ಹಾಸನ:ಇಲ್ಲೊಬ್ಬ 17 ವರ್ಷದ ಹಿಂದೆ ಪ್ರೀತಿಸಿ ವಿವಾಹವಾಗಿದ್ದರೂ ಹೆಂಡತಿಯನ್ನೇ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಪಂಪ್‌ಹೌಸ್ ರಸ್ತೆಯಲ್ಲಿ ಈ ಕೊಲೆ ನಡೆದಿದೆ.
ಅಶ್ವಿನಿ (36) ಕೊಲೆಯಾದ ಮಹಿಳೆ. ಜಗದೀಶ್ ಕೊಲೆ ಆರೋಪಿ. ಇವರಿಬ್ಬರೂ 17 ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಮೆಡಿಕಲ್ ಶಾಪ್ ಇಟ್ಟುಕೊಂಡಿದ್ದ ಜಗದೀಶ್, ನಂತರ ಅದರಲ್ಲಿ ನಷ್ಟಕ್ಕೀಡಾಗಿದ್ದ. ನಂತರ ಈತ ಪತ್ನಿ ಜತೆ ಆಗಾಗ ಜಗಳವಾಡುತ್ತಿದ್ದು, ಬೇಸತ್ತ ಹೆಂಡತಿ ಮಕ್ಕಳೊಂದಿಗೆ ಪ್ರತ್ಯೇಕವಾಗಿ ವಾಸವಿದ್ದಳು. ಜತೆಗೆ ಮೆಡ್​ಪ್ಲಸ್​ನಲ್ಲಿ ಕೆಲಸ ಮಾಡುತ್ತ ಜೀವನ ನಿರ್ವಹಿಸುತ್ತಿದ್ದಳು.
ಇದನ್ನೂ ಓದಿ:ಪರೀಕ್ಷೆಗೆ ಹಾಜರಾಗದ ವಿದ್ಯಾರ್ಥಿನಿ; ಹಾಸ್ಟೆಲ್​ನಲ್ಲಿ ನೇತಾಡುತ್ತಿತ್ತು ಶವ!
ಆದರೆ ಇಂದು ಮನೆಗೆ ಹೋಗಿದ್ದ ಜಗದೀಶ್, ಪತ್ನಿಗೆ ಮಾರಕಾಸ್ತ್ರಗಳಿಂದ ಚುಚ್ಚಿ ಕೊಲೆ ಮಾಡಿ ಹೋಗಿದ್ದ. ಮಕ್ಕಳು ಶಾಲೆಯಿಂದ‌ ಮನೆಗೆ ಬಂದಾಗ ತಾಯಿ ರಕ್ತದ ಮಡುವಿನಲ್ಲಿ ಬಿದ್ದಿದ್ದಳು. ನಂತರ ಪೊಲೀಸರಿಗೆ ಸುದ್ದಿ ಮುಟ್ಟಿ, ಅವರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜಗದೀಶ್ ತಲೆಮರೆಸಿಕೊಂಡಿದ್ದು, ಬೇಲೂರು ಠಾಣೆ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಜೀವ ಉಳಿಸಲು ಹೋಗಿ ಪ್ರಾಣ ಕಳ್ಕೊಂಡ್ರು!: ಟೋಲ್​ ಗೇಟ್​ನಲ್ಲಿ ಆ್ಯಂಬುಲೆನ್ಸ್ ಪಲ್ಟಿ, ಮೂವರು ಸ್ಥಳದಲ್ಲೇ ಸಾವು..

ಮಗಳನ್ನು ಅಮೆರಿಕಕ್ಕೆ ಕಳಿಸಿ ಮರಳುತ್ತಿದ್ದ ದಂಪತಿ ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 7 =
Remember me
