ಬೆಂಗಳೂರು:ಸೇವೆ ಎಂಬ ಸರಳ ಮಾರ್ಗದಿಂದ ಸಾರ್ಥಕತೆ ಪಡೆದ ಶ್ರೀಸತ್ಯಸಾಯಿ ಬಾಬಾರವರು ತಮ್ಮ ಸಂಸ್ಥೆಯ ಮೂಲಕ ಸಮಾಜಕ್ಕೆ ಮಾಡಿದ ಸೇವೆ ಅಪಾರ ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮಿಗಳು ಅಭಿಪ್ರಾಯಿಸಿದ್ದಾರೆ.
ಭೂಮಿಯ ಮೇಲೆ ಹುಟ್ಟಿದ ವ್ಯಕ್ತಿ ಜೀವನದಲ್ಲಿ ಸಾರ್ಥಕತೆ ಪಡೆಯಲು ಹಲವು ಮಾರ್ಗಗಳಿವೆ. ಅವುಗಳಲ್ಲಿ ಸೇವೆ ಪ್ರಮುಖವಾದ ಮಾರ್ಗ. ಬೇರೆಲ್ಲಾ ಮಾರ್ಗಗಳಿಂದ ಕೇವಲ ಆತ್ಮೋನ್ನತಿ, ಆತ್ಮಜ್ಞಾನ, ಅರಿವು ಇತ್ಯಾದಿ ಲಭ್ಯವಾದರೆ; ಸೇವೆಯಿಂದ ಆತ್ಮತೃಪ್ತಿ ಲಭಿಸುತ್ತದೆ. ಅಂತಹ ಸೇವಾ ಮಾರ್ಗವನ್ನು ಆಯ್ಕೆ ಮಾಡಿಕೊಂಡು ಶ್ರೀಸತ್ಯಸಾಯಿ ಬಾಬಾರವರು ಇಡೀ ಜಗತ್ತಿನ ಗಮನ ಸೆಳೆದ ಮಹಾತ್ಮರು. ಅವರ ವಿಚಾರಧಾರೆಗಳ ಆಧಾರದಲ್ಲಿ ನಡೆಯುತ್ತಿರುವ ಶ್ರೀಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಸರ್ಕಾರಿ ಶಾಲಾ ಮಕ್ಕಳಿಗೆ ರಾಗಿ ಮಾಲ್ಟ್ ವಿತರಿಸುತ್ತಿರುವುದು ಅಭಿನಂದನಾರ್ಹ ಎಂದರು.
ಕರ್ನಾಟಕ ಸೇರಿದಂತೆ ಇತರೆ ರಾಜ್ಯಗಳ ಸುಮಾರು 90 ಲಕ್ಷ ಪ್ರಾಥಮಿಕ ಹಾಗೂ ಪ್ರೌಢಶಾಲಾ ಮಕ್ಕಳಿಗೆ ಸಾಯಿಶೋರ್ ರಾಗಿ ಹೆಲ್ತ್ ಮಿಕ್ಸ್ ಮಾರ್ಟ್‌ನ್ನು ಉಚಿತವಾಗಿ ನೀಡುತ್ತಿರು ಮುದ್ದೇನಹಳ್ಳಿ ಶ್ರೀ ಸತ್ಯಸಾಯಿ ಅನ್ನಪೂರ್ಣ ಟ್ರಸ್ಟಿನ ಸಾಮಾಜಿಕ ಸೇವೆಯನ್ನು ಪರಿಗಣಿಸಿ ಅಂತಾರಾಷ್ಟ್ರೀಯ ಸ್ವಯಂ ಸೇವಾ ಸಂಸ್ಥೆಗಳ ದಿನಾಚರಣೆಯ ಪ್ರಯುಕ್ತ ಕರ್ನಾಟಕ ರಾಜ್ಯ ಬಿಸಿಯೂಟ ಸೇವಾ ಸಂಸ್ಥೆಗಳ ಒಕ್ಕೂಟದ ಪರವಾಗಿ ಸದ್ಗುರು ಶ್ರೀ ಮಧುಸೂದನ್ ಸಾಯಿ ಅವರಿಗೆ ಗೌರವ ಸಲ್ಲಿಸಲಾಯಿತು.
ಶ್ರೀ ಮಧುಸೂದನ್ ಸಾಯಿ ಅವರ ಪರವಾಗಿ ಶ್ರೀ ಸತ್ಯಸಾಯಿ ಮಾನವ ಅಭ್ಯುದಯ ವಿಶ್ವವಿದ್ಯಾಲಯದ ಕುಲಪತಿ ಬಿ.ಎನ್. ನರಸಿಂಹಮೂರ್ತಿ ಅವರು ಗೌರವವನ್ನು ಸ್ವೀಕರಿಸಿ ಮಾತನಾಡಿ, ಸತ್ಯಸಾಯಿ ಟ್ರಸ್ಟ್ ದೇಶ ವಿದೇಶಗಳಲ್ಲಿ ಇಂತಹ ಸೇವಾಪರ ಕಾರ್ಯ ಮಾಡುತ್ತಿದೆ. ಕಳೆದ ಮಾರ್ಚ್‌ನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಈ ಸಂಸ್ಥೆಗೆ ಭೇಟಿ ನೀಡಿ ಉಚಿತ ಆರೋಗ್ಯ ಆಸ್ಪತ್ರೆಯನ್ನು ಉದ್ಘಾಟಿಸಿದ್ದಾರೆ. ಸಂಸ್ಥೆಯ ಸೇವೆಯನ್ನು ಮನಗಂಡು ಕರ್ನಾಟಕ ರಾಜ್ಯ ಬಿಸಿಯೂಟ ಸ್ವಯಂ ಸೇವಾ ಸಂಸ್ಥೆಗಳ ಒಕ್ಕೂಟದ ಅಧ್ಯಕ್ಷರಾದ ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅವರು ಅಭಿನಂದಿಸಿದ್ದಕ್ಕೆ ಧನ್ಯವಾದ ಅರ್ಪಿಸಿದರು.
ಈ ಸಂದರ್ಭದಲ್ಲಿ ಶ್ರೀ ಸತ್ಯಸಾಯಿ ಲೋಕಸೇವಾ ಸಮೂಹ ಸಂಸ್ಥೆಗಳ ಸಂಪರ್ಕಾಧಿಕಾರಿ ಗೋವಿಂದ ರೆಡ್ಡಿ, ಸತ್ಯಸಾಯಿ ಅನ್ನಪೂರ್ಣ ಟ್ರಸ್ಟ್ ಕಾರ್ಯದರ್ಶಿ ಆನಂದ ಕಡಲಿ, ಸಾಯಿಪ್ರಸಾದ ಯುವನೂರಿ, ಡಾ. ಕೆ.ಭೀಮಾ, ಅಪ್ಪಾಜಿ ಗೌಡ, ರವೀಂದ್ರ ಕುಮಾರ ಇನ್ನಿತರರು ಉಪಸ್ಥಿತರಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three + 17 =
Remember me
