ತುಮಕೂರು:ಎರಡು ಕಾರುಗಳು ಪರಸ್ಪರ ಡಿಕ್ಕಿಯಾಗಿ ಸಂಭವಿಸಿದ ಭೀಕರ ಅಪಘಾತದಲ್ಲಿ ಕಾರುಗಳು ಜಖಂಗೊಂಡಿದ್ದರೆ, ಒಂದು ಕಾರಿನಲ್ಲಿದ್ದ ಪತಿ-ಪತ್ನಿ ಇಬ್ಬರೂ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ.
ತುಮಕೂರು ಹೊರವಲಯದ ನಾಮದ ಚಿಲುಮೆ ರಸ್ತೆಯ ಸಿದ್ದಗಂಗಾ ಕ್ರಾಸ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಆಮ್ನಿ ಹಾಗೂ ಇನ್ನೊಂದು ಕಾರುಗಳ ಮಧ್ಯೆ ಡಿಕ್ಕಿಯಾಗಿದ್ದು, ಆಮ್ನಿಯಲ್ಲಿದ್ದ ದಂಪತಿ ಸ್ಥಳದಲ್ಲೇ ಸಾವಿಗೀಡಾಗಿದ್ದಾರೆ. ಮೃತಪಟ್ಟವರು ಇರಕಸಂದ್ರ ಕಾಲನಿಯ ದಂಪತಿ.
ಇದನ್ನೂ ಓದಿ:ಸೀಮಂತದಲ್ಲಿ ದುರಂತ, ಪಾಲ್ಗೊಂಡ 15 ಜನರಿಲ್ಲ ಈಗ ಜೀವಂತ!; ಆ 9 ಮಂದಿಯಲ್ಲಿ ಭಾರಿ ಆತಂಕ…
ಡಿಕ್ಕಿ ಹೊಡೆದ ಇನ್ನೊಂದು ಕಾರಿನಲ್ಲಿದ್ದ ಬಜರಂಗದಳದ ಜಿಲ್ಲಾ ಸಂಚಾಲಕ ಮಂಜು ಭಾರ್ಗವ್ ಅವರಿಗೆ ಗಂಭೀರವಾದ ಗಾಯಗಳಾಗಿವೆ. ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆದೊಯ್ಯಲಾಗಿದೆ. ಸ್ಥಳಕ್ಕೆ ಕ್ಯಾತ್ಸಂದ್ರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
52ನೇ ವಯಸ್ಸಲ್ಲಿ ಅಮ್ಮನಿಗೆ ಲವ್ ಮ್ಯಾರೇಜ್​; ಸಂತಸಪಟ್ಟ ಮಗನ ಸಂದೇಶವಿದು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + eleven =
Remember me
