ಬಾಗಲಕೋಟೆ:ಬೇಸಿಗೆ ಆರಂಭದಲ್ಲೇ ಅಗ್ನಿ ಆಕಸ್ಮಿಕ ಪ್ರಕರಣಗಳು ಒಂದರ ಮೇಲೊಂದು ವರದಿಯಾಗಿದ್ದು, ಇದೀಗ ಸಚಿವ ಮುರುಗೇಶ್ ನಿರಾಣಿ ಒಡೆತನದ ಸಕ್ಕರೆ ಕಾರ್ಖಾನೆ ಆವರಣದಲ್ಲೂ ಬೆಂಕಿ ಕಾಣಿಸಿಕೊಂಡಿದೆ. ಅಗ್ನಿಜ್ವಾಲೆಯನ್ನು ನಂದಿಸಲು ಸುಮಾರು 8 ಅಗ್ನಿಶಾಮಕ ವಾಹನಗಳನ್ನು ತರಿಸಿಕೊಳ್ಳಬೇಕಾಯಿತು.
ಜಮಖಂಡಿ ತಾಲೂಕಿನ ಹಿಪ್ಪರಗಿ ಬಳಿ ಇರುವ ಸಾಯಿ ಪ್ರಿಯಾ ಸಕ್ಕರೆ ಕಾರ್ಖಾನೆ ಆವರಣದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ. ಕಾರ್ಖಾನೆ ಆವರಣದಲ್ಲಿ ಕೂಡಿಟ್ಟಿದ್ದ ಬಯೋವೇಸ್ಟ್​ ರಾಶಿಗೆ ಬೆಂಕಿಬಿದ್ದಿದ್ದು, ಅಗ್ನಿಜ್ವಾಲೆ ಧಗಧಗಿಸಿ ಉರಿದಿದೆ.
ಇದನ್ನೂ ಓದಿ:ಗಾರ್ಮೆಂಟ್ ಫ್ಯಾಕ್ಟರಿಯ ಯಂತ್ರಕ್ಕೆ ಸಿಲುಕಿ ಯುವತಿ ಸಾವು; ಜೀವ ಕಳೆದುಕೊಳ್ಳುವಂತೆ ಮಾಡಿತು ಸಣ್ಣದೊಂದು ಆಕಸ್ಮಿಕ
ಕೂಡಲೇ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದರಿಂದ, 8 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿವೆ. ಪರಿಣಾಮವಾಗಿ ಬೆಂಕಿ ಹತೋಟಿಗೆ ಬಂದಿದ್ದರಿಂದ ಸಂಭಾವ್ಯ ಅನಾಹುತ ತಪ್ಪಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಜಮಖಂಡಿ ಗ್ರಾಮೀಣ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.
ಎರಡೆರಡು ಸಲ ಲಸಿಕೆ ಪಡೆದರೂ ಕರೊನಾ ಬಂತು!; ವ್ಯಾಕ್ಸಿನ್​ ತಗೊಂಡ ಜಿಲ್ಲಾಧಿಕಾರಿಗೂ ಸೋಂಕು!​

ತಾಳಿ ಕಟ್ಟಿಸಿಕೊಳ್ಳಲು ಒಪ್ಪದ ಬಾಲಕಿಯ ಕತ್ತನ್ನೇ ಸೀಳಿ ಭೀಕರವಾಗಿ ಕೊಂದ ಪಾಪಿ ಯುವಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 1 =
Remember me
