
ಬೆಂಗಳೂರು:ರಾಜ್ಯ ಸರಕಾರವು ಹುಕ್ಕಾ ಬಾರ್ ನಿಷೇಧಿಸಿದ ಕ್ರಮವನ್ನು ಬಿಜೆಪಿ ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಮತ್ತು ಶಾಸಕ ಸಿ.ಕೆ. ರಾಮಮೂರ್ತಿ ಸ್ವಾಗತಿಸಿದ್ದಾರೆ.ಹುಕ್ಕಾ ಬಾರ್‌ಗಳಿಂದ ರಾಜ್ಯದ ಯುವ ಜನತೆ ದುಶ್ಚಟಕ್ಕೆ ಬಲಿ ಆಗುತ್ತಿದ್ದರು. ಪೋಷಕರು ಕೂಡ ತಮ್ಮ ಮಕ್ಕಳ ಭವಿಷ್ಯದ ಕುರಿತು ಆತಂಕ ಪಡುವಂತಾಗಿತ್ತು. ಇದೇ ವಿಚಾರವನ್ನು ನಾನು ಈ ಹಿಂದೆ ಸದನದಲ್ಲೂ ಕೂಡ ಪ್ರಸ್ತಾಪಿಸಿದ್ದೆ ಎಂದು ಹೇಳಿದ್ದಾರೆ.ಹುಕ್ಕಾ ಬಾರ್ ನಿಷೇಧಕ್ಕೆ ಕುರಿತು ಸದನ ಸಮಿತಿಗೆ ಶಿಫಾರಸು ಮಾಡಲಾಗಿತ್ತು. ಇದೀಗ ಸರಕಾರವು ಸಾರ್ವಜನಿಕ ಹಿತಾಸಕ್ತಿಯನ್ನು ಪರಿಗಣಿಸಿ, ತಂಬಾಕು, ನಿಕೋಟಿನ್ ಸಹಿತ ಮತ್ತು ರಹಿತ ಎಲ್ಲ ಮಾದರಿಯ ಹುಕ್ಕಾ ನಿಷೇಧಿಸಿ ಆದೇಶಿಸಿರುವುದು ಸ್ವಾಗತಾರ್ಹ ಕ್ರಮ ಎಂದಿದ್ದಾರೆ.ಯುವಜನತೆಯ ಭವಿಷ್ಯವನ್ನು ಗಮನದಲ್ಲಿ ಇಟ್ಟುಕೊಂಡು ರಾಜ್ಯ ಸರಕಾರವು ತನ್ನ ನಿಷೇಧ ಕುರಿತ ಆದೇಶವನ್ನು ಗಂಭೀರವಾಗಿ ಪರಿಗಣಿಸಬೇಕು. ಯಾವುದೇ ಒತ್ತಡಕ್ಕೆ ಮಣಿಯದೆ ಕೂಡಲೇ ಹುಕ್ಕಾ ಬಾರ್ಗಳನ್ನು ಬಂದ್ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × two =
Remember me
