ದೊಡ್ಡಬಳ್ಳಾಪುರ:ತಾಲ್ಲೂಕಿನ ಕಂಟನಕುಂಟೆ ರಾಜ್ಯ ಹೆದ್ದಾರಿ ಬಳಿ ಬೆಳ್ಳಂ ಬೆಳ್ಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬಸ್​ ಹಿಂದಿನಿಂದ ಗುದ್ದಿದ ರಭಸಕ್ಕೆ ಸ್ಕೂಟರ್​ನಲ್ಲಿದ್ದವರು ಕೆಳಗೆ ಬಿದ್ದ ಮೂವರಲ್ಲಿ ಸವಾರ ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತ ವ್ಯಕ್ತಿಯನ್ನು ಪ್ರಕಾಶ್(೩೫) ಎಂದು ಗುರುತಿಸಲಾಗಿದೆ. ಪತ್ನಿಗೆ ಗಂಭೀರ ಗಾಯ, ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅದೃಷ್ಟವಶಾತ್ ಮಗು ಪ್ರಾಣಾಪಾಯದಿಂದ ಪಾರಾಗಿದೆ ಎನ್ನಲಾಗಿದೆ. ಪತ್ನಿ-ಪತ್ನಿ-ಮಗುವಿನ ಕಣ್ಣೇದುರಿಗೆ ಪತಿ ಗಂಭೀರವಾಗಿ ಗಾಯಗೊಂಡು ನರಳಾಡಿ ಪ್ರಾಣಬಿಟ್ಟಿದ್ದಾರೆ.
ಪ್ರಕಾಶ್‌ ತಮ್ಮ ಪತ್ನಿ ಹಾಗೂ ಮಗು ಜತೆಗೆ ಸ್ಕೂಟರ್‌ನಲ್ಲಿ ಬರುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬಸ್‌ ಹಿಂದಿನಿಂದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಪ್ರಕಾಶ್‌ ನಿಯಂತ್ರಣ ತಪ್ಪಿ ಸ್ಕೂಟರ್‌ ಸಮೇತ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಗಂಭೀರ ಗಾಯಗೊಂಡ ಪ್ರಕಾಶ್‌ ನರಳಾಡಿ ಪತ್ನಿ, ಮಗುವಿನ ಎದುರೇ ಜೀವ ಬಿಟ್ಟಿದ್ದಾರೆ.ಬೆಂಗಳೂರು – ಹಿಂದೂಪುರ ರಾಜ್ಯ ಹೆದ್ದಾರಿಯಲ್ಲಿ ದುರ್ಘಟನೆ.
ಹಿಂದೂಪುರದಿಂದ ಬೆಂಗಳೂರು ಕಡೆ ಹೊರಡುತ್ತಿದ್ದ ಖಾಸಗಿ ಬಸ್ ಇದಾಗಿತ್ತು. ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆದುತ್ತಿದೆ.
ಅಕ್ಕ- ತಂಗಿ ಇಬ್ಬರು ಪ್ರೆಗ್ನೆಂಟ್​; ನಟಿ ಮನೆಯಲ್ಲಿ ಡಬಲ್ ಸಂಭ್ರಮ​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one + 7 =
Remember me
