ಹಾಸನ:ಪತ್ನಿ ತುಂಡುಡುಗೆ ಧರಿಸುತ್ತಾಳೆಂದು ಸಿಟ್ಟಿಗೆದ್ದ ಪತಿ ಆಕೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಹಾಸನ ಜಿಲ್ಲೆ ಅರಸೀಕೆರೆ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ನಡೆದಿದೆ.
ಮೃತ ದುರ್ದೈವಿಯನ್ನು ಜ್ಯೋತಿ (22) ಎಂದು ಗುರುತಿಸಲಾಗಿದ್ದು, ಈಕೆಯ ಪತಿ ಜೀವನ್​ ತಲೆಮಾರಿಸಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿ ಪತ್ತೆಗಾಗಿ ಬಲೆ ಬೀಸಿದ್ದಾರೆ.
ಇದನ್ನೂ ಓದಿ:VIDEO| ಕಾರ್ಖಾನೆಯಲ್ಲಿ ಭೀಕರ ಅಗ್ನಿ ಅವಘಡ; 6 ಮಂದಿ ಸಜೀವ ದಹನ
ಧಾರವಾಡ ಮೂಲದ ಜ್ಯೋತಿ ಹಾಗೂ ಜೀವನ್ ಇಬ್ಬರೂ ಪರಸ್ಪರ ಪ್ರೀತಿಸಿ ವರ್ಷದ ಹಿಂದಷ್ಟೇ ಮದುವೆಯಾಗಿದ್ದರು. ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ರಾಂಪುರ ಗ್ರಾಮದಲ್ಲಿ ಮನೆಯೊಂದರಲ್ಲಿ ವಾಸವಾಗಿದ್ದರು. ಜ್ಯೋತಿ ತುಂಡು ಬಟ್ಟೆ ಧರಿಸುವುದು, ಮಾಡರ್ನ್​ ಉಡುಪು ಧರಿಸುವುದನ್ನು ಈಕೆಯ ಪತಿ ಜೀವನ್​ ವಿರೋಧಿಸುತ್ತಿದ್ದ. ಹೀಗಾಗಿ ಬಟ್ಟೆ ವಿಚಾರಕ್ಕೆ ಇವರಿಬ್ಬರ ನಡುವೆ ಆಗಾಗ ಜಗಳವಾಗುತ್ತಿತ್ತು.
ಶನಿವಾರ ಕುಡ ಜ್ಯೋತಿ ಮಾಡರ್ನ್​ ಬಟ್ಟೆ ಧರಿಸಿ ಹೊರಗೆ ಹೊರಟ್ಟಿದನ್ನು ಗಮನಿಸಿದ ಪತಿ ಜೀವನ್​ ಡ್ರಾಪ್​ ಮಾಡುವುದಾಗಿ ಹೇಳಿ ಆಕೆಯನ್ನು ನಿರ್ಜನ ಪ್ರದೇಶಕ್ಕೆ ಕರೆದೊಯ್ದಿದ್ದಾನೆ. ಬಳಿಕ ಚಾಕುವಿನಿಂದ ಆಕೆಯ ಕುತ್ತಿಗೆ ಸೀಳಿ ಬರ್ಬರವಾಗಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದಾನೆ. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಅರಸೀಕೆರೆ ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಆರೋಪಿಯ ಬಂಧನಕ್ಕೆ ಬಲೆ ಬೀಸಿದ್ದಾರೆ.
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:5 − four =
Remember me
