ಮಂಡ್ಯ:ದೇವಸ್ಥಾನದಲ್ಲಿ ಕಳ್ಳತನ ಮಾಡಿ ಸಿಕ್ಕಿಬಿದ್ದು ಜೈಲುಪಾಲಾಗಿದ್ದವ ‘ರಾಣಿ’ಯನ್ನು ಕೊಂದು ಹೂತಿಟ್ಟಿದ್ದ ವಿಷಯ ಬೆಳಕಿಗೆ ಬಂದಿದ್ದು, ಇಂದು ಪೊಲೀಸರು ಆಕೆಯ ಶವವನ್ನು ಹೊರತೆಗೆದು ಮಹಜರು ನಡೆಸಿದ್ದಾರೆ.
ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಲ್ಲುವೀರನಹಳ್ಳಿ ಗ್ರಾಮದಲ್ಲಿ ಇಂಥದ್ದೊಂದು ಘಟನೆ ನಡೆದಿದ್ದು, ಶಿವರಾಜು ಅಲಿಯಾಸ್​ ಪಿಚ್ಚ ಎಂಬ 42 ವರ್ಷದ ವ್ಯಕ್ತಿಯೇ ಆರೋಪಿ. ಈತ ದೇವಸ್ಥಾನವೊಂದರಲ್ಲಿ ಕಳ್ಳತನ ಮಾಡಿ ಸಿಕ್ಕಿಹಾಕಿಕೊಂಡಿದ್ದಲ್ಲದೆ ಜೈಲುಪಾಲಾಗಿದ್ದ.
ಅದಕ್ಕೂ ಮೊದಲು ಈತ ತನ್ನ ಪತ್ನಿ ರಾಣಿ (30) ಎಂಬಾಕೆಯನ್ನು ಕೊಲೆಗೈದಿದ್ದಲ್ಲದೆ ಬೇರೆಯವರ ಜಮೀನಿನಲ್ಲಿ ಶವವನ್ನು ಹೂತು ಹಾಕಿದ್ದ. ಸತೀಶ್ ಎಂಬವರ ಜಮೀನಿನಲ್ಲಿ ಹೂತಿಡಲಾಗಿದ್ದ ರಾಣಿಯ ಶವವನ್ನು ಪೊಲೀಸರು ಇಂದು ತಹಶೀಲ್ದಾರ್​ ವಿಜಯಣ್ಣ ಅವರ ಸಮ್ಮುಖದಲ್ಲಿ ಹೊರತೆಗೆದಿದ್ದಾರೆ. ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪ್ರಕರಣದ ಕುರಿತ ಹೆಚ್ಚಿನ ಮಾಹಿತಿ ಇನ್ನಷ್ಟೇ ಬಹಿರಂಗಗೊಳ್ಳಬೇಕಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × one =
Remember me
