ ಹಣವನ್ನು ಫಲಾನುಭವಿಗಳ ಖಾತೆಗೆ ನೇರವಾಗಿ ವರ್ಗಾಯಿಸಲಾಗುತ್ತದೆ.
ಇದನ್ನೂ ಓದಿ:ಮುಂಗಡ ಹಣ ವಾಪಾಸ್ ಕೊಡದ್ದಕ್ಕೆ ಕಾಲಿಗೆ ಸರಪಳಿ ಹಾಕಿ ದುಡಿಸಿಕೊಳ್ಳುತ್ತಿದ್ದರು..ಪೊಲೀಸರಿಂದ ಜೀತದಾಳು ರಕ್ಷಣೆ
ಯುವನಿಧಿ ಯೋಜನೆಗೆ ಇಂದು ಮಧ್ಯಾಹ್ನ ಸಿಎಂ ಅವರಿಂದ ಚಾಲನೆ ಸಿಕ್ಕಿದ್ದು, ಇಂದಿನಿಂದಲೇ ಜಾರಿಯಾಗಿದೆ. ಈ ಒಂದು ಯೋಜನೆಯ ಹಣವನ್ನು ಹೇಗೆ ಪಡೆದುಕೊಳ್ಳುವುದು ಹಾಗೂ ಅರ್ಜಿ ಸಲ್ಲಿಸುವುದು ಹೇಗೆ? ಎಂಬುದರ ಸಂಪೂರ್ಣ ವಿವರ ಈ ಕೆಳಗಿನ ವಿಡಿಯೋದಲ್ಲಿದೆ ನೋಡಿ..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + twelve =
Remember me
