| ವಿಲಾಸ ಮೇಲಗಿರಿ ಬೆಂಗಳೂರು
ಉನ್ನತ ಶಿಕ್ಷಣ ಪಡೆಯುವವರ ಪ್ರಮಾಣ ಹೆಚ್ಚಿಸಬೇಕು. ಗ್ರಾಮೀಣ ಮಕ್ಕಳಿಗೂ ಗುಣಮಟ್ಟದ ಶಿಕ್ಷಣ ಸಿಗಬೇಕು ಎಂಬ ಪ್ರಯತ್ನವೇನೋ ನಡೆಯುತ್ತಿದೆ. ಆದರೆ, ಈ ಗುರಿ ಸಾಕಾರಕ್ಕೆ ‘ಸಿ’ ವಲಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ಪ್ರಾಧ್ಯಾಪಕರೇ ಇಲ್ಲ! 2017ರಲ್ಲಿ 2,100 ಪ್ರಾಧ್ಯಾಪಕರನ್ನು ನೇಮಕ ಮಾಡಿಕೊಂಡು ‘ಸಿ’ ವಲಯಕ್ಕೆ ಕಳುಹಿಸಲಾಗಿತ್ತು. ಆದರೆ, ಈ ಪೈಕಿ ಶೇ.40 ಪ್ರಾಧ್ಯಾಪಕರು ಪೊ›ಬೇಷನರಿ ಅವಧಿ ಪೂರ್ಣಗೊಳ್ಳುವ ಮೊದಲೇ ಬೆಂಗಳೂರು, ಮೈಸೂರು, ಹಾಸನ ಮತ್ತಿತರ ‘ಎ’ ವಲಯದ ಕಾಲೇಜುಗಳಿಗೆ ಬಂದು ಠಿಕಾಣಿ ಹೂಡಿದ್ದಾರೆ. ಇದರಿಂದಾಗಿ ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕದ ಅನೇಕ ಕಾಲೇಜುಗಳಲ್ಲಿ ಪ್ರಾಧ್ಯಾಪಕರೇ ಇಲ್ಲದಾಗಿದೆ.
ಸಮ್ಮಿಶ್ರ ಸರ್ಕಾರದ ಅವಧಿಯಲ್ಲಂತೂ ಲೆಕ್ಕವಿಲ್ಲದಷ್ಟು ನಿಯೋಜನೆ ನಡೆದವು. ‘ಸಿ’ ವಲಯದಿಂದ ’ಎ’ ವಲಯಕ್ಕೆ ವರ್ಗಾವಣೆಗೊಂಡು ಬರಲು ಸಾಕಷ್ಟು ಸಮಯ ಬೇಕಾಗುತ್ತದೆ ಎಂದು ಅನೇಕರು ‘ನಿಯೋಜನೆ’ ಮಾರ್ಗ ಕಂಡುಕೊಂಡರು. ಉತ್ತರ ಕರ್ನಾಟಕ ಮತ್ತು ಕಲ್ಯಾಣ ಕರ್ನಾಟಕ ಭಾಗದಲ್ಲಿ ಕಲಾ ವಿಭಾಗ ಹೊರತುಪಡಿಸಿ ಉಳಿದ ವಿಭಾಗಗಳಿಗೆ ಅನೇಕ ಕಡೆ ಅತಿಥಿ ಉಪನ್ಯಾಸಕರು ಕೂಡ ಸಿಗುತ್ತಿಲ್ಲ. ‘ಎ’ ವಲಯದ ಅನೇಕ ಕಾಲೇಜುಗಳಲ್ಲಿ ಕಾರ್ಯಭಾರವೇ ಇಲ್ಲ! ಆದರೂ ಪ್ರಾಧ್ಯಾಪಕರ ದಂಡೇ ಇದೆ. ಕೆಲಸವಿಲ್ಲದಿದ್ದರೂ ಸಂಬಳ ನೀಡಲಾಗುತ್ತಿದ್ದು, ಬೊಕ್ಕಸಕ್ಕೆ ಹೊರೆಯಾಗಿದೆ.
ಭಷ್ಟಾಚಾರ ತನಿಖೆ ಆಗಿಲ್ಲ: ಮೈತ್ರಿ ಸರ್ಕಾರದ ಅವಧಿಯಲ್ಲಿ ಒಂದಾದ ಮೇಲೆ ಒಂದರಂತೆ ನೂರಾರು ನಿಯೋಜನೆ ನಡೆದಿವೆ. ಇದರಲ್ಲಿ ಭಾರಿ ಭ್ರಷ್ಟಾಚಾರ ನಡೆದಿದೆ. ಇದನ್ನು ತನಿಖೆಗೆ ಒಳಪಡಿಸಬೇಕು ಎಂದು ಎಂಎಲ್​ಸಿ ಬಸವರಾಜ ಹೊರಟ್ಟಿ ಒತ್ತಾಯಿಸಿದ್ದರು. ಮೇಲ್ಮನೆ ಮತ್ತೊಬ್ಬ ಸದಸ್ಯ ಅರುಣ ಶಹಾಪೂರ, ಉಪನ್ಯಾಸಕರ ನಿಯೋಜನೆ ದಂಧೆಯಾಗಿದೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದರು. ಆದರೆ, ಸರ್ಕಾರದ ಮಟ್ಟದಲ್ಲಿ ಈವರೆಗೆ ತನಿಖೆಯ ಯಾವುದೇ ಸುಳಿವಿಲ್ಲ.
ನೂತನ ಶಿಕ್ಷಣ ನೀತಿ ಜಾರಿಗೆ ಬರುತ್ತಿದೆ. ಇಂತಹ ಸಂದರ್ಭದಲ್ಲಿ ಗ್ರಾಮೀಣ ಪ್ರದೇಶದ ಕಾಲೇಜುಗಳು ಪ್ರಾಧ್ಯಾಪಕರಿಲ್ಲದೆ ಗುಣಮಟ್ಟದ ಶಿಕ್ಷಣ ಕೊಡಲು ಹೇಗೆ ಸಾಧ್ಯ? ನೇಮಕಗೊಂಡು ಆರೇಳು ತಿಂಗಳಲ್ಲೇ ‘ಎ’ ವಲಯದ ಕಾಲೇಜುಗಳಿಗೆ ನಿಯೋಜನೆ ಮೇಲೆ ಹೋದರೆ ‘ಸಿ’ ವಲಯದಲ್ಲಿ ಪಾಠ ಮಾಡುವವರು ಯಾರು? ಈ ಬಗ್ಗೆ ನಾವು ಪ್ರಧಾನಿಗೂ ಪತ್ರ ಬರೆದು ಗಮನ ಸೆಳೆಯುತ್ತೇವೆ ಎಂದು ವಿದ್ಯಾರ್ಥಿಗಳು ಹೇಳುತ್ತಾರೆ.
ಕರೊನಾ ಅನ್​ಲಾಕ್ ನಂತರ ಹೊಸ ಶೈಕ್ಷಣಿಕ ವರ್ಷಕ್ಕೆ ಪ್ರವೇಶ ದಾಖಲಾತಿ ಕೂಡ ನಡೆಯುತ್ತಿದೆ. ಆದರೆ, ಈ ಕೆಲಸ ಕಾರ್ಯಗಳಿಗೆ ಪ್ರಾಧ್ಯಾಪಕರ ಕೊರತೆ ಎದುರಾಗಿದೆ.
ಡಿಸಿಎಂ, ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ ನಾರಾಯಣ್ ಪರಿಷತ್​ನಲ್ಲಿ ಭರವಸೆ ಕೊಟ್ಟ ಬೆನ್ನಲ್ಲೇ ಕಾಲೇಜು ಶಿಕ್ಷಣ ಇಲಾಖೆ ಮಾ.12ರಂದು ಬೆಂಗಳೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಗಳಲ್ಲಿ ಕಾರ್ಯಭಾರ ಕೊರತೆ ಇರುವ 52 ಪ್ರಾಧ್ಯಾಪಕರನ್ನು ಕಾರ್ಯಭಾರ ಇರುವ ಕಡೆಗೆ ನಿಯೋಜನೆ ಮಾಡಿ ಆದೇಶ ಹೊರಡಿಸಿತ್ತು. ಹಲವರು ಪ್ರಭಾವ ಬಳಸಿ ಇದ್ದಲ್ಲೇ ಇದ್ದರೆ, ಕರೊನಾ ಕಾರಣಕ್ಕೆ ಕೆಲವರು ನಿಯೋಜಿತ ಸ್ಥಳಕ್ಕೆ ಹಾಜರಾಗಿಲ್ಲ. ಇದನ್ನೂ ಸರ್ಕಾರ ಗಂಭೀರವಾಗಿ ಪರಿಗಣಿಸಿಲ್ಲ.
ಬೆಂಗಳೂರು: ಗ್ರಾಮ ಪಂಚಾಯಿತಿಗಳ ಚುನಾವಣಾ ಕರ್ತವ್ಯಕ್ಕೆ ಶಿಕ್ಷಕರು ಹಾಗೂ ಉಪನ್ಯಾಸಕರ ನಿಯೋಜನೆಗೆ ರಾಜ್ಯ ಚುನಾವಣಾ ಆಯೋಗ ಕಡಿವಾಣ ಹಾಕಿದ್ದು, ಈ ಬಗ್ಗೆ ಜಿಲ್ಲಾಧಿಕಾರಿಗಳಿಗೆ ಬರೆದ ಪತ್ರದಲ್ಲಿ ಸ್ಪಷ್ಟ ಸೂಚನೆ ನೀಡಿದೆ. ಶಾಲಾ-ಕಾಲೇಜುಗಳಲ್ಲಿ ಪಾಠ-ಪ್ರವಚನ, ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ನೆರವಾಗಬೇಕೆಂದು ಮಕ್ಕಳು ಹಾಗೂ ಪಾಲಕರು ಮಾಡಿಕೊಂಡ ಮನವಿಗೆ ಆಯೋಗ ಸ್ಪಂದಿಸಿ, ಈ ಕ್ರಮ ವಹಿಸಿದೆ. ಗ್ರಾಪಂ ಚುನಾವಣೆಗಳು ಡಿಸೆಂಬರ್ ಅಂತ್ಯದವರೆಗೆ ನಡೆಯಲಿದ್ದು, ಚುನಾವಣಾಧಿಕಾರಿ ಮತ್ತು ಸಹಾಯಕ ಚುನಾವಣಾಧಿಕಾರಿಗಳ ನೇಮಕ ವೇಳೆ ಮನವಿಯನ್ನು ಗಮನದಲ್ಲಿಟ್ಟುಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳಿಗೆ ನಿರ್ದೇಶಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 5 =
Remember me
