
ಬೆಂಗಳೂರು:ಜಾಮೀನು ಸಿಕ್ಕಿದೆ ಎನ್ನುವ ಕಾರಣಕ್ಕಾಗಿ ಯಾವುದೇ ಸಂಭ್ರಮಾಚರಣೆ ಮಾಡದಂತೆ ಜೆಡಿಎಸ್ ಕಾರ್ಯಕರ್ತರು ಮತ್ತು ಮುಖಂಡರಲ್ಲಿ ಶಾಸಕ ಎಚ್.ಡಿ.ರೇವಣ್ಣ ಮನವಿ ಮಾಡಿಕೊಂಡಿದ್ದಾರೆ.ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಟಾಕಿ ಸಿಡಿಸಿ, ೋಷಣೆ ಕೂಗುವುದು, ಮೆರವಣಿಗೆ ಮಾಡುವುದನ್ನು ಯಾರು ಮಾಡಬಾರದು. ಈಗಿನ ಪರಿಸ್ಥಿತಿಯಲ್ಲಿ ಸಂಯಮದಿಂದ ಸಹಕಾರ ನೀಡುವಂತೆ ತಮ್ಮ ಅಭಿಮಾನಿಗಳಲ್ಲಿ ವಿನಂತಿಸಿಕೊಂಡರು.ನನ್ನ ತಂದೆ ತಾಯಿಯ ಆರ್ಶೀವಾದ, ದೇವರ ಕೃಪೆ ಮತ್ತು ಕಾರ್ಯಕರ್ತರು ಶುಭ ಹಾರೈಕೆಗಳಿಂದ ನನಗೆ ಜಾಮೀನು ಸಿಕ್ಕಿದೆ. ನಿಮ್ಮೆಲ್ಲರ ಪ್ರೀತಿ, ವಿಶ್ವಾಸದ ಹಾರೈಕೆಯೇ ಸಾಕು ಎಂದು ಕೇಳಿಕೊಂಡಿದ್ದಾರೆ.ನನ್ನ 40 ವರ್ಷದ ರಾಜಕೀಯ ಜೀವನದಲ್ಲಿ ಎಂದೂ ಇಂಥಹ ಸ್ಥಿತಿ ಎದುರಿಸಿರಲಿಲ್ಲ. ಇದೊಂದು ಸಂಕಷ್ಟದ ಕಾಲ. ಎಲ್ಲದರಿಂದ ಪಾರಾಗಿ, ಆರೋಪದಿಂದ ಋಣ ಮುಕ್ತನಾಗುವ ವಿಶ್ವಾಸವಿದೆ. ನ್ಯಾಯಾಲಯದ ಮೇಲೆ ನಂಬಿಕೆ ಇದೆ. ನ್ಯಾಯಾಲಯಕ್ಕೆ ನಾನು ತಲೆಬಾಗುತ್ತೇನೆ ಎಂದರು.ನಾನು ಎಲ್ಲಿಯೂ ಹೋಗುವುದಿಲ್ಲ. ನಿಮ್ಮ ಜೊತೆಗೆ ಇರುತ್ತೇನೆ. ದೇವರ ಮೇಲೆ ನಂಬಿಕೆ ಇದೆ. ಈ ಆರೋಪದಿಂದ ಹೊರ ಬಂದ ಮೇಲೆ ಮಾತನಾಡೋಣ ಎಂದು ಹೇಳಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + 6 =
Remember me
