ಚಿಕ್ಕೋಡಿ:ಕುಡಿತಕ್ಕೆ ಹಣ ಕೊಡುತ್ತಿಲ್ಲ ಎಂದು ಹೆಂಡತಿಯನ್ನು ಕೊಲೆ ಮಾಡಿದ್ದ ವ್ಯಕ್ತಿ ಬಳಿಕ ಪಾಪಪ್ರಜ್ಞೆ ಕಾಡಿ ಒಂದೇ ವಾರದಲ್ಲಿ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬಾಳವ್ವ ಮುತ್ತೆಪ್ಪ ಬಿರಾಜ್​ (33) ಕೊಲೆಯಾದ ಮಹಿಳೆ. ಮುತ್ತೆಪ್ಪ ಬಿರಾಜ್ ಕೊಲೆ ಮಾಡಿದ ಪತಿ.
ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಹಂದಿಗುಂದ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಮದ್ಯವ್ಯಸನಿಯಾಗಿದ್ದ ಈತ ಪತ್ನಿ ಕುಡಿತಕ್ಕೆ ಹಣ ನೀಡುತ್ತಿಲ್ಲ ಎಂದು ಸಿಟ್ಟಿನಿಂದ ಆಕೆಯ ತಲೆಗೆ ಒನಕೆಯಿಂದ ಹೊಡೆದು ಕೊಲೆ ಮಾಡಿದ್ದ. ಕಳೆದ ಮಂಗಳವಾರ ಈ ಪ್ರಕರಣ ನಡೆದಿತ್ತು.
ಕೊಲೆ ಮಾಡಿದ ಬಳಿಕ ತಲೆಮರೆಸಿಕೊಂಡಿದ್ದ ಈತ ಇಂದು ತನ್ನ ತೋಟದ ಪಕ್ಕದ ಮರವೊಂದರಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಛೇ.. ಇದೆಂಥ ದುರಂತ!; ಮಗಳಿಗೆ ಮದ್ವೆ ಮಾಡಿಸಿ ಗಂಡನ ಮನೆಗೆ ಕಳಿಸಿದ ಬೆನ್ನಿಗೇ ತಂದೆಯ ಸಾವು..
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 4 =
Remember me
