ಹುಬ್ಬಳ್ಳಿ:ವಿದ್ಯಾರ್ಥಿನಿ ನೇಹಾ ಪ್ರಕರಣ ಮಾಸುವ ಮುನ್ನವೇ ನಗರದಲ್ಲಿ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಅಪ್ರಾಪ್ತ ಬಾಲಕಿಯನ್ನು ಗರ್ಭಿಣಿ ಮಾಡಿ ಪರಾರಿಯಾಗಿದ್ದ ಅನ್ಯಕೋಮಿನ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ. ಸದ್ದಾಂ ಹುಸೇನ್‌ ಬಂಧಿತ ಆರೋಪಿ.
ಇದನ್ನೂ ಓದಿ:ಪೆನ್‌ಡ್ರೈವ್‌ ಪ್ರಕರಣ: ಎಸ್‌ಐಟಿ ವಿಚಾರಣೆಗೆ ಹಾಜರಾಗುವಂತೆ ಭವಾನಿ ರೇವಣ್ಣಗೆ ನೋಟಿಸ್​!
ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಬಾಲಕಿಯನ್ನು‌ ಕಿಮ್ಸ್‌ ಆಸ್ಪತ್ರೆಗೆ ಕರೆದುಕೊಂಡು ಹೋಗಿ ತಪಾಸಣೆ ಒಳಪಡಿಸಿದ್ದಾರೆ. ಈ ವೇಳೆ ಅಪ್ರಾಪ್ತೆ ಗರ್ಭಿಣಿಯಾಗಿರುವುದು ತಿಳಿದು ಪೋಷಕರು ಶಾಕ್​ ಆಗಿದ್ದಾರೆ. ಸದ್ಯ ಕಿಮ್ಸ್ ಆಸ್ಪತ್ರೆಯಲ್ಲಿ ಬಾಲಕಿಗೆ ಚಿಕಿತ್ಸೆ ನೀಡಲಾಗುತ್ತಿದೆ.
ಅನ್ಯಕೋಮಿನ ಯುವಕನ ವಿರುದ್ಧ ಬಾಲಕಿಯ ಪೋಷಕರು ದೂರು ನೀಡಿದ್ದಾರೆ. ಲೈಂಗಿಕ ದೌರ್ಜನ್ಯ, ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ದೂರು ದಾಖಲಿಸಿರುವುದಾಗಿ ಪೊಲೀಸ್ ಕಮಿಷನರ್ ರೇಣುಕಾ ಸುಕುಮಾರಿಂದ ಅಧಿಕೃತ ಮಾಹಿತಿ ನೀಡಿದ್ದಾರೆ.
ಹುಬ್ಬಳ್ಳಿ ನವನಗರ ಎಪಿಎಂಸಿ ಠಾಣೆಗೆ ಪೋಷಕರು ಮೊದಲು ದೂರು ನೀಡಿದ್ದರು. ಪ್ರಕರಣ ಬೆಳಕಿಗೆ ಬಂದು 24 ಗಂಟೆಯಾದರೂ ಎಫ್‌ಐಆರ್‌ ದಾಖಲಾಗದ್ದಕ್ಕೆ ಪೊಲೀಸರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿ ಹಿಂದೂ ಸಂಘಟನೆಗಳ ಸದಸ್ಯರು ಪ್ರತಿಭಟನೆ ನಡೆಸಿದ್ದರು. ಪ್ರತಿಭಟನೆಯ ಬೆನ್ನಲ್ಲೇ ಪೊಲೀಸರು ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಿದ್ದಾರೆ.
ಅಪ್ರಾಪ್ತೆ ಆಸ್ಪತ್ರೆಗೆ ಬಂದಿದ್ದುನ್ನು ಅರಿತು ಆಕೆಯ ಕುಟುಂಬಸ್ಥರಿಗೆ ಕರೆ ಮಾಡಿ ಜೀವ ಬೆದರಿಕೆ ಹಾಕಿದ್ದಾನೆ. ಪೊಲೀಸ್ ಠಾಣೆಗೆ ದೂರು ನೀಡಿದರೆ ತಂದೆ-ತಾಯಿ ಕೊಲೆ ಮಾಡುವುದಾಗಿ ಬೆದರಿಸಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ರೋಹಿತ್‌ ವೆಮುಲಾ ದಲಿತ ವಿದ್ಯಾರ್ಥಿಯಲ್ಲ: ಹೈಕೋರ್ಟ್​ಗೆ ಪೊಲೀಸರ ಅಂತಿಮ ವರದಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 2 =
Remember me
