ರಾಮನಗರ:ಪ್ರತಿಷ್ಠಿತ ರೆಸಾರ್ಟ್​ನ ವಿಲ್ಲಾವೊಂದರಲ್ಲಿ ನೆಲೆಸಿದ್ದ ದಂಪತಿಯನ್ನು ದುಷ್ಕರ್ಮಿಗಳು ಕೊಲೆ ಮಾಡಿದ್ದು, ಇಬ್ಬರೂ ಬೇರೆ ಬೇರೆ ಕೋಣೆಗಳಲ್ಲಿ ಹತ್ಯೆಗೀಡಾಗಿದ್ದಾರೆ.
ಆಶಾ (63), ರಘುರಾಜ್ (70) ಹತ್ಯೆಗೀಡಾದ ದಂಪತಿ. ರಘುರಾಜ್​ ಏರ್​ಫೋರ್ಸ್ ಪೈಲಟ್ ಆಗಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ಇವರು ಈಗಲ್​ಟನ್​ ರೆಸಾರ್ಟ್​ನ ಸಿ ಬ್ಲಾಕ್​ನ ವಿಲ್ಲಾವೊಂದರಲ್ಲಿ ವಾಸವಿದ್ದರು. ಮನೆಯ ಎರಡು ಪ್ರತ್ಯೇಕ ಕೋಣೆಗಳಲ್ಲಿ ಅವರನ್ನು ಹತ್ಯೆ ಮಾಡಲಾಗಿದೆ.
ಕೆಲವು ವರ್ಷಗಳಿಂದ ಈ ದಂಪತಿ ಇಲ್ಲಿ ವಾಸವಿದ್ದು, ಹಣಕ್ಕಾಗಿ ಕೊಲೆ ಮಾಡಿರಬಹುದು ಎಂದು ಶಂಕಿಸಲಾಗಿದೆ. ವಿಲ್ಲಾ ಭದ್ರತೆಗೆ ನಿಯೋಜಿಸಲಾಗಿದ್ದ ಸೆಕ್ಯುರಿಟಿ ಗಾರ್ಡ್ ಬಗ್ಗೆಯೂ ಅನುಮಾನ ಮೂಡಿದೆ.
ಬಿಡದಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಕೊಲೆ ನಡೆದಿದೆ. ರಾಮನಗರ ಎಸ್​ಪಿ ಸಂತೋಷ್ ಬಾಬು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದು, ಸ್ಥಳಕ್ಕೆ ಶ್ವಾನದಳವನ್ನೂ ಕರೆಸಲಾಗಿದೆ.
ಹಿಜಾಬ್​-ಕೇಸರಿ ಸಂಘರ್ಷದ ನಡುವೆ ಇದೇನಿದು ಮತ್ತೊಂದು?!
ಮದರಸಗೆ ಬರುತ್ತಿದ್ದ ಬಾಲಕಿಯರಿಗೆ ಲೈಂಗಿಕ ಕಿರುಕುಳ ಕೊಡುತ್ತಿದ್ದ ಉಸ್ತಾದ್​ನ ಬಂಧನ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:17 + seven =
Remember me
