ಹಾಸನ:ಮಹಿಳೆಯೊಬ್ಬರು ಪತಿ ಮಾತ್ರವಲ್ಲದೆ ಆತನ ಅಣ್ಣನ ಮೇಲೂ ಮಚ್ಚಿನ ಹಲ್ಲೆ ಮಾಡಿದ ಪ್ರಸಂಗವೊಂದು ನಡೆದಿದೆ. ಹಾಸನ ಜಿಲ್ಲೆಯಲ್ಲಿ ಇಂದು ಬೆಳಗ್ಗೆ ಈ ಪ್ರಕರಣ ನಡೆದಿದೆ.
ಹಾಸನ ಜಿಲ್ಲೆ ಬೇಲೂರು ತಾಲೂಕಿನ ಬಸವನಕೊಪ್ಪಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮಮತಾ ಎಂಬಾಕೆ ಮಚ್ಚಿನಿಂದ ಹಲ್ಲೆ ಮಾಡಿದ ಮಹಿಳೆ. ಈಕೆಯ ಪತಿ ದಿನೇಶ್ ಮತ್ತು ಈತನ ಅಣ್ಣ ಮೋಹನ್ ಹಲ್ಲೆಗೊಳಗಾದವರು.
ಇದನ್ನೂ ಓದಿ:ಮತ್ತೊಂದು ಸಹಕಾರಿ ಸಂಘದಲ್ಲಿ ಅವ್ಯವಹಾರ?; ಅಧ್ಯಕ್ಷ-ಸದಸ್ಯರಿಂದಲೇ ಪ್ರತಿಭಟನೆ
ಪತಿ ಅಕ್ರಮವಾಗಿ ಮಾರಾಟವಾಗುತ್ತಿರುವ ಮದ್ಯ ಸೇವಿಸಿ ಬರುತ್ತಿದ್ದ ಕಾರಣಕ್ಕೆ ದಂಪತಿ ಮಧ್ಯೆ ಆಗಾಗ ಜಗಳವಾಗುತ್ತಿತ್ತು. ಇಂದು ಕೂಡ ಬೆಳಗ್ಗೆಯಿಂದ ಇಬ್ಬರ ಮಧ್ಯೆ ಜಗಳ ನಡೆಯುತ್ತಿತ್ತು. ಒಂದು ಹಂತದಲ್ಲಿ ಜಗಳ ಅತಿರೇಕಕ್ಕೆ ಹೋಗಿ ಆಕೆ ಮಚ್ಚಿನಿಂದ ಪತಿ ಮತ್ತು ಆತನ ಅಣ್ಣನ ಮೇಲೆ ಹಲ್ಲೆ ಮಾಡಿದ್ದಾಳೆ.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಗ್ರಾಮದಲ್ಲಿ ಅಕ್ರಮವಾಗಿ ಮದ್ಯ ಮಾರಾಟ ನಡೆಸುತ್ತಿರುವ ಪ್ರಕರಣ ಹೆಚ್ಚಾಗಿದೆ. ಇದರಿಂದ ಪ್ರತಿನಿತ್ಯ ಕುಟುಂಬದಲ್ಲಿ ಜಗಳಗಳು ನಡೆಯುತ್ತಿವೆ. ಹೀಗಾಗಿ ಅಕ್ರಮ ಮದ್ಯ ಮಾರಾಟವನ್ನು ತಡೆಯಬೇಕು ಎಂದು ಗ್ರಾಮಸ್ಥರು ಆಗ್ರಹ ವ್ಯಕ್ತಪಡಿಸಿದ್ದಾರೆ.
ಹೆಂಡತಿಗೆ ಹೆದರಿ ಮನೆ ಬಿಟ್ಟು ಒಂದೂವರೆ ವರ್ಷ ನಾಪತ್ತೆಯಾಗಿದ್ದ ಗಂಡ!

ಪತ್ನಿ ಮೇಲೆ ವಿಕೃತಿ ಮೆರೆದ ಪತಿ; ಇಂಥ ಪೈಶಾಚಿಕ ಕೃತ್ಯ ಯಾರೂ ಮಾಡಿರಲಾರರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven − 8 =
Remember me
