
ಬೆಂಗಳೂರು:ಹುಬ್ಬಳ್ಳಿಯಲ್ಲಿ ನಡೆದ ಯುವತಿ ಅಂಜಲಿ ಅಂಬಿಗೇರ ಹತ್ಯೆ ಪ್ರಕರಣದ ಮರುಗಿದ ಸದನ, ಆ ಕುಟುಂಬಕ್ಕೆ ಕೂಡಲೆ ಪರಿಹಾರ ನೀಡಬೇಕು ಎಂದು ಒಕ್ಕೊರಲಿನಿಂದ ಆಗ್ರಹಿಸಿತು.ವಿಧಾನ ಪರಿಷತ್‌ನಲ್ಲಿ ಗಮನ ಸೆಳೆಯುವ ಸೂಚನೆ ಅಡಿಯಲ್ಲಿ ವಿಷಯ ಪ್ರಸ್ತಾಪಿಸಿದ ಕಾಂಗ್ರೆಸ್‌ನ ಸದಸ್ಯ ತಿಪ್ಪಣ್ಣ ಕಮಕನೂರು, ಆ ಕುಟುಂಬದ ಸ್ಥಿತಿ ನೋಡಿ ಈ ಹಿಂದೆ ಹತ್ಯೆಯಾಗಿದ್ದ ನೇಹ ಕುಟುಂಬವೇ 1 ಲಕ್ಷ ರೂ ನೀಡಿದೆ. ಆದರೆ ಸಕಾರವೇ ಪರಿಹಾರ ನೀಡದಿದ್ದರೆ ಹೇಗೆ? ಎಂದು ಪ್ರಶ್ನಿಸಿದರು.ಸೋರುತ್ತಿರುವ ಚಿಕ್ಕದಾದ ಮನೆಯಲ್ಲಿರುವ ಆ ಕುಟುಂಬಕ್ಕೆ ಅಂಜಲಿ ಹತ್ಯೆಯ ಬಳಿಕ ದಿಕ್ಕು ಕಾಣದಾಗಿದೆ. ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು 2 ಲಕ್ಷ ರೂ ನೀಡಿದ್ದಾರೆ. ಅವರ ಸ್ಥಿತಿ ನೋಡಲಾಗದೆ ನಾನು ಕೂಡ 1 ಲಕ್ಷ ರೂ ನೀಡಿದೆ. ಆದರೆ ಗೃಹ ಸಚಿವರು ಭೇಟಿ ನೀಡಿ ಸಾಂತ್ವಾನ ಹೇಳಿ ಬಂದರೂ ಇನ್ನೂ ಪರಿಹಾರ ಕೊಟ್ಟಿಲ್ಲ ಎಂದು ಗಮನ ಸೆಳೆದರು. ಇದಕ್ಕೆ ವಿರೋಧ ಪಕ್ಷದ ಸದಸ್ಯರು ಪರಿಹಾರ ನೀಡಲು ಒತ್ತಾಯಿಸಿದರು.ಇದಕ್ಕೆ ಉತ್ತರಿಸಿದ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು, ಹತ್ಯೆ ಪ್ರಕರಣದಲ್ಲಿ ಪರಿಹಾರ ಕೊಡಲು ಅವಕಾಶ ಇಲ್ಲ. ಆದರೂ, ಇದನ್ನು ವಿಶೇಷ ಪ್ರಕರಣವೆಂದು ಪರಿಗಣಿಸಿ ಕುಟುಂಬಸ್ಥರಿಗೆ ಸರ್ಕಾರದಿಂದ ಪರಿಹಾರ ಕಲ್ಪಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.ಘಟನೆ ನಡೆದ ಬಳಿಕ ಅವರ ನಿವಾಸಕ್ಕೆ ಭೇಟಿ ನೀಡಿ, ಯುವತಿಯ ಅಜ್ಜಿಯೊಂದಿಗೆ ಮಾತನಾಡಿದ್ದೇನೆ. ಅವರ ಬಡತನ ಕಣ್ಣಾರೆ ನೋಡಿದಾಗ ಅನುಕಂಪವಷ್ಟೇ ಅಲ್ಲದೇ ದುಖವು ಆಗುತ್ತದೆ. ಸರ್ಕಾರವು ಗಂಭೀರವಾಗಿ ಪರಿಗಣಿಸಿ ಸಹಾಯ ಮಾಡುತ್ತೇವೆ ಎಂದರು.ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಲಾಡ್ ಅವರು ಆಶ್ರಯ ಯೋಜನೆಯಡಿ ಮನೆ ನೀಡಲು ಕ್ರಮ ಕೈಗೊಂಡಿದ್ದಾರೆ ಎಂದರು.ಪ್ರಕರಣದ ತನಿಖೆಯು ಚಾರ್ಜ್‌ಶೀಟ್ ಸಲ್ಲಿಸುವ ಹಂತದಲ್ಲಿದೆ. ಈಗಾಗಲೇ ತ್ವರಿತಗತಿಯಲ್ಲಿ ಆರೋಪಿಯನ್ನು ಬಂಧಿಸಿ, ಎಲ್ಲ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು ಫಾಸಟ್ಯೆಾಕ್ ಕೋರ್ಟ್‌ನ ಅಗತ್ಯವಿಲ್ಲ ಎಂದು ಹೇಳಿದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 3 =
Remember me
