ಬೆಂಗಳೂರು:ಎಸ್​ಎಸ್​ಎಲ್​ಸಿ ಪರೀಕ್ಷೆ ಜೂನ್​ 25ರಿಂದ ಜುಲೈ 4ರವರೆಗೆ ನಡೆಯಲಿವೆ. ಆದರೆ, ಈಗಾಗಲೇ ಸರ್ಕಾರಿ, ಖಾಸಗಿ ಹಾಸ್ಟೆಲ್​ ಅಥವಾ ವಸತಿ ಶಾಲೆಗಳಲ್ಲಿ ಓದುತ್ತಿದ್ದ ವಿದ್ಯಾರ್ಥಿಗಳು ಸ್ವಗ್ರಾಮಗಳಿಗೆ ತೆರಳಿದ್ದಾರೆ. ಅಲ್ಲದೇ. ವಲಸೆ ಕಾರ್ಮಿಕ ಕುಟುಂಬಗಳು ಕೂಡ ನಗರ ಪ್ರದೇಶಗಳನ್ನು ಬಿಟ್ಟು ಊರುಗಳಿಗೆ ತೆರಳಿವೆ. ಸದ್ಯ ಹಾಸ್ಟೆಲ್​ ಹಾಗೂ ವಸತಿ ಶಾಲೆಗಳನ್ನು ಕ್ವಾರಂಟೇನ್​ ಉದ್ದೇಶಗಳಿಗಾಗಿ ಬಳಸಿಕೊಳ್ಳಲಾಗುತ್ತಿದೆ. ಹೀಗಾಗಿ ವಿದ್ಯಾರ್ಥಿಗಳಿಗೆ ಮರಳಲು ಅವಕಾಶವಿಲ್ಲ. ಈ ಎಲ್ಲ ಕಾರಣದಿಂದಾಗಿ ವಿದ್ಯಾರ್ಥಿಗಳಿಗೆ ತಾವಿರುವ ಊರಿನಲ್ಲೇ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುತ್ತಿದೆ.
ಈ ಸೌಲಭ್ಯವನ್ನು ಹೇಗೆ ಬಳಸಿಕೊಳ್ಳುವುದು ಎಂಬ ಬಗ್ಗೆ ಇಲ್ಲಿ ಮಾಹಿತಿ ನೀಡಲಾಗಿದೆ. ಎಲ್ಲಕ್ಕಿಂತ ಮುಖ್ಯವಾಗಿ ಪರೀಕ್ಷಾ ಕೇಂದ್ರ ಬದಲಾಯಿಸಿಕೊಳ್ಳಲು ಮೇ 29 ಕೊನೆಯ ದಿನಾಂಕವಾಗಿದೆ.
ಇದನ್ನೂ ಓದಿ;ಜುಲೈ 1ರಿಂದ ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ
* ವಿದ್ಯಾರ್ಥಿಗಳು ಮೂಲಕ ಕೇಂದ್ರದಿಂದ ಪರೀಕ್ಷೆ ಬರೆಯಲು ಸಾಧ್ಯವಾಗದಿದ್ದಲ್ಲಿ, ಶಾಲೆಯ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಿ, ತಮಗೆ ಹತ್ತಿರವಿರುವ ಪರೀಕ್ಷಾ ಕೇಂದ್ರಕ್ಕೆ ಮುಖ್ಯ ಶಿಕ್ಷಕರ ಲಾಗಿನ್​ ಮೂಲಕ ಬದಲಾಯಿಸಿಕೊಳ್ಳುವುದು.* ಪರೀಕ್ಷಾ ಕೇಂದ್ರ ಬದಲಾವಣೆಗೆ ಮೇ 29 ಕೊನೆಯ ದಿನವಾಗಿದೆ. ಈ ವೇಳೆಗೆ ಪರೀಕ್ಷಾ ಕೇಂದ್ರ ಬದಲಾವಣೆ ಸಾಧ್ಯವಾಗದಿದ್ದಲ್ಲಿ ಮೂಲ ಕೇಂದ್ರದಿಂದಲೇ ಬರೆಯುವುದು ಕಡ್ಡಾಯ.* ತಾಲೂಕಿನ ಒಳಗೆ ಪರೀಕ್ಷಾ ಕೇಂದ್ರ ಬದಲಾವಣೆ ಅವಕಾಶವಿಲ್ಲ* ಪರೀಕ್ಷಾ ಕೇಂದ್ರ ಬದಲಾಯಿಸಿಕೊಂಡರೂ ಹಳೇ ನೋಂದಣಿ ಸಂಖ್ಯೆಯೇ ಮುಂದುವರಿಯುವುದು* ಒಮ್ಮೆ ಪರೀಕ್ಷಾ ಕೇಂದ್ರ ಬದಲಾಯಿಸಿಕೊಂಡ ಬಳಿಕ ಮೂಲ ಕೇಂದ್ರದಿಂದ ಪರೀಕ್ಷೆ ಬರೆಯಲು ಅವಕಾಶವಿರುವುದಿಲ್ಲ.
ಇದನ್ನೂ ಓದಿ;ಇನ್ನಷ್ಟು ಹತ್ತಿರವಾಯ್ತು ಮೌಂಟ್​ ಎವರೆಸ್ಟ್​…!
ಪರೀಕ್ಷಾ ಕೇಂದ್ರ ಬದಲಾವಣೆ ಬಳಿಕ ಪ್ರವೇಶ ಪತ್ರ ಪಡೆಯಲು ಹೀಗೆ ಮಾಡಿ…..* ಪ್ರಸ್ತುತ ಓದುತ್ತಿರುವ ಶಾಲೆ ಮುಖ್ಯಸ್ಥರಿಂದ ವಾಟ್ಸ್​ಆ್ಯಪ್​ ಮೂಲಕ ಪ್ರವೇಶ ಪತ್ರ ತರಿಸಿಕೊಳ್ಳಿ.* ಬದಲಾಯಿಸಿಕೊಂಡಿರುವ ಶಾಲೆಯ ಮಖ್ಯಸ್ಥರಿಂದಲೂ ಪಡೆಯಬಹುದು.* ತಾಲೂಕು ಶಿಕ್ಷಣಾಧಿಕಾರಿಗಳ ಕಚೇರಿಯಿಂದಲೂ ನೋಂದಣಿ ಸಂಖ್ಯೆ ತಿಳಿಸುವ ಮೂಲಕ ಪ್ರವೇಶ ಪತ್ರ ಪಡೆಯಬಹುದು.ಈ ಕುರಿತು ಯಾವುದೇ ಗೊಂದಲಗಳಿದ್ದರೆ 080-23310075, 23310076, ಮೊ: 9739131393 ಸಂಪರ್ಕಿಸಿ.
https://www.vijayavani.net/is-it-safe-to-send-children-to-nursery-school/
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one − 1 =
Remember me
