ಆನೇಕಲ್: ಕೊಲೆ ನಡೆದ ಸ್ಥಳಕ್ಕೆ ತೆರಳಿದ್ದ ಪೊಲೀಸರಿಗೆ ಮತ್ತೊಂದು ಶವ ಸಿಕ್ಕ ಪ್ರಕರಣವೊಂದು ನಡೆದಿದೆ. ಬೆಂಗಳೂರು ಗ್ರಾಮಾಂತರ ಪೊಲೀಸರ ಕಾರ್ಯಾಚರಣೆ ವೇಳೆ ಹೀಗೆ ಒಂದು ಕೊಲೆ, ಒಂದು ಆತ್ಮಹತ್ಯೆ ಪ್ರಕರಣ ಕಂಡುಬಂದಿದ್ದು, ಈ ಎಲ್ಲದಕ್ಕೂ ಸಂಬಂಧಿತ ಒಟ್ಟಾರೆ ಹಿನ್ನೆಲೆಯು ಅನಾವರಣಗೊಂಡಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಆನೇಕಲ್​ನ ಬಿಕ್ಕನಹಳ್ಳಿ ಗ್ರಾಮದಲ್ಲಿ ಇಂದು ಮುಂಜಾನೆ ಕೊಲೆಯೊಂದು ನಡೆದಿತ್ತು. ಇಂದು ಬೆಳಗ್ಗೆ ತಾಯಿ ಲಕ್ಷ್ಮಮ್ಮ ಅವರ ಕೊಲೆಯಾಗಿದೆ ಎಂದು ಮಧುರ ಪೊಲೀಸರಿಗೆ ದೂರು ನೀಡಿದ್ದಳು. ಈ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಎಸ್​ಪಿ ಮಲ್ಲಿಕಾರ್ಜುನ್ ಬಾಲದಂಡಿ ಸ್ಥಳಕ್ಕೆ ಭೇಟಿ ನೀಡಿದ್ದರು.
ಇದನ್ನೂ ಓದಿ:ಏಯ್.. ಎಲ್ಲಿಗೆ ಬಂತು ಎಐ(AI)?; ಸೆX ರೋಬೋಗಳಲ್ಲೂ ಕೃತಕ ಬುದ್ಧಿಮತ್ತೆ; ಹಾಸಿಗೆಯಲ್ಲಿ ಸಂಗಾತಿಯೇ ಬೇಕಾಗಲ್ವಂತೆ!
ಕೊಲೆ ನಡೆದಿದ್ದ ಸ್ಥಳಕ್ಕೆ ಹೋಗಿ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಲಕ್ಷ್ಮಮ್ಮನ ಪತಿ ವೆಂಕಟಸ್ವಾಮಿ ಇನ್ನೊಂದು ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು ಕಂಡುಬಂದಿದೆ. ಆ ಬಳಿಕ ವಿಚಾರಣೆ ನಡೆಸಿದಾಗ ಒಂದೊಂದೇ ವಿಷಯ ಹೊರಬಂದಿದೆ ಎಂದು ಎಸ್​ಪಿ ತಿಳಿಸಿದ್ದಾರೆ.
ಇದನ್ನೂ ಓದಿ:ಮಕ್ಕಳನ್ನು ಡೌನ್​ಲೋಡ್ ಮಾಡಿಕೊಳ್ಳುವ ಕಾಲ ಬರಬಹುದಾ?; ಇದೇನಿದು ಅಪ್ಪ-ಅಮ್ಮ ಇಲ್ಲದೆ ಮಗು ಹುಟ್ಟಿಸೋ ಪ್ರಯತ್ನ!
ದಂಪತಿ ಮಧ್ಯೆ ಸಣ್ಣಪುಟ್ಟ ವಿಚಾರಕ್ಕೆ ಗಲಾಟೆ ನಡೆಯುತ್ತಿತ್ತು. ಸಾಲ‌ ಮಾಡಿಕೊಂಡು ಆರ್ಥಿಕವಾಗಿ ಕುಗ್ಗಿದ್ದರು. ಸಾಲಕ್ಕೆ ಸಂಬಂಧಿಸಿದಂತೆ ಬ್ಯಾಂಕ್​ನಿಂದ ನೋಟಿಸ್ ಬಂದಿತ್ತು. ಇದರಿಂದಾಗಿ ಇಬ್ಬರ ಮಧ್ಯೆ ಮತ್ತೆ ಗಲಾಟೆ ಆಗಿದೆ. ಈ ವೇಳೆ ಪತ್ನಿಯನ್ನು ಕೊಲೆಗೈದ ಪತಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಎಸ್​ಪಿ ತಿಳಿಸಿದ್ದಾರೆ.
ಇನ್ನು ಜನನ ಪ್ರಮಾಣಪತ್ರವೇ ಎಲ್ಲದಕ್ಕೂ ದಾಖಲೆ; ಸಂಸತ್ತಲ್ಲಿ ಮಹತ್ವದ ಮಸೂದೆ ಅಂಗೀಕಾರ

ನಿದ್ರಿಸಲು ಯಾರಾದರೂ ಅಡ್ಡಿಪಡಿಸಿದರೆ ಅವರ ವಿರುದ್ಧ ಕೇಸು ದಾಖಲಿಸಬಹುದಾ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 1 =
Remember me
