ಬೆಂಗಳೂರು:ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ನಂದಿ ಪರ್ವತ ಆಶ್ರಮದ ಜೈನ ಮುನಿ ಕಾಮಕುಮಾರ ನಂದಿ ಮಹಾರಾಜ ಅವರ ಹತ್ಯೆ ಖಂಡಿಸಿ ರಾಜ್ಯಾದ್ಯಂತ ಜೈನ ಸಮುದಾಯದವರು ಸೋಮವಾರ ಬೃಹತ್​ ಪ್ರತಿಭಟನೆ ನಡೆಸಿದ್ದಾರೆ.
ಕಾಮಕುಮಾರ ನಂದಿ ಮಹಾರಾಜರನ್ನು ಹತ್ಯೆ ಮಾಡಿದ ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಿ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಜೈನ ಸಮಾಜದ ಮುಖಂಡರು ಆಗ್ರಹಿಸಿದ್ದಾರೆ. ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಬೆಳಗಾವಿ, ಹಾವೇರಿ, ಧಾರವಾಡ ಸೇರಿದಂತೆ ರಾಜ್ಯಾದ್ಯಂತ ಜೈನ ಸಮಾಜದವರು ಬೃಹತ್​ ಸಂಖ್ಯೆಯಲ್ಲಿ ಜಮಾಯಿಸಿ ಮೌನ ಪ್ರತಿಭಟನೆ ನಡೆಸಿದ್ದಾರೆ.
ನಂದಿ ಮಹಾರಾಜರು ಅಧಿಕಾರ ವಹಿಸಿಕೊಂಡ ಅಲ್ಫಾವಧಿಯಲ್ಲೇ ಆಶ್ರಮವನ್ನು ಉತ್ತಮವಾಗಿ ಬೆಳೆಸಿದ್ದಾರೆ. ಇನ್ನಷ್ಟು ಬೆಳೆಸಬೇಕೆಂಬ ಮಹಾದಾಸೆ ಹೊಂದಿದ್ದರು. ಅಹಿಂಸಾ ಮಾರ್ಗವನ್ನು ಪಾಲಿಸುವ ಜೈನ ಮುನಿಗಳನ್ನು ಬರ್ಬರವಾಗಿ ಹತ್ಯೆ ಮಾಡಿರುವುದು ಖಂಡನೀಯ. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆಗಳು ನಡೆಯದಂತೆ ಎಚ್ಚರವಹಿಸಬೇಕು. ಹತ್ಯೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಪ್ರತಿಭಟನಾ ನಿರತರು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.
ಇದನ್ನೂ ಓದಿ:ಮಕ್ಕಳು ಮಾಡಿಕೋ ಎಂದಿದ್ದಕ್ಕೆ ಸಿಟ್ಟು; ಒಂದೇ ಕುಟುಂಬದ ಮೂವರ ಹತ್ಯೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 − two =
Remember me
