ದಾವಣಗೆರೆ:ಪತ್ನಿಯ ಶೀಲದ ಕುರಿತು ಅನುಮಾನ ಹೊಂದಿದ್ದ ಪತಿ, ಆಕೆ ಬಹಿರ್ದೆಸೆಗೆಂದು ಹೋಗಿದ್ದಾಗ ಕೊಲೆ ಮಾಡಿದ್ದಾನೆ. ಆದರೆ ಕೊಲೆ ಮಾಡಿದ ಮೂರೇ ಗಂಟೆಗಳಲ್ಲಿ ಪೊಲೀಸರು ಆರೋಪಿ ಪತಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ಚೀಲಾಪುರ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ. ಚೀಲಾಪುರ ಗ್ರಾಮ ನಿವಾಸಿ ರಮೀಜಾಬೀ (45) ಕೊಲೆಯಾದ ಗೃಹಿಣಿ. ಪತಿ ಷಫೀವುಲ್ಲಾ (50) ಕೊಲೆ ಆರೋಪಿ.
ಷಫೀವುಲ್ಲಾ-ರಮೀಜಾಬೀ ಮಧ್ಯೆ ಆಗಾಗ ಜಗಳ ನಡೆಯುತ್ತಿತ್ತು. ಪತ್ನಿಯ ಶೀಲದ ಬಗ್ಗೆ ಶಂಕೆಯಿಂದ ಪತ್ನಿ ಜತೆ ಜಗಳವಾಡುತ್ತಿದ್ದ ಪತಿ, ಇಂದು ಬೆಳಗ್ಗೆ ಆಕೆ ಮನೆ ಸಮೀಪದ ಜಮೀನಿಗೆ ಬಹಿರ್ದೆಸೆಗೆ ತೆರಳಿದ್ದಾಗ ಹಿಂಬಾಲಿಸಿದ್ದಾನೆ. ಅಲ್ಲಿ ಆಕೆಯನ್ನು ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿದ್ದ.
ಇದನ್ನೂ ಓದಿ:#MarriageStrike : ಮದುವೆ ವಿರುದ್ಧ ಪುರುಷರ ಅಭಿಯಾನ!
ಈ ಬಗ್ಗೆ ಪುತ್ರ ಅತಾವುಲ್ಲಾ ಪೊಲೀಸರಿಗೆ ದೂರು ನೀಡಿದ್ದ. ಕೂಡಲೇ ಕಾರ್ಯಪ್ರವೃತ್ತರಾದ ಹೊನ್ನಾಳಿ ಪೊಲೀಸರು, ಘಟನೆ ನಡೆದ ಮೂರೇ ಗಂಟೆಯೊಳಗೆ ಆರೋಪಿಯನ್ನು ಪತ್ತೆ ಮಾಡಿ ಬಂಧಿಸಿದ್ದಾರೆ.
‘ಇವತ್ತು ಹುಟ್ಟಿದ ದಿನ, ಬೇಡ..’ ಎಂದರೂ ಕೇಳದೆ ಮನೆಯಿಂದ ಹೋದಳು: ಜನ್ಮದಿನವೇ ಸಾವಿನ ದಿನವಾಯ್ತು!
ಹೆಣ್ಣೂರಲ್ಲೇ ಹೆಣ್ಣಿಗೆ ಅನ್ಯಾಯ!; ದೂರು ನೀಡಲು ಹೋದರೆ ಲಂಚ ಕೇಳಿದ, ಮಂಚಕ್ಕೂ ಕರೆದ ಪೊಲೀಸ್ ಇನ್​ಸ್ಪೆಕ್ಟರ್​…
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × 4 =
Remember me
