ಬೆಂಗಳೂರು: ನಿರುದ್ಯೋಗಿ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲು ಮಾ.15ರಂದು ನಗರದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ.
ನಂದಿನಿ ಬಡಾವಣೆಯ ಜಿ.ಎಸ್. ಇಂಟರ್​ನ್ಯಾಷನಲ್ ಶಾಲೆ ಆವರಣದಲ್ಲಿ ನಡೆಯುವ ಮೇಳವನ್ನು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಉದ್ಘಾಟಿಸಲಿದ್ದಾರೆ. ಗಾರ್ವೆಂಟ್ ಕಂಪನಿಗಳು, ಟಾಟಾ, ವೋಲ್ವೋ, ಮೈಕ್ರೋಸಾಫ್ಟ್ ಸೇರಿ ಹಲವು ಪ್ರತಿಷ್ಠಿತ ಸಂಸ್ಥೆಗಳು ಭಾಗವಹಿಸುತ್ತಿವೆ ಎಂದು ಕೇಂದ್ರ ಸಚಿವ ಡಿ.ವಿ. ಸದಾನಂದ ಗೌಡ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಎಸ್ಸೆಸ್ಸೆಲ್ಸಿಯಿಂದ ಸ್ನಾತಕೋತ್ತರ ಪದವಿವರೆಗೆ ವ್ಯಾಸಂಗ ಮಾಡಿರುವವರು, ವೃತ್ತಿಪರ ಕೋರ್ಸ್​ಗಳಲ್ಲಿ ಶಿಕ್ಷಣ ಪಡೆದವರು ಮೇಳದಲ್ಲಿ ಭಾಗವಹಿಸಬಹುದು. ಹೆಚ್ಚಿನ ಮಾಹಿತಿಗೆ ದೂ: 9513440261, 70220 20000 ಸಂರ್ಪಸಬಹುದು. ಡಿಡಿಡಿ.ಚಿಚ್ಞಜಚ್ಝಟ್ಟಛ್ಠಿಛಢಟಜಚಞಛ್ಝಿಚ.ಜ್ಞಿ ಮೂಲಕವೂ ಮಾಹಿತಿ ಪಡೆಯಬಹುದು ಎಂದರು.
ದೇಶದಲ್ಲಿ ಉದ್ಯೋಗ ಸೃಷ್ಟಿ ಮಾಡ ಬೇಕೆಂಬುದು ಪ್ರಧಾನಿ ನರೇಂದ್ರ ಮೋದಿ ಕನಸಾಗಿದೆ. ಮೊದಲ ಬಾರಿಗೆ ಮಹಾಲಕ್ಷ್ಮೀ ಲೇಔಟ್​ನಿಂದ ಮೇಳ ಆರಂಭಿಸುತ್ತಿದ್ದೇವೆ. ಎಫ್​ಕೆಸಿಸಿಐ, ಕಾಸಿಯಾ ಸೇರಿ ಅನೇಕ ಸಂಸ್ಥೆಗಳು ನಮ್ಮ ಜತೆ ಕೈ ಜೋಡಿಸಿವೆ ಎಂದರು. ಕನಿಷ್ಠ 500 ಜನರಿಗಾದರೂ ಉದ್ಯೋಗದ ನೇಮಕ ಪತ್ರ ಕೊಡಬೇಕು ಅಂದುಕೊಂಡಿದ್ದೇವೆ. ಈಗಾಗಲೇ 1,500 ಮಂದಿ ನೋಂದಣಿ ಮಾಡಿಕೊಂಡಿದ್ದಾರೆ. ಯುವ ಸಮು ದಾಯ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಸದಾನಂದಗೌಡ ಮನವಿ ಮಾಡಿದರು.
ಎಫ್​ಕೆಸಿಸಿಐ ಮಾಜಿ ಅಧ್ಯಕ್ಷ ಜನಾರ್ದನ, ಕಾಸಿಯಾ ಅಧ್ಯಕ್ಷ ರಾಜು, ಪಾಲಿಕೆ ಸದಸ್ಯ ರಾಜೇಂದ್ರಕುಮಾರ್ ಮತ್ತಿತರರು ಉಪಸ್ಥಿತರಿದ್ದರು.
ಆರ್​ಎಸ್​ಎಸ್ ಮುಖಂಡ ಮೋಹನ್ ಭಾಗವತ್ ಹತ್ಯೆಗೆ ಸಂಚು ನಡೆದಿದೆ ಎಂಬ ಮಾಹಿತಿ ಹಿನ್ನೆಲೆಯಲ್ಲಿ ಎಲ್ಲ ರೀತಿಯ ಭದ್ರತೆಯನ್ನು ಕೇಂದ್ರ ಸರ್ಕಾರದಿಂದ ನೀಡಲಾಗಿದೆ.
| ಡಿ.ವಿ. ಸದಾನಂದಗೌಡ ಕೇಂದ್ರ ಸಚಿವ
ಸೇವಾ ಭದ್ರತೆಗಾಗಿ ಅತಿಥಿ ಉಪನ್ಯಾಸಕರ ಹೋರಾಟ; ಅಗತ್ಯ ದಾಖಲೆಗಳ ಕ್ರೋಡೀಕರಣ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 7 =
Remember me
