ಬೆಂಗಳೂರು:‘ಕರ್ನಾಟಕ ರತ್ನ ಪುನೀತ್ ರಾಜ್‌ಕುಮಾರ್ ಹೃದಯಜ್ಯೋತಿ ಯೋಜನೆ’ಗೆ ಎಲ್ಲ ಸಿದ್ಧತೆಗಳನ್ನು ಮಾಡಿಕೊಂಡಿದ್ದು, ಮುಂದಿನ ತಿಂಗಳು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದರು.
ವಿಕಾಸಸೌಧದಲ್ಲಿ ಮಂಗಳವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಎದೆನೋವು ಅಥವಾ ಹೃದಯಾಘಾತಕ್ಕೆ ಒಳಗಾದವರಿಗೆ ತುರ್ತು, ತ್ವರಿತ ಚಿಕಿತ್ಸೆ ನೀಡುವುದು ಯೋಜನೆಯ ತಿರುಳು. 85 ತಾಲೂಕು ಮತ್ತು ಜಿಲ್ಲಾ ಆಸ್ಪತ್ರೆ (45 ಸ್ಪೋಕ್ ಕೇಂದ್ರಗಳು)ಗಳಲ್ಲಿ ತುರ್ತು ಪ್ರಾಥಮಿಕ ಚಿಕಿತ್ಸೆ ಬಳಿಕ 16 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ (10 ಹಬ್‌ಗಳು)ಗಳಲ್ಲಿ ಹೆಚ್ಚಿನ ಚಿಕಿತ್ಸೆಗೆ ಅವಕಾಶವಿದೆ.
ಇತ್ತೀಚೆಗೆ ಹೃದಯಾಘಾತದಿಂದ ಸಾಯುವವರ ಸಂಖ್ಯೆ ಹೆಚ್ಚಿದೆ. ಅಧ್ಯಯನವೊಂದರ ಪ್ರಕಾರ ಹೃದಯಾಘಾತಕ್ಕೆ ಒಳಗಾಗುವವರಲ್ಲಿ ಶೇಕಡ 35ರಷ್ಟು ಮಂದಿ 40ರ ಆಸುಪಾಸಿನವರು. ಹೃದಯ ಸಂಬಂಧಿ ನೋವು ಗೋಚರಿಸಿದ ತಕ್ಷಣ ಚಿಕಿತ್ಸೆ ನೀಡುವುದು ಬಹಳ ಮುಖ್ಯವಾಗಿದೆ.
ವೈದ್ಯಕೀಯ ಪರಿಭಾಷೆಯಲ್ಲಿ ‘ಸುವರ್ಣ ಸಮಯ’ (ಗೋಲ್ಡನ್ ಅವರ್)ವೆಂಬ ಈ ಅವಧಿಯಲ್ಲಿ ಚಿಕಿತ್ಸೆ ಸಿಕ್ಕರೆ ಜೀವ ಉಳಿಸಲು ಸಾಧ್ಯವಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಬಜೆಟ್‌ನಲ್ಲಿೋಷಿಸಿದಂತೆ ಪುನೀತ್ ರಾಜ್‌ಕುಮಾರ್ ಅವರ ಹೆಸರಿನಲ್ಲಿ ಹೃದಯಜ್ಯೋತಿ ಅನುಷ್ಠಾನಕ್ಕೆ ತರಲಾಗುತ್ತಿದೆ ಎಂದು ದಿನೇಶ್ ಗುಂಡೂರಾವ್ ಹೇಳಿದರು.
ಯೋಜನೆಯ ಮತ್ತೊಂದು ಭಾಗವಾಗಿ ಎಇಡಿ (ಆಟೋಮೇಟೆಡ್ ಎಕ್ಸಟರ್ನಲ್ ಡಿಫಿಬ್ರಿಲ್ಲೇಟರ್) ಸಾಧನಗಳನ್ನು ಬಸ್, ರೈಲು, ವಿಮಾನ ನಿಲ್ದಾಣಗಳು, ಮಾಲ್‌ಗಳು ಸೇರಿ ಸಾರ್ವಜನಿಕ ಸ್ಥಳಗಳಲ್ಲಿ ಅಳವಡಿಸಲಾಗುತ್ತದೆ.
ಬೆಂಗಳೂರು ಸೇರಿ ರಾಜ್ಯದ 31 ಜಿಲ್ಲೆಗಳ 50 ಸಾರ್ವಜನಿಕ ಸ್ಥಳಗಳಲ್ಲಿ ಇಎಡಿ ಸಾಧನೆಗಳು ಅಳವಡಿಕೆಯಾಗಲಿದ್ದು, ಎದೆನೋವು ಅಥವಾ ಹೃದಯಾಘಾತದ ಲಕ್ಷಣ ಕಂಡುಬಂದರೆ ಪ್ರಾಥಮಿಕ ಚಿಕಿತ್ಸೆಗೆ ನೆರವಾಗಲಿದೆ.
ಪ್ರತಿಯೊಂದು ಸಾಧನಕ್ಕೆ ತಲಾ 1.10 ಲಕ್ಷ ವೆಚ್ಚವಾಗುವ ಅಂದಾಜಿದೆ. ಈ ಸಾಧನಗಳ ಖರೀದಿಗೆ ಎರಡು ಕೋಟಿ ರೂ. ವ್ಯಯಿಸಲಾಗುತ್ತದೆ. ಕರ್ನಾಟಕ ರತ್ನ ಪುನೀತ್‌ರಾಜ್‌ಕುಮಾರ್ ಹೃದಯಜ್ಯೋತಿ ಯೋಜನೆಗೆ ಒಟ್ಟಾರೆ 600 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ.
ಸ್ಪೋಕ್ ಕೇಂದ್ರಗಳಿಗೆ ದಾಖಲಾದ ವ್ಯಕ್ತಿಗೆ ತಕ್ಷಣ ಇಸಿಜಿ ಮಾಡಲಾಗುತ್ತದೆ. ಟ್ರೈಕಾಗ್ ಸಂಸ್ಥೆಯ ಕೃತಕಬುದ್ಧಿಮತ್ತೆ ತಂತ್ರಜ್ಞಾನ ಸಹಾಯ ಪಡೆದು, ಕ್ಲಿಷ್ಟಕರ ಅಥವಾ ಕ್ಲಿಷ್ಟಕರಹಿತವೆಂದು ಪತ್ತೆ ಹಚ್ಚುವ ವ್ಯವಸ್ಥೆ ಕಲ್ಪಿಸಲಾಗಿದೆ.
ಕ್ರಿಟಿಕಲ್ ಎಂದು ತಜ್ಞರ ಪತ್ತೆ ಹಚ್ಚಿ, ಶಿಾರಸು ಮಾಡಿದವರಿಗೆ ತಾಲೂಕು ಆಸ್ಪತ್ರೆಗಳಲ್ಲಿ ‘ಟೆನೆಸ್ಟೆಪ್ಲೇಸ್’ ಇಂಜಕ್ಷನ್ ಉಚಿತವಾಗಿ ನೀಡಲಾಗುವುದು. ಇದರಿಂದಾಗಿ ರೋಗಿ ಪರಿಸ್ಥಿತಿ ಮತ್ತಷ್ಟು ಗಂಭೀರವಾಗದಂತೆ ನೋಡಿಕೊಳ್ಳಲು ಸಾಧ್ಯವಾಗಲಿದೆ.
ಖಾಸಗಿ ಆಸ್ಪತ್ರೆಗಳಲ್ಲಿ ಈ ಚುಚ್ಚುಮದ್ದಿಗೆ 30 ರಿಂದ 45 ಸಾವಿರ ರೂ. ಶುಲ್ಕ ವಿಧಿಸುತ್ತಾರೆ. ಹೆಚ್ಚಿನ ಚಿಕಿತ್ಸೆಗೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳಲ್ಲಿ ದಾಖಲಾಗುವವರು ಬಿಪಿಎಲ್ ಕಾರ್ಡ್ ಹೊಂದಿದ್ದರೆ ಉಚಿತ ಚಿಕಿತ್ಸೆ ಲಭಿಸಲಿದೆ. ಎಪಿಎಲ್ ಆರೋಗ್ಯ ಕಾರ್ಡ್‌ವುಳ್ಳವರು ಆರೋಗ್ಯ ಕರ್ನಾಟಕ ಆಯುಷ್ಮಾನ್ ಭಾರತ್ ಹೆಲ್ತ್ ಕಾರ್ಡ್‌ನಡಿ ಉಚಿತ ಚಿಕಿತ್ಸೆ ಪಡೆಯಲು ಅವಕಾಶವಿದೆ.
ಜಯದೇವ ಹೃದ್ರೋಗ ಸಂಸ್ಥೆಯ ಬೆಂಗಳೂರು, ಮೈಸೂರು, ಕಲಬುರಗಿ ಆಸ್ಪತ್ರೆಗಳು ಆಯಾ ಹಬ್‌ಗಳ ವ್ಯಾಪ್ತಿಗೆ ಬರುತ್ತವೆ. 13 ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಒಳಗೊಂಡು ಏಳು ಹಬ್‌ಗಳು ರಚನೆಯಾಗಿವೆ. 45 ಸ್ಪೋಕ್ ಕೇಂದ್ರಗಳಿಗೆ 34 ತಾಲೂಕು ಮತ್ತು ಆರು ಜಿಲ್ಲಾ ಆಸ್ಪತ್ರೆಗಳನ್ನು ಜೋಡಿಸಲಾಗಿದೆ ದಿನೇಶ್ ಗುಂಡೂರಾವ್ ವಿವರಿಸಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
