ಹುಬ್ಬಳ್ಳಿ:ಗುರಾಯಿಸಿದ ಎಂಬ ಕಾರಣಕ್ಕೆ ಯುವಕನನ್ನು ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದ ಆರೋಪಿಗಳಿಗೆ ಕೋರ್ಟ್​ ಜೀವಾವಧಿ ಶಿಕ್ಷೆ ಪ್ರಕಟಿಸಿದೆ. 5ನೇ ಅಪರ ಮತ್ತು ಜಿಲ್ಲಾ ಸತ್ರ ನ್ಯಾಯಾಲಯದ ನ್ಯಾಯಾಧೀಶರಿಂದ ತೀರ್ಪು ಪ್ರಕಟವಾಗಿದೆ.
ಪ್ರಕರಣದ ಹಿನ್ನೆಲೆ:2020ರ ಮಾರ್ಚ್ ನಲ್ಲಿ ಹುಬ್ಬಳ್ಳಿಯ ಪಠಾಣ ಗಲ್ಲಿಯಲ್ಲಿ, ಶಾಬುದ್ದಿನ್ ಎಂಬ ಯುವಕ ಗುರಾಯಿಸಿದ ಎಂಬ ಕಾರಣಕ್ಕೆ ಆರೋಪಿಗಳಾದ ಶಮಸುದ್ದಿನ್ ಸವಣೂರು ಮತ್ತು ಜುಬೇರ್ ಅಹ್ಮದ್ ಅಲಿಯಾಸ್ ಹಾಜಿ ಜೈಲಾನಿ ಚಾಕುವಿನಿಂದ ಇರಿದು ಬರ್ಬರ ಹತ್ಯೆ ಮಾಡಿದ್ದರು.
ಪ್ರಕರಣ ಸಂಭಂದ ಆರೋಪಿಗಳಿಗೆ ಜೀವಾವಧಿ ಕಠಿಣ ಕಾರಾಗೃಹ ಶಿಕ್ಷೆ ಜತೆಗೆ ತಲಾ 1.50 ಲಕ್ಷ ದಂಡ ವಿಧಿಸಿ ಕೋರ್ಟ್ ತೀರ್ಪು ನೀಡಿದೆ. ದಂಡ ಪಾವತಿಸದೇ ಇದ್ದಲ್ಲಿ 2 ವರ್ಷ ಸಾದಾ ಕಾರಾಗೃಹ ಶಿಕ್ಷೆ, ದಂಡದ ಮೊತ್ತದಲ್ಲಿ 1.45 ಲಕ್ಷ ರೂ ಮೃತನ ತಂದೆ ತಾಯಿಗೆ ನೀಡಲು ನ್ಯಾಯಮೂರ್ತಿ ಆದೇಶ ನೀಡಿದ್ದಾರೆ.
‘ಮಲ್ಹಾರಿ’ ಹಾಡಿಗೆ ನಟ ರಣವೀರ್ ಜತೆ ಕೇಂದ್ರ ಸಚಿವರ ಸಖತ್ ಸ್ಟೆಪ್!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + 16 =
Remember me
