ಉತ್ತರಕನ್ನಡ:ಹೆಂಡತಿಯನ್ನು ಕೊಂದ ವ್ಯಕ್ತಿಯೊಬ್ಬ ಬಳಿಕ ಪೊಲೀಸ್ ಠಾಣೆಗೆ ಹೋಗಿ ಶರಣಾಗಿದ್ದಾನೆ. ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ತಾಲೂಕಿನ ಯಡೋಗ ಗ್ರಾಮದಲ್ಲಿ ಈ ಪ್ರಕರಣ ನಡೆದಿದೆ.
ಅರ್ಪಣಾ ರಾಜಕುಮಾರ ಕುಂದೇಕರ (22) ಕೊಲೆಯಾದ ದುರ್ದೈವಿ. ಈಕೆಯ ಪತಿ ರಾಜಕುಮಾರ ಕುಂದೇಕರ ಕೊಲೆ ಆರೋಪಿ. ಕ್ಷುಲ್ಲಕ ಕಾರಣಕ್ಕೆ ಹೆಂಡತಿಗೆ ಚಾಕು ಇರಿದು ಹತ್ಯೆ ಮಾಡಿದ ಬಳಿಕ ಈತ ಹಳಿಯಾಳ ಪೊಲೀಸರಿಗೆ ಶರಣಾಗಿದ್ದಾನೆ.
ಐದು ವರ್ಷಗಳ ಹಿಂದೆ ಮದುವೆಯಾಗಿದ್ದ ಈ ದಂಪತಿಗೆ ಮೂರು ವರ್ಷದ ಗಂಡು ಹಾಗೂ 8 ತಿಂಗಳ ಹೆಣ್ಣು ಮಗುವಿದೆ. ಆದರೆ ಈಗ ತಂದೆಯ ಈ ದುಷ್ಕೃತ್ಯದಿಂದಾಗಿ ಮಕ್ಕಳು ತಾಯಿಯನ್ನು ಕಳೆದುಕೊಂಡಿದ್ದಾರೆ.
ಸ್ಥಳಕ್ಕೆ ಹಳಿಯಾಳ ಸಿಪಿಐ ರಂಗನಾಥ ನೀಲಮ್ಮನವರ, ಪಿಎಸ್​ಐ ಶಿವಾನಂದ ನಾವದಗಿ ಮುಂತಾದವರು ಭೇಟಿ ನೀಡಿದ್ದು, ಹಳಿಯಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಹಿಜಾಬ್​ ಕಿಚ್ಚು ಹೊತ್ತಿಸಿದವರ ಶಕ್ತಿಪ್ರದರ್ಶನ: ಅದೇ ಆರು ವಿದ್ಯಾರ್ಥಿನಿಯರಿಂದ ಮತ್ತೆ ತಕರಾರು
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen + 18 =
Remember me
