ಕರ್ನಾಟಕದ ಸಮೃದ್ಧ ಸಾಹಿತ್ಯ, ಸಾಂಸ್ಕೃತಿಕ ಪರಂಪರೆ ಹಾಗೂ ಹೇರಳ ನೈಸರ್ಗಿಕ ಸಂಪನ್ಮೂಲಗಳನ್ನು ಸಂರಕ್ಷಿಸಲು ಪ್ರಾಶಸ್ಱ ನೀಡಿರುವ ಸರ್ಕಾರ ತಂತ್ರಜ್ಞಾನವನ್ನು ಕನ್ನಡಭಾಷೆಗೆ ಇನ್ನಷ್ಟು ಒಗ್ಗಿಸುವ ಮೂಲಕ ಕನ್ನಡ ಸಾಹಿತ್ಯಸಿರಿಯನ್ನು ಮುಂದಿನ ಪೀಳಿಗೆಗೆ ಉಣಬಡಿಸುವ ಉದ್ದೇಶವನ್ನು ಹೊಂದಿದೆ.
ಸಂತೆಶಿವರ ಗ್ರಾಮದ ಅಭಿವೃದ್ಧಿ:ಪ್ರಖ್ಯಾತ ಕಾದಂಬರಿಕಾರ ಡಾ. ಎಸ್.ಎಲ್. ಭೈರಪ್ಪ ಹುಟ್ಟೂರಾದ ಹಾಸನ ಜಿಲ್ಲೆಯ ಸಂತೆಶಿವರ ಗ್ರಾಮದ ಅಭಿವೃದ್ಧಿಗೆ ಐದು ಕೋಟಿ ರೂ.
ಅನುಭವ ಮಂಟಪಕ್ಕೆ ನೆರವು:12ನೇ ಶತಮಾನದ ‘ಅನುಭವ ಮಂಟಪ’ ಜಗತ್ತಿನ ಮೊದಲನೆಯ ಸಂಸತ್ ಎಂದೇ ಹೆಸರಾಗಿದೆ. ಬಸವಾದಿ ಶರಣರ ವಿಚಾರಧಾರೆಗಳನ್ನು ಮುಂದಿನ ಪೀಳಿಗೆಗೆ ತಿಳಿಸುವ ದೃಷ್ಟಿಯಿಂದ ಬಸವಕಲ್ಯಾಣದಲ್ಲಿ 500 ಕೋಟಿ ರೂಪಾಯಿ ವೆಚ್ಚದಲ್ಲಿ ಅನುಭವ ಮಂಟಪ ನಿರ್ವಿುಸುವ ಗುರಿ ಇದ್ದು, ನೂರು ಕೋಟಿ ರೂ. ಒದಗಿಸಲಾಗಿದೆ.
ಕಂಚಿನ ಪುತ್ಥಳಿ:ಚಿತ್ರದುರ್ಗದ ಶ್ರೀ ಮುರುಘಾಮಠದ ಆವರಣದಲ್ಲಿ ನಿರ್ವಿುಸಲಾಗುತ್ತಿರುವ 325 ಅಡಿ ಎತ್ತರದ ಶ್ರೀ ಜಗಜ್ಯೋತಿ ಬಸವೇಶ್ವರರ ಕಂಚಿನ ಪುತ್ಥಳಿ ಯೋಜನೆಗಾಗಿ -ಠಿ; 20 ಕೋಟಿ ನೆರವು.
ವಿಜ್ಞಾನೇಶ್ವರ ಅಧ್ಯಯನ ಪೀಠ:ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯದಲ್ಲಿ ಒಂದು ಕೋಟಿ ರೂ. ವೆಚ್ಚದಲ್ಲಿ ‘ವಿಜ್ಞಾನೇಶ್ವರ ಅಧ್ಯಯನ ಪೀಠ’ ಸ್ಥಾಪನೆ.
ಕೆಂಪೇಗೌಡರ ಕಂಚಿನ ಪ್ರತಿಮೆ:ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪ್ರದೇಶದಲ್ಲಿ -ಠಿ; 66 ಕೋಟಿ ವೆಚ್ಚದಲ್ಲಿ ನಾಡಪ್ರಭು ಕೆಂಪೇಗೌಡರ 100 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ವಣ.
ಜಕಣಾಚಾರಿ ಸ್ಮರಣೆ:ಸರ್ಕಾರದ ವತಿಯಿಂದ ಪ್ರತಿವರ್ಷ ಜನವರಿ 1ರಂದು ರಾಜ್ಯಾದ್ಯಂತ ವಿಶ್ವಕರ್ಮ ಅಮರಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನ ಆಚರಿಸಲು ನಿರ್ಧಾರ. ಸರಳ ತ್ರಿಪದಿಗಳ ಮೂಲಕ ಸಾರ್ವಕಾಲಿಕ ತತ್ತ್ವಗಳನ್ನು ಪ್ರತಿಪಾದಿಸಿದ ಕವಿ ಸರ್ವಜ್ಞನ ಹೆಸರಿನಲ್ಲಿ ಹಾವೇರಿ ಜಿಲ್ಲೆ ಹಿರೇಕೆರೂರು ತಾಲ್ಲೂಕಿನಲ್ಲಿ ಕಾರ್ಯನಿರ್ವಹಿಸುತ್ತಿರುವ ಸರ್ವಜ್ಞ ಅಭಿವೃದ್ಧಿ ಪ್ರಾಧಿಕಾರದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗಾಗಿ ಪ್ರೋತ್ಸಾಹ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + thirteen =
Remember me
