ಮೈಸೂರು:ಹುಣಸೂರು ನಗರದ ಎಸ್​.ಎಸ್. ಸಾಮಿಲ್​ನಲ್ಲಿ ಜೂನ್​ 22ರಂದು ನಡೆದಿದ್ದ, ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವ ಅಪ್ರಾಪ್ತ ವಯಸಿನ ವಯಸ್ಕರ ಸೇರಿದಂತೆ ಇನ್ನಿಬ್ಬರನ್ನು ವಶಕ್ಕೆ ಪಡೆದಿದ್ಧಾರೆ.
ಬಂಧಿತರನ್ನು ತೌಸಿಫ್​(30) ಎಂದು ಗುರುತಿಸಲಾಗಿದ್ದು, ಈಗ ಗಾಂಜಾ ಮಾರಾಟ ಮಾಡುತ್ತಿದ್ದ. ಅಪ್ರಾಪ್ತ ವಯಸ್ಕರನನ್ನು ಮೈಸೂರಿನಲ್ಲಿರುವ ಬಾಲಮಂದಿರಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ಧಾರೆ.
ಜೂನ್​ 22ರಂದು ಹಣದ ಆಸೆಗಾಗಿ ಮೂವರು ಆರೋಪಿಗಳು ಹುಣಸೂರಿನ ವಿಶ್ವೇಶ್ವರಯ್ಯ ಸರ್ಕಲ್​ನಲ್ಲಿರುವ ಎಸ್​.ಎಸ್​. ಸಾಮಿಲ್​ನ ಕಾವಲುಗಾರರಾದ ವೆಂಕಟೇಶ್​ ಹಾಗೂ ಮಾನಸಿಕ ಅಸ್ವಸ್ಥ ಷಣ್ಮುಗಂನನ್ನು ಹತ್ಯೆ ಮಾಡಿದ್ದರು.
ಇದನ್ನೂ ಓದಿ:VIDEO| ಇಂತಹ ಪ್ರವಾಸಿಗರನ್ನು ನಿಷೇಧಿಸಬೇಕೆಂದ ನೆಟ್ಟಿಗರು…!
ಹತ್ಯೆ ಬಳಿಕ ಮೃತರ ಜೇಬಿನಲ್ಲಿ ಸಿಕ್ಕ 488 ರೂಪಾಯಿ ಹಣವನ್ನು ದೋಚಿ ಪರಾರಿಯಾಗಿದ್ದರು. ಘಟನೆ ನಡೆದ ಸ್ಥಳದ ಸುತ್ತ ಅಳವಡಿಸಿದ್ದ ಸಿಸಿಟಿವಿ ಕ್ಯಾಮರಾಗಳನ್ನು ಪರಿಶೀಲಿಸಿ ಅಭಿಷೇಕ್​ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದರು.
ಬಂಧಿತ ಆರೋಪಿ ಅಭಿಷೇಕ್​ ನೀಡಿದ ಸುಳಿವಿನ ಮೇರೆಗೆ ಕೃತ್ಯದಲ್ಲಿ ಭಾಗಿಯಾಗಿದ್ದ, ಇನ್ನಿಬ್ಬರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸಿದ್ಧಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − seven =
Remember me
