ಮೈಸೂರು:ಗಂಡನ ಜತೆ ಮನಸ್ತಾಪ ಹಿನ್ನೆಲೆಯಲ್ಲಿ ಮುನಿಸಿಕೊಂಡು ತವರು ಮನೆ ಸೇರಿದ್ದ ಪತ್ನಿಯನ್ನು ಭೀಕರವಾಗಿ ಹತ್ಯೆ ಮಾಡಿರುವ ಪತಿರಾಯ, ಅಡ್ಡ ಬಂದ ಅತ್ತೆಯ ಕೊಲೆಗೆ ಯತ್ನಿಸಿರುವ ಅಮಾನುಷ ಘಟನೆ ಮೈಸೂರಿನ ಕುಂಬಾರಕೊಪ್ಪಲಿನಲ್ಲಿ ನಡೆದಿದೆ.
ಹರ್ಷಿತಾ (21) ಮೃತ ದುರ್ದೈವಿ. ಮಾದೇಶ್ (30) ಕೊಲೆ ಆರೋಪಿ. ಈತ ಗುಂಡ್ಲುಪೇಟೆ ತಾಲ್ಲೂಕಿನ ಬೇರಂಬಳ್ಳಿ ಗ್ರಾಮದ ನಿವಾಸಿ. ಒಂದು ವರ್ಷದ ಹಿಂದಷ್ಟೇ ಇಬ್ಬರು ಮದುವೆಯಾಗಿದ್ದರು. ಪ್ರಾರಂಭದ ದಿನಗಳಲ್ಲಿ ಈ ಜೋಡಿ ಅನ್ಯೋನ್ಯತೆಯಿಂದ ಇದ್ದರು. ಆದರೆ, ದಿನಗಳು ಕಳೆದಂತೆ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ವಿರಸ ಉಂಟಾಗಿತ್ತು.
ಇದನ್ನೂ ಓದಿ:ದೇಶದ ಶೇಕಡ 44 ಶಾಸಕರ ವಿರುದ್ಧ ಕ್ರಿಮಿನಲ್ ಪ್ರಕರಣ; ಸರಾಸರಿ ಆಸ್ತಿ ಮೌಲ್ಯದಲ್ಲಿ ಕರ್ನಾಟಕ ಮೊದಲ ಸ್ಥಾನ
ಆಗಾಗ ಕಿರಿಕ್ ಮಾಡುತ್ತಿದ್ದ ಮಾದೇಶ್, ಕೊಲೆ ಮಾಡುವುದಾಗಿ ಹರ್ಷಿತಾಳನ್ನು ಬೆದರಿಸುತ್ತಿದ್ದ. ಪತ್ನಿಯ ಜೊತೆ ಮಲಗುವಾಗಲೆಲ್ಲ ಮಚ್ಚು ಇಟ್ಟುಕೊಂಡು ಮಲಗುತ್ತಿದ್ದ. ಇದಕ್ಕೆ ಹೆದರಿದ್ದ ಹರ್ಷಿತಾ ತವರು ಮನೆಗೆ ಸೇರಿದ್ದಳು. ಹರ್ಷಿತಾಳನ್ನು ಮನೆಗೆ ಕರೆದುಕೊಂಡು ಹೋಗಲು ಕುಂಬಾರಕೊಪ್ಪಲಿಗೆ ಮಾದೇಶ್​ ಬಂದಿದ್ದ.
ಮನೆಗೆ ಬರಲು ಹರ್ಷಿತಾ ಒಪ್ಪದಿದ್ದಾಗ, ಸ್ಥಳದಲ್ಲೇ ಭಾರಿ ವಾಗ್ವಾದ ನಡೆದು, ತಾಳ್ಮೆ ಕಳೆದುಕೊಂಡ ಮಾದೇಶ್​, ಚಾಕುವಿನಿಂದ ಹರ್ಷಿತಾ ಮೇಲೆ ದಾಳಿ ಮಾಡಿ, ಮನಬಂದಂತೆ ಚುಚ್ಚಿ ಕೊಲೆ ಮಾಡಿದ್ದಾನೆ. ಈ ವೇಳೆ ಅಡ್ಡಬಂದ ಅತ್ತೆಯನ್ನು ಕೊಲ್ಲಲು ಯತ್ನಿಸಿದ್ದಾರೆ.
ಇದನ್ನೂ ಓದಿ:ದಲಿತರ ಭೂಮಿಗೆ ಕಾಯ್ದೆ ಕವಚ: ಎಸ್​ಸಿ, ಎಸ್​ಟಿ ಪಿಟಿಸಿಎಲ್​ಗೆ ತಿದ್ದುಪಡಿ ತರಲು ಮುಂದಾದ ಸರ್ಕಾರ
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಮೇಟಗಳ್ಳಿ ಪೋಲೀಸರು ಕೊಲೆ ಮಾಡಿದ ಆರೋಪಿ ಮಾದೇಶ್​ನನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಮೇಟಗಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.(ದಿಗ್ವಿಜಯ ನ್ಯೂಸ್​)
ಸಿಎಂ ಮನೆ ಬಳಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಕಾಣಿಸಿಕೊಂಡ ಕಾಲು ನೋವು: ಕಾನ್ಸ್​ಟೆಬಲ್​ ದುರಂತ ಸಾವು

23 ಲಕ್ಷ ಕಾರ್ಡ್​ದಾರರಿಗೆ ಸಿಗುವುದಿಲ್ಲ ಧನಭಾಗ್ಯ: 3 ತಿಂಗಳಿಂದ ರೇಷನ್ ಪಡೆಯದಿದ್ದರೆ ಯೋಜನೆಯಿಂದ ಹೊರಗೆ

ನಾಯಕತ್ವವಿಲ್ಲದೆ ಕಳಾಹೀನ: 18ರ ಬಳಿಕ ರಾಜ್ಯ ಬಿಜೆಪಿಯಲ್ಲಿ ಬದಲಾವಣೆ ಗಾಳಿ ಸಾಧ್ಯತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 9 =
Remember me
