ಹುಬ್ಬಳ್ಳಿ:ವಾಣಿಜ್ಯ ನಗರಿ ಹುಬ್ಬಳಿಯಲ್ಲಿ ಮಧ್ಯರಾತ್ರಿಯೇ ನೆತ್ತರು ಹರಿದಿದ್ದು, ಜೋಡಿ ಕೊಲೆಗೆ ಜನರು ಬೆಚ್ಚಿಬಿದ್ದಿದ್ದಾರೆ.
ಮಂಜುನಾಥ ಕಬ್ಬಿನ್ ಹಾಗೂ ನಿಯಾಜ್ ಕೊಲೆಯಾದ ಯುವಕರು. ಇಬ್ಬರು ಯುವಕರನ್ನು ದುಷ್ಕರ್ಮಿಗಳು ಮಧ್ಯರಾತ್ರಿ ಕೊಚ್ಚಿಕೊಲೆ ಮಾಡಿ ಪರಾರಿಯಾಗಿದ್ದಾರೆ. ಬೆಳಗ್ಗೆ ಸವಿ ನಿದ್ದೆಯಿಂದ ಎದ್ದ ಜನರಿಗೆ ಜೋಡಿ ಕೊಲೆಯ ಸುದ್ದಿ ಆಘಾತವಾಗಿದೆ.
ಇದನ್ನೂ ಓದಿ:ಲವ್​ ಜಿಹಾದ್​ಗೆ ಕುರೂಪಿಯಾದಳಾ ಈ ಸುಂದರಿ: ಮಾಡೆಲ್ ಫೋಟೋ ವೈರಲ್​ ಹಿಂದಿನ ಮರ್ಮವೇನು?​
ಮಾರಾಕಾಸ್ತ್ರಗಳಿಂದ ಬರ್ಬರವಾಗಿ ಕೊಚ್ಚಿ ಕೊಲೆ ಮಾಡಲಾಗಿದೆ. ಹುಬ್ಬಳ್ಳಿಯ ಗೋಪನಕೊಪ್ಪ ಬಸ್ ನಿಲ್ದಾಣದಲ್ಲಿ ಘಟನೆ ನಡೆದಿದೆ. ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಇಬ್ಬರು ಯುವಕರ ಕೊಲೆ ನಡೆದಿದೆ ಎಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಘಟನಾ ಸ್ಥಳಕ್ಕೆ ಕೇಶ್ವಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.(ದಿಗ್ವಿಜಯ ನ್ಯೂಸ್​)
ಪ್ರಿಯಕರನ ಮನೆ ಹತ್ತಿರವೇ ಎಂಬಿಎ ವಿದ್ಯಾರ್ಥಿನಿ ಆತ್ಮಹತ್ಯೆ: ಡೆತ್​ನೋಟ್​ನಲ್ಲಿತ್ತು ಲವ್ವರ್ ಕರಾಳ ಮುಖ!

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:fifteen − one =
Remember me
