ಬೀದರ್:ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದಿನಿಂದ ಪ್ರಧಾನಿ ಮೋದಿ ಬಿರುಸಿನ ಪ್ರಚಾರಕ್ಕೆ ಇಳಿದಿದ್ದಾರೆ. ಗಡಿ ಜಿಲ್ಲೆ ಬೀದರ್​ಗೆ ಆಗಮಿಸಿರುವ ಮೋದಿ ಇಂದು ಭರ್ಜರಿ ಪ್ರಚಾರ ನಡೆಸಲಿದ್ದು, ಮೋದಿ ಸಮಾವೇಶಕ್ಕೆ ಜನಸಾಗರವೇ ಹರಿದು ಬರುತ್ತಿದೆ.
ಬೀದರ್​ನ ಹುಮನಾಬಾದ್​ನಲ್ಲಿ ನಡೆಯಲ್ಲಿರುವ ಬಿಜೆಪಿ ಸಮಾವೇಶಕ್ಕೆ ಜಿಲ್ಲೆಯ ಮೂಲೆ ಮೂಲೆಗಳಿಂದ ಜನ ಸಾಗರ ಹರಿದು ಬರುತ್ತಿದೆ. ಮಹಿಳೆಯರು, ಮಕ್ಕಳು ಹಾಗೂ ಅಂಗವಿಕಲರೆನ್ನದೇ ಪ್ರಧಾನಿ ನರೇಂದ್ರ ಮೋದಿ ಭಾಷಣ ಕೇಳುವುದಕ್ಕೆ ಜನರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.
ಇದನ್ನೂ ಓದಿ:ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕ್ಷಮೆಯಾಚಿಸಲಿ: ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿ.ಪಿ.ಉಮೇಶ್ ಒತ್ತಾಯ
ಹುಮನಾಬಾದ್ ಕ್ಷೇತ್ರದ ಚೀನಕೇರಾ ಕ್ರಾಸ್ ಬಳಿ ಸಮಾವೇಶ ನಡೆಯಲಿದೆ. ಮೋದಿ ಅಧ್ಯಕ್ಷತೆಯಲ್ಲಿ ಬೃಹತ್ ಬಿಜೆಪಿ ಸಮಾವೇಶ ನಡೆಯುತ್ತಿದ್ದು, ಸಾಕಷ್ಟು ಜನರು ಆಗಮಿಸುತ್ತಿದ್ದಾರೆ. ಸಮಾವೇಶದ ಸುತ್ತಮುತ್ತ ಪೊಲೀಸ್ ಸರ್ಪಗಾವಲು ಇದೆ. 9 ಕ್ಷೇತ್ರಗಳಿಂದ ಮೋದಿ ಸಮಾವೇಶಕ್ಕೆ ಬೃಹತ್​ ಸಂಖ್ಯೆಯಲ್ಲಿ ಜನರು ಆಗಮಿಸುತ್ತಿದೆ. ಬಸವಣ್ಣನ ಕರ್ಮಭೂಮಿ ಬೀದರ್​ನಲ್ಲಿ ಮೋದಿ ಮತ ಬೇಟೆಗೆ ಇಳಿದಿದ್ದಾರೆ.
ಕಲ್ಯಾಣ ನಾಡಿನಲ್ಲಿ ಪ್ರಧಾನಿ ಮೋದಿ ಹವಾಬೀದರ್ ವಾಯುನೇಲೆಯಿಂದ ಹುಮನಾಬಾದ ಚಿನ್ನಕೇರಾ ಕ್ರಾಸ್​ನ ಬಳಿ ನಡೆಯಲ್ಲಿರುವ ಸಮಾವೇಶದ ಸ್ಥಳಕ್ಕೆ ಮೂರು ಹೆಲಿಕಾಪ್ಟರ್ ಮೂಲಕ ಪ್ರಧಾನಿ ಮೋದಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಸಿ.ಎಂ ಯಡಿಯೂರಪ್ಪ ಆಗಮಿಸಿದ್ದಾರೆ. ನೀರಿಕ್ಷೆಗೂ ಮೀರಿ ಜನರು ಸೇರಿದ್ದಾರೆ.(ದಿಗ್ವಿಜಯ ನ್ಯೂಸ್​)
ಬೀದರ್​ ವಾಯುನೆಲೆ​ಗೆ ಬಂದಿಳಿದ ಪ್ರಧಾನಿ ಮೋದಿ! ರಂಗೇರಿತು ಚುನಾವಣಾ ಕಣ

ಸುಡಾನ್​ನಿಂದ ಬಂದವರಲ್ಲಿ ಹಳದಿ ಜ್ವರ? ಲಸಿಕೆ ಪಡೆಯದೇ ಬಂದ 45 ಜನರ ಕ್ವಾರಂಟೈನ್

ಜಿ. ಪರಮೇಶ್ವರ್​ ಮೇಲೆ ಕಲ್ಲೆಸೆತ ಪ್ರಕರಣ: 2 ಆಯಾಮದಲ್ಲಿ ತನಿಖೆ ಶುರು ಮಾಡಿದ ಪೊಲೀಸರು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + seventeen =
Remember me
